ಸೋಮವಾರ, ಡಿಸೆಂಬರ್ 22, 2025

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಬಳ್ಳಾರಿ,ಡಿ.22(ಕರ್ನಾಟಕ ವಾರ್ತೆ): ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 24 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಡಿ.24 ರಂದು ಬೆಳಿಗ್ಗೆ ಬೆಂಗಳೂರಿನ ಹೆಚ್‌ಎಎಲ್‌ನ ಏರ್‌ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಬೆಳಿಗ್ಗೆ 11.45 ಕ್ಕೆ ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಏಲಿಪ್ಯಾಡ್ ಗೆ ತಲುಪಿ, ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಆಗಮಿಸುವರು. ನಂತರ ಮಧ್ಯಾಹ್ನ 12.30 ಗಂಟೆಗೆ ಸಿರುಗುಪ್ಪ ರಸ್ತೆ ಮಾರ್ಗದ ಸಿಂಧಿಗೇರಿ ಗ್ರಾಮದ ಬಳಿಯ ಮೌಂಟ್ ಕ್ಯಾಂಪಸ್ ನ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಅಲ್ಲಿಂದ ಮಧ್ಯಾಹ್ನ 02.30 ಗಂಟೆಗೆ ಹೊರಟು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಲೋಕಭವನಕ್ಕೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ