ಶನಿವಾರ, ಡಿಸೆಂಬರ್ 6, 2025

ಕುರುಗೋಡು ಪುರಸಭೆ: ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ

ಬಳ್ಳಾರಿ,ಡಿ.06(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಕುರುಗೋಡು ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮವಹಿಸಬೇಕು. ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವ ಮೂಲಕ ಕುರುಗೋಡು ಪುರಸಭೆ ಕಚೇರಿಗೆ ಸಹಕರಿಸಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ನಾಯಿಗಳು ವಾಸಮಾಡಲು ಅವಕಾಶ ಮಾಡಿಕೊಟ್ಟಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿAದಲೇ ವಸೂಲು ಮಾಡಲಾಗುವುದು. ಆದೇಶ ಉಲ್ಲಂಘಿಸಿದಲ್ಲಿ ನ್ಯಾಯಾಲಯದ ಸೂಚನೆಯಂತೆ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮವಹಿಸಲಾಗುವುದು. ಬೀದಿ ನಾಯಿಗಳನ್ನು ದತ್ತು ನೀಡುವ, ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ದತ್ತು ಪಡೆಯಲು ಇಚ್ಛಿಸುವ ವ್ಯಕ್ತಿ, ಸಂಸ್ಥೆಗಳಿಗೆ ನಿಯಮಾನುಸಾರ ದತ್ತು ನೀಡಲು ಕ್ರಮ ವಹಿಸಲಾಗುತ್ತದೆ. ಇದಕ್ಕೆ ಸಂಬAಧಿಸಿದAತೆ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು. ಬೀದಿ ನಾಯಿಗಳ ನಿಯಂತ್ರಣ ಮತ್ತು ಆಶ್ರಯ ತಾಣಕ್ಕೆ ಸಾಗಿಸುವ ಕುರಿತು ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9731076778 ಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ