ಮಂಗಳವಾರ, ಡಿಸೆಂಬರ್ 23, 2025
ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಥಮ ವಷÀðದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ಪ್ರಥಮ ವಷÀðದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-02-2025 ಮತ್ತು ಅದರ ನಂತರ ಪ್ರಥಮ ವಷÀðದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳು ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವಷÀðದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜ.09 ಕೊನೆ ದಿನವಾಗಿದ್ದು, ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ