ಸೋಮವಾರ, ಡಿಸೆಂಬರ್ 1, 2025
ಡಿ.02 ರಂದು ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ ಕುರಿತು ಒಂದು ದಿನದ ಜಾಗೃತಿ ಕಾರ್ಯಗಾರ
ಬಳ್ಳಾರಿ,ಡಿ.01(ಕರ್ನಾಟಕ ವಾರ್ತೆ):
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಎಂಎಸ್‌ಎAಇ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸಿಸುವುದು (ಆರ್‌ಎಎಂಪಿ) ಯೋಜನೆಯಡಿ ಡಿ.02 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಂಟೋನ್‌ಮೆAಟ್‌ನ ವೀರಶೈವ ವಿದ್ಯಾವರ್ಧಕ ಸಂಘದ ಅಲಂ ಕರಿಬಸಪ್ಪ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು, ಪೋಷಿಸಲು ಹಾಗೂ ಸ್ಥಳೀಯ ಮಟ್ಟದ ಎಂಎಸ್‌ಎAಇ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ (ಬಿಡಿಎಸ್‌ಪಿ) ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರÀದಲ್ಲಿ ಉದ್ಯಮಿದಾರರಿಗೆ ವ್ಯಾಪರ ಅವಕಾಶಗಳ ಕುರಿತು ಮಾರ್ಗದರ್ಶನ ವ್ಯವಹಾರ ಯೋಜನೆ ಸಿದ್ದತೆಗೆ ಸಹಕಾರ, ತಂತ್ರಜ್ಞಾನದ ಉನ್ನತೀಕರಣ ಮತ್ತು ಗುಣಮಟ್ಟದ ಪ್ರಮಾಣೀಕರಣಕ್ಕೆ ಬೆಂಬಲ, ವಿಳಂಬಿತ ಪಾವತಿಗಳ ಸಮಸ್ಯೆಗಳ ಬಗ್ಗೆ ಹಾಗೂ ಬ್ರಾಂಡಿAಗ್, ರಫ್ತು ಪ್ರಚಾರದ ಕುರಿತು ಜಾಗೃತಿ ಮೂಡಿಸಲಾಗುತ್ತದೆ.
ಆಸಕ್ತಿಯುಳ್ಳ ಉದ್ದಿಮೆದಾರರು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ