ಮಂಗಳವಾರ, ಡಿಸೆಂಬರ್ 23, 2025
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಬಳ್ಳಾರಿ ಪ್ರವಾಸ
ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ):
ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ ಅವರು ಡಿ.24 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಡಿ.24 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11.45 ಕ್ಕೆ ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಹೆಲಿಪ್ಯಾಡ್ ಗೆ ಆಗಮಿಸುವರು.
ಬಳಿಕ ಮಧ್ಯಾಹ್ನ 12 ರಿಂದ 1.30 ಗಂಟೆಯವರೆಗೆ ಸಿರುಗುಪ್ಪ ರಸ್ತೆಯ ಮೌಂಟ್ ವ್ಯೂ ಕ್ಯಾಂಪಸ್ ನಲ್ಲಿ ಏರ್ಪಡಿಸಿರುವ ಕಿಷ್ಕಿಂದ ವಿದ್ಯಾಲಯದ 1ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 02.30 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ