ಗುರುವಾರ, ಡಿಸೆಂಬರ್ 4, 2025

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ನಗರದ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಯಶವಂತ ಕುಮಾರ್ ಎನ್ನುವ 24 ವಷÀðದ ಯುವಕ ಜಾನಕಿ ಫ್ಯಾಕ್ಟರಿಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಡಿ.02 ರಂದು ಮನೆಯಿಂದ ಹೊರಗಡೆ ಹೋಗಿ ಮರಳಿ ಬಾರದೇ ಕಾಣೆಯಾಗಿದ್ದು, ಈ ಕುರಿತು ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.6 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಬಲ ಎದೆಯ ಮೇಲೆ ಗರುಡ ಪಕ್ಷಿಯ ಹಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಗ್ರೇ ಕಲರ್ ಟೀ ಶರ್ಟ್, ಬ್ಲಾಕ್ ಕಲರ್ ಜರ್ಕಿನ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಹಿಂದಿ ಭಾಷೆಗಳನ್ನು ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿ ನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಐ ಮೊ.9480803046 ಪಿಎಸ್‌ಐ ಮೊ.9480803082 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ