ಸೋಮವಾರ, ಡಿಸೆಂಬರ್ 22, 2025

ಬಳ್ಳಾರಿ: ಪಲ್ಸ್ ಪೋಲಿಯೋ ಮೊದಲ ದಿನ ಶೇ.96 ರಷ್ಟು ಸಾಧನೆ

ಬಳ್ಳಾರಿ,ಡಿ.22(ಕರ್ನಾಟಕ ವಾರ್ತೆ): ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನದ ಅಡಿಯಲ್ಲಿ ಎಲ್ಲಾ ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಡಿಸೆಂಬರ್ 21 ಪೋಲಿಯೋ ಭಾನುವಾರದಂದು ಜಿಲ್ಲೆಯ ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿ ತಾಲ್ಲೂಕಗಳಲ್ಲಿ ಬೂತ್ ದಿನದಂದು (ಡಿ.21) ಒಟ್ಟು 19,8,136 ಮಕ್ಕಳಲ್ಲಿ 19,1,995 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.96.9% ರಷ್ಟು ಸಾಧನೆ ಮಾಡಲಾಗಿದೆ. ಉಳಿದ 6,141 ಮಕ್ಕಳಿಗೆ ಡಿ.24 ರವರೆಗೆ ನಡೆಯುವ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ ರಮೇಶ್‌ಬಾಬು ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಮಕ್ಕಳಿಗೂ ಲಸಿಕೆ ಹಾಕುವ ದಿಶೆಯಲ್ಲಿ 376 ವಲಸೆ ಹಾಗೂ ಕ್ಲಿಷ್ಟಕರ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಅಂತಹ ಸ್ಥಳಗಳಲ್ಲಿ ಲಸಿಕೆ ಹಾಕಲು 267 ತಂಡಗಳನ್ನು ಸಿದ್ದಗೊಳಿಸಲಾಗಿತ್ತು. 920 ಬೂತ್‌ಗಳು 895 ಮನೆ ಬೇಟಿ ನೀಡುವ ತಂಡಗಳು ಹಾಗೂ ಸಂತೆ-ಮಾರುಕಟ್ಟೆ, ಬಸ್ ನಿಲ್ದಾಣ, ಮತ್ತು ಇತರೆ ಜನ ಹೆಚ್ಚು ಸೇರುವ ಸ್ಥಳಗಳಲ್ಲಿ ಲಸಿಕೆ ಹಾಕಲು 49 ತಂಡಗಳು ಮತ್ತು ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳ, ಕುರಿಹಟ್ಟಿ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 15 ಸಂಚಾರಿ ತಂಡಗಳ ಮೂಲಕ ಸಾಧನೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯೊAದಿಗೆ ನರ್ಸಿಂಗ್ ಕಾಲೇಜ್ ಹಾಗೂ ಸ್ವಯಂ ಸೇವಕರು ಪೋಲಿಯೋ ವ್ಯಾಕ್ಸಿನೇಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ 188 ಮೇಲ್ವಿಚಾರಕರು ಹಾಗೂ ಜಿಲ್ಲೆಯ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಕಾಂiÀiðನಿರ್ವಹಿಸಿದ್ದಾರೆ. ಜಿಲ್ಲೆಯಲ್ಲಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಇವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತದ ಸಂಪೂರ್ಣ ಬೆಂಬಲದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಮತ್ತು ಬೆಂಬಲದೊAದಿಗೆ ಈ ಗುರಿಯನ್ನು ಸಾಧಿಸಲಾಗಿದೆ. ಇದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ಪರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ