ಬುಧವಾರ, ಡಿಸೆಂಬರ್ 3, 2025
ಬಳ್ಳಾರಿ ಮಹಾನಗರ ಪಾಲಿಕೆ: ಡಿ.09 ರಂದು ಆಯವ್ಯಯ ಪೂರ್ವಭಾವಿ ಸಭೆ
ಬಳ್ಳಾರಿ, ಡಿ.03(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಗರದ ನಾಗರಿಕರು, ಸಂಪನ್ಮೂಲ ವ್ಯಕ್ತಿಗಳು, ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೋಂದಾಯಿತ ಸರ್ಕಾರೇತರ ಸಂಘ-ಸAಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ/ಸAಸ್ಥೆಗಳ ಪ್ರತಿನಿಧಿಗಳು ಆಗಮಿಸಿ ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಮುಂಗಡ ಆಯ-ವ್ಯಯ ತಯಾರಿಕೆಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು.
ಸಭೆಯು ಸಾಮಾನ್ಯ ಸಾರ್ವಜನಿಕ ಕುಂದು ಕೊರತೆ ಸಭೆಯಾಗಿರುವುದಿಲ್ಲ. ಬದಲಾಗಿ 2026-27ನೇ ಸಾಲಿಗೆ ನಗರದ ಅಭಿವೃದ್ಧಿಗೆ ಪೂರಕವಾಗಿ ಆಯ-ವ್ಯಯದಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಸೂಚಿಯನ್ನು ತಯಾರಿಸುವ ಸಭೆಯಾಗಿದ್ದು, ಸಾರ್ವಜನಿಕರು ನವೀನ, ಅಭಿವೃದ್ಧಿ ಮಾದರಿ, ಸಂಪನ್ಮೂಲ ಕ್ರೋಢಿಕರಣ ಅಳವಡಿಸಿಕೊಳ್ಳುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ