ಗುರುವಾರ, ಡಿಸೆಂಬರ್ 4, 2025

ಬಳ್ಳಾರಿ ಮಹಾನಗರ ಪಾಲಿಕೆ: ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಬಳ್ಳಾರಿ ಮಹಾನಗರ ಪಾಲಿಕೆಯ ಕಚೇರಿಗೆ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಿAದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕ್ರಮವಹಿಸಬೇಕು ಎಂದು ಅವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ