ಮಂಗಳವಾರ, ಡಿಸೆಂಬರ್ 16, 2025
ಡಿ.23 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಬಳ್ಳಾರಿ,ಡಿ.16(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಜನನ-ಮರಣ ನಾಗರಿಕ ನೋಂದಣಿ ಪದ್ಧತಿ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಡಿ.23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ