ಸೋಮವಾರ, ಡಿಸೆಂಬರ್ 15, 2025

ಮಾನವ- ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ ಅಗತ್ಯ: ಡಾ.ಕೆ.ಎನ್ ಬಸವರಾಜ

ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ): ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ- ವನ್ಯಜೀವಿಗಳ ಸಂಘರ್ಷ ತಡೆಗಟ್ಟಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ಹೇಳಿದರು. ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಕಾಯ್ದೆ ಹಾಗೂ ಅಪರಾಧಗಳ ವೈಜ್ಞಾನಿಕ ತನಿಖೆಗೆ ಸಂಬAಧಿಸಿದAತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಸಂಡೂರಿನ ಗುರುಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಾಗಾರದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಹಾಗೂ ಸರ್ಕಾರಿ ನೌಕರರಿಗೆ ಸಂಬAಧಿಸಿದ ಸೇವಾ ನಿಯಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಸಹಾಯಕ ನಿರ್ದೇಶಕ ಶೇಷಾದ್ರಿ, ಆರೋಗ್ಯ ಇಲಾಖೆಯ ಸೂಪರಿಂಟೆAಡೆAಟ್ ವೆಂಕಟೇಶ್, ಮತ್ತು ನಿವೃತ್ತ ಡಿಸಿಎಫ್ ಸಿಎಂ ಅಮ್ಮಣ್ಣವರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಶುಸಂಗೋಪನೆಯ ಇಲಾಖೆಯ ಉಪನಿರ್ದೇಶಕ ಡಾ.ಎಸ್ ಉಪ್ಪಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ