ಸೋಮವಾರ, ಡಿಸೆಂಬರ್ 8, 2025
ಬಳ್ಳಾರಿ: ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಮಣ್ಣು ದಿನಾಚರಣೆ | ಮಣ್ಣು ರಕ್ಷಣೆಗೆ ಸಾವಯವ ಗೊಬ್ಬರ ಬಳಸಿ: ಡಾ.ರಮೇಶ್ ಬಿ.ಕೆ ಸಲಹೆ
ಬಳ್ಳಾರಿ,ಡಿ.08(ಕರ್ನಾಟಕ ವಾರ್ತೆ):
ಪ್ರಸ್ತುತದಲ್ಲಿ ಮಣ್ಣು ಮಲಿನವಾಗುತ್ತಿದ್ದು, ಇದರ ಸಂರಕ್ಷಣೆಗೆ ಸಾವಯವ ಗೊಬ್ಬರ ಮತ್ತು ಜೈವಿಕ ಗೊಬ್ಬರಗಳ ಬಳಕೆ ಮಾಡಬೇಕು. ಇದರಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬಹುದು ಎಂದು ಹಗರಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ.ರಮೇಶ್ ಬಿ.ಕೆ ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಹಗರಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ “ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು” ಎಂಬ ಧ್ಯೇಯವಾಕ್ಯದಡಿ ಶನಿವಾರ ಆಯೋಜಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2014 ಡಿಸೆಂಬರ್ 5ರಂದು ಮೊದಲ ಬಾರಿಗೆ ವಿಶ್ವ ಮಣ್ಣು ದಿನವನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಆಚರಿಸಲಾಯಿತು. ಪ್ರಪಂಚದಾದ್ಯAತ ಜನರಿಗೆ ಮಣ್ಣಿನ ಸಂರಕ್ಷಣೆ ಹಾಗೂ ಮಣ್ಣಿನ ಗುಣ-ಧರ್ಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಪಾಲಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರದಲ್ಲಿ ಪ್ರತಿಶತ 60ರಷ್ಟು ಜೀವರಾಶಿಗಳ ಯೋಗಕ್ಷೇಮಕ್ಕೆ ಮಣ್ಣು ಪ್ರಮುಖ ಅಡಿಪಾಯವಾಗಿದೆ. ಮಣ್ಣಿನ ಅಮೂಲ್ಯವಾದ ಗುಣವನ್ನು ಗಮನದಲ್ಲಿಟ್ಟುಕೊಂಡು ಮಣ್ಣು ಹಾಗೂ ಮಣ್ಣಿನ ಆರೋಗ್ಯವನ್ನು ಸಂರಕ್ಷಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಮಣ್ಣು ಒಂದು ಪ್ರಮುಖ ಸಂಪನ್ಮೂಲವಾಗಿದೆ. ಇದು ಆಹಾರ ಉತ್ಪಾದನೆ, ನೀರು ಶುದ್ಧೀಕರಣ ಮತ್ತು ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ನಗರ ನಿರ್ಮಾಣಕ್ಕೆ ಮಣ್ಣಿನ ಸಂರಕ್ಷಣೆ ಬಹು ಮುಖ್ಯವಾಗಿದ್ದು, ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅಷ್ಟೇ ಮುಖ್ಯವಾಗಿದೆ ಎಂದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ಮಣ್ಣು ವಿಜ್ಞಾನಿ ಡಾ.ರವಿ ಎಸ್ ಅವರು ಮಾತನಾಡಿ, ಆಹಾರ ಉತ್ಪಾದನೆ, ಉತ್ಪಾದಕತೆಗೆ ಮತ್ತು ಸುಸ್ಥಿರ ಭವಿಷ್ಯವನ್ನು ಕಾಪಾಡಿಕೊಳ್ಳಲು ಮಣ್ಣು ಮತ್ತು ಮಣ್ಣಿನ ಆರೋಗ್ಯ ಸುರಕ್ಷ ಮಾಡುವುದು ಅಗತ್ಯವಾಗಿದೆ ಎಂದು ಮಣ್ಣಿನ ಸಂರಕ್ಷಣೆಯ ಕುರಿತು ವಿವರವಾಗಿ ತಿಳಿಸಿದರು.
ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಗಿರೀಶ್ ಅವರು ಮಾತನಾಡಿ, ಮಿತಿ ಮೀರಿದ ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂದುತ್ತಿದೆ. ರೈತರು ಸಾವಯವ ಕೃಷಿಯ ಕಡೆ ಒತ್ತು ನೀಡಿ ಮಣ್ಣಿನ ಆರೋಗ್ಯ ಕಾಪಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಹಗರಿ ಕೃಷಿ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿಗಳಾದ ಡಾ.ಗೋವಿಂದಪ್ಪ ಎಂ.ಆರ್., ಡಾ.ಮಂಜುನಾಥ್, ಎನ್.ಡಾ.ಬಸವರಾಜ್, ಡಾ.ನಾಗೇಶ್ ಬಸಪ್ಪ, ಡಾ.ಆನಂದ್ ಹಾಗೂ ಡಾ.ಜಾನವಿ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು, ಇತರರು ಉಪಸ್ಥಿತರಿದ್ದರು.
ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ.ರಾಜೇಶ್ವರಿ ಮತ್ತು ಕೃಷಿ ವಿಸ್ತರಣಾ ವಿಜ್ಞಾನಿ ಡಾ.ನವೀನ್ ಕುಮಾರ್.ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ