ಶುಕ್ರವಾರ, ಡಿಸೆಂಬರ್ 19, 2025
ಡಿ.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ನ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿ.21 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೇಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್ ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂಭಾಗ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ