ಗುರುವಾರ, ಡಿಸೆಂಬರ್ 11, 2025
ಡಿ.13 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 11 ಕೆ.ವಿ ಫೀಡರ್ ನ ಸ್ಟೇಷನ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಡಿ.13 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎಫ್-06 ಮತ್ತು ಎಫ್-10 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-06 ಫೀಡರ್ ಮಾರ್ಗದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಶ್ರೀಧರಗಡ್ಡೆ, ಜಿಲ್ಲಾ ಕೋರ್ಟ್ ಸಂಕೀರ್ಣ.
ಎಫ್-10 ಫೀಡರ್ ಮಾರ್ಗದ ಅಶೋಕ ನಗರ, ಅವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ