ಗುರುವಾರ, ಡಿಸೆಂಬರ್ 4, 2025

ಬಳ್ಳಾರಿ: ಡಿ.07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ | 9339 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಡಿ.07 ರಂದು (1ನೇ ಮತ್ತು 2ನೇ ಅಧಿವೇಶನ) ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025 ನಡೆಯಲಿದ್ದು, ಮೊದಲ ಅಧಿವೇಶನದಲ್ಲಿ 2339 ಮತ್ತು ಎರಡನೇ ಅಧಿವೇಶನದಲ್ಲಿ 7000 ಅಭ್ಯರ್ಥಿಗಳು ಸೇರಿ ಒಟ್ಟು 9339 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ. ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಪರೀಕ್ಷೆ ನಡೆಯಲಿದ್ದು, ಮೊದಲ ಅಧಿವೇಶನ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 06 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಹ್ನ 02 ರಿಂದ ಸಂಜೆ 4.30 ರವರೆಗೆ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದು ಹೇಳಿದ್ದಾರೆ. ಪರೀಕ್ಷೆ ಪ್ರವೇಶ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ ಮತ್ತು ಯಾವುದೇ ವಿನಾಯಿತಿ ಇರುವುದಿಲ್ಲ. ಪರೀಕ್ಷಾ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಪರೀಕ್ಷಾ ಕಾರ್ಯವನ್ನು ಸುಗಮವಾಗಿ, ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಕ್ರಮವಹಿಸಲಾಗಿದೆ ಎಂದಿದ್ದಾರೆ. 20 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಬೆಂಚ್ ಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ. ಪೂರ್ವ ಮುದ್ರಿತ ಒಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನಃ ಬದಲಾಯಿಸುವುದು, ತಿದ್ದುವುದು, ಬಿಳಿ ಪ್ಲೂö್ಯಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲೂö್ಯಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ. ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟಾçನಿಕ್ ಉಪಕರಣಗಳು, ಸೈಡ್ ರೂಲುಗಳು, ಮಾರ್ಕರ್, ಲಾಗ್ ಟೇಬಲ್‌ಗಳು, ವೈಟ್ ಫ್ಲೂö್ಯಯಿಡ್‌ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂö್ಯಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶ ನೀಡಿದೆ. ಆನ್ ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು ದಿನ ಮುಂಚಿತವಾಗಿ ಸಂಬAಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರ ಸಲ್ಲಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ನಿಶಬ್ದತೆ, ಪರೀಕ್ಷಾ ಶಿಸ್ತು ಮತ್ತು ಗೌಪ್ಯತೆ ಕಾಪಾಡಿಕೊಳ್ಳಬೇಕು. ಅಭ್ಯರ್ಥಿಯು, ಪರೀಕ್ಷಾ ಸೂಚನೆ, ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾದರೆ ಅಥವಾ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅವರ ಮೇಲೆ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲು ಸೆಕ್ಷನ್ 144 ಮತ್ತು ಆ ವ್ಯಾಪ್ತಿಯ ಜೆರಾಕ್ಸ್, ಸೈಬರ್ ಕೆಫೆ, ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಆದೇಶ ಜಾರಿಗೊಳಿಸಲು ಕೋರಲಾಗಿದೆ. ನಗರದಲ್ಲಿಯೇ ಇರುವ 20 ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆಯ ಆರೆ ವೈದ್ಯಕೀಯ ಸಿಬ್ಬಂದಿಯವರು ಪರೀಕ್ಷಾ ಪ್ರಾರಂಭದ ಮುನ್ನ ಅಭ್ಯರ್ಥಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲು ಕ್ರಮ ವಹಿಸುವರು. ಪೊಲೀಸ್ ಇಲಾಖೆ ವತಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ