ಗುರುವಾರ, ಡಿಸೆಂಬರ್ 11, 2025

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬಳ್ಳಾರಿ,ಡಿ.11(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆ ಮತ್ತು ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ವಿವಿಧ ಸೌಲಭ್ಯಗಳಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ. ಭೌತಿಕ ಮತ್ತು ಆರ್ಥಿಕ ಗುರಿ ನಿಗದಿ ಪಡಿಸಿದ್ದು, ಈ ಯೋಜನೆಗಳಿಗೆ ಮಹಿಳಾ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ