ಗುರುವಾರ, ಡಿಸೆಂಬರ್ 18, 2025

ಡಿ.20 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಡಿ.18(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗÀ 1 ಮತ್ತು 2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಕಾರ್ಯನಿರ್ವಾಹಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಡಿ.20 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಚೇರಿ ಹಿಂಭಾಗದ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬAಧಿತ ಕುಂದು ಕೊರತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ