ಶುಕ್ರವಾರ, ಡಿಸೆಂಬರ್ 5, 2025
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಡಿ.05(ಕರ್ನಾಟಕ ವಾರ್ತೆ):
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2025-26ನೇ ಸಾಲಿನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾ ಕೇತ್ಷಗಳಲ್ಲಿ ಅಭ್ಯಾಸ ಮಾಡಿತ್ತಿರುವ 16 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
*ಸೂಚನೆ:*
ಶಿಷ್ಯವೇತನದ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿಗಳ ಮಾಹಿತಿಯ ಬಗ್ಗೆ ಅಕಾಡೆಮಿ ಪೇಸ್ ಬುಕ್ (facebook.com/karnatakasangeetanrutyaacdemy) ಅಥವಾ ಅಕಾಡೆಮಿಯ ವೈಬ್‌ಸೈಟ್ (Sangeetanrityaacademy.karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿಯನ್ನು ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.
ಅಭ್ಯರ್ಥಿಗಳು ಸಂದರ್ಶನದ ಬದಲಿಗೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ವಿಡಿಯೋ ಚಿತ್ರೀಕರಿಸಿ ಪೆನ್ ಡ್ರೆöÊವ್‌ನಲ್ಲಿ ಅಳವಡಿಸಿ ಪೆನ್ ಡ್ರೆöÊವ್‌ನೊಂದಿಗೆ ಅರ್ಜಿಯನ್ನು ರಿಜಿಸ್ಟಾçರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.
ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ ಡ್ರೆöÊವ್ ನ್ನು ತೀರ್ಪುಗಾರರು ಪರಿಶೀಲಿಸಿ ಆಯಾ ಕಲಾ ಪ್ರಕಾರದ ಅನುಗುಣವಾಗಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಡಿ.20 ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ ತಿರ್ಮಾನ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್.ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ