ಶನಿವಾರ, ಡಿಸೆಂಬರ್ 20, 2025

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ ಸರ್ವರೂ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ: ಎಸಿ ರಾಜೇಶ್ ಹೆಚ್.ಡಿ

ಬಳ್ಳಾರಿ,ಡಿ.20(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶನಿವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಧರು, ಸಂತರು, ಮಹನೀಯರು ಕೇವಲ ಆಯಾ ಸಮುದಾಯಕ್ಕೆ ಸೀಮಿತರಾದವರಲ್ಲ; ಬದಲಾಗಿ ಸಮಾಜದ ಏಳ್ಗೆಗೆ ಶ್ರಮಿಸಿದವರು. ಹಾಗಾಗಿ ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು. ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅರಿತು, ತಮ್ಮ ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ವೇದಿಕೆ ಕಾರ್ಯಕ್ರಮವನ್ನು ಅಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ಸಮುದಾಯದ ಮುಖಂಡರ ಕೋರಿಕೆಯಂತೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ತೀರ್ಮಾನಿಸಿ ಆಯೋಜಿಸಲಾಗುವುದು ಎಂದರು. ಶಿಷ್ಠಾಚಾರದAತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಇತರೆ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಗೀನಗಾಯನ, ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ತೋಟಗಾರಿಕೆ, ಡಿಡಿಪಿಯು ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ