ಬುಧವಾರ, ಡಿಸೆಂಬರ್ 24, 2025
ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ.01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾಳಮ್ಮ ಬೀದಿಯ ಕಾಳಮ್ಮ ಕಮಠೇಶ್ವರ ದೇವಸ್ಥಾನ ಸಭಾಂಗಣÀದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆ ಅಧ್ಯಕ್ಷ ಚಂದ್ರಕಾAತ ಸ.ಸೋನಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹೊಸಪೇಟೆಯ ಶ್ರೀ ಅಕ್ಷಯ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ವೆಂಕಟೇಶ್ ಬಡಿಗೇರ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅಮಾತಿ ಬಸವರಾಜ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ