ಸೋಮವಾರ, ಡಿಸೆಂಬರ್ 15, 2025
ಸಿರುಗುಪ್ಪ: ಬಿಡಾಡಿ ದನಕರುಗಳನ್ನು ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಿ
ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ):
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಬಿಡಾಡಿ ದನಕರುಗಳ ಮಾಲೀಕರು ತಮ್ಮ ಮನೆಯಲ್ಲಿಯೇ ಕಟ್ಟಿಕೊಂಡು ಪೋಷಿಸಬೇಕು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತ ಗಂಗಾಧರ ಅವರು ತಿಳಿಸಿದ್ದಾರೆ.
ಸಿರುಗುಪ್ಪ ಪಟ್ಟಣದಲ್ಲಿ ಬಿಡಾಡಿ ದನಕರುಗಳ ಹಾವಳಿ ಹೆಚ್ಚಾಗಿದ್ದು, ರಸ್ತೆ ಸೇರಿದಂತೆ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಹಾಗಾಗಿ ಮಾಲೀಕರು ತಮ್ಮ ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಬೇಕು.
ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ