ಮಂಗಳವಾರ, ಡಿಸೆಂಬರ್ 2, 2025

ಬಳ್ಳಾರಿ: ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ಬಿ.ಎಸ್.ಸುರೇಶ್ | ಸರ್ಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವು

ಬಳ್ಳಾರಿ,ಡಿ.02(ಕರ್ನಾಟಕ ವಾರ್ತೆ): ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ನಗರಾಭಿವೃದ್ಧಿ ಇಲಾಖೆಗೆ ಸಂಬAಧಿಸಿದAತೆ ಏರ್ಪಡಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಪಾರ್ಕ್, ರಸ್ತೆ ಮತ್ತು ಸರ್ಕಾರಿ ಜಾಗದ ಒತ್ತುವರಿಯಾಗಿ ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ, ಅಂತಹ ಒತ್ತುವರಿ ಪ್ರಕರಣಗಳನ್ನು ಪತ್ತೆ ಮಾಡಿ ಒಂದು ತಿಂಗಳೊಳಗಾಗಿ ಆ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರಿ ಜಾಗವನ್ನು ಭೂಗಳ್ಳರಿಂದ ರಕ್ಷಿಸಿಕೊಳ್ಳಲು ಅನುವಾಗುವ ರೀತಿಯಲ್ಲಿ ನ್ಯಾಯಾಲಯಗಳಲ್ಲಿ ವಾದ ಮಂಡಿಸಲು ಸಮರ್ಥರಿರುವ ವಕೀಲರನ್ನು ನೇಮಕ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. *ಅಧಿಕಾರಿಗಳ ಹೊಣೆ:* ನಗರದೆಲ್ಲೆಡೆ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಕಲುಷಿತ ನೀರು ಪೂರೈಕೆ ಪ್ರಕರಣಗಳು ಕಂಡುಬAದರೆ ಅದಕ್ಕೆ ಸಂಬAಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಬಿ.ಎಸ್.ಸುರೇಶ್ ಅವರು ಎಚ್ಚರಿಕೆ ನೀಡಿದರು. *ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸೂಚನೆ:* ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಗಮನಹರಿಸಬೇಕು. ಕಟ್ಟುನಿಟ್ಟಾಗಿ ವಾಣಿಜ್ಯ ಕಟ್ಟಡಗಳಿಂದ ತೆರಿಗೆ ವಸೂಲು ಮಾಡಬೇಕು. ಅತಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ವಾಣಿಜ್ಯ ಮತ್ತು ಕಟ್ಟಡ ಪರವಾನಗಿಯನ್ನು ತ್ವರಿತವಾಗಿ ವಿತರಣೆ ಮಾಡಬೇಕು ಎಂದು ಸಚಿವರು ಸೂಚಿಸಿದರು. ಅಮೃತ್ 2.0 ಯೋಜನೆಯಡಿ ಉದ್ಯಾನಗಳು ಮತ್ತು ಕೆರೆಗಳನ್ನು ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಖಾತಾ ಅಭಿಯಾನವನ್ನು ಇನ್ನಷ್ಟು ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು. ಪ್ರತಿಯೊಬ್ಬ ಅಧಿಕಾರಿಯೂ ವಾರ್ಡ್ ಗಳಿಗೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಂಡುಕೊಳ್ಳಬೇಕು. ಹೀಗೆ ಯಾವ ವಾರ್ಡಿಗೆ ಭೇಟಿ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಯುಕ್ತರನ್ನು ಒಳಗೊಂಡ ವಾಟ್ಸಪ್ ಗ್ರೂಪ್ ಆರಂಭಿಸಬೇಕು ಮತ್ತು ಆಯಾ ವಾರ್ಡ್ ನ ಜನಪ್ರತಿನಿಧಿಗಳನ್ನು ಸ್ಥಳಕ್ಕೆ ಕರೆದೊಯ್ಯಬೇಕು ಎಂದು ಸೂಚನೆ ನೀಡಿದರು. ಬೀದಿ ನಾಯಿ ನಿಯಂತ್ರಣಕ್ಕೆ ಸಂತಾನ ನಿಯಂತ್ರಣ ಲಸಿಕೆ ಹಾಕಿಸಬೇಕು ಮತ್ತು ಬಿಡಾಡಿ ದನಗಳನ್ನು ಗೋಶಾಲೆಗೆ ಹಾಕಬೇಕು. ಇಂದಿರಾ ಕ್ಯಾಂಟೀನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಸಚಿವ ಬೈರತಿ ಸುರೇಶ್ ಸೂಚನೆ ನೀಡಿದರು. *ಮಾಸ್ಟರ್ ಪ್ಲಾನ್ ಗೆ ಸೂಚನೆ:* ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಆದಷ್ಟೂ ಬೇಗ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಬೇಕು. 127 ಕೋಟಿ ರೂ. ವೆಚ್ಚದಲ್ಲಿ ಎಂಜಿಎನ್ ವಿವೈ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅಲ್ಲೀಪುರ ಕೆರೆ ಮತ್ತು ಬಂಡಿಹಟ್ಟಿ ಕೆರೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರದಿಂದ 200 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಕಳೆದ ಆಗಸ್ಟ್ನಲ್ಲಿ 14.57 ಕೋಟಿ ರೂ. ವೆಚ್ಚದ 131 ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಕೆಲಸ ಮಾತ್ರ ಪ್ರಾರಂಭಿಸಿಲ್ಲ;ಏಕೆ? ಇನ್ನು 10 ದಿನಗಳೊಳಗಾಗಿ ಕಾರ್ಯಾದೇಶ ನೀಡಿ, 11 ದಿನದಂದು ಕೆಲಸ ಆರಂಭಿಸಬೇಕು. ಇಲ್ಲದಿದ್ದರೆ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು. ನಮ್ಮ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕಾಮಗಾರಿಗಳಿದೂ ಒತ್ತು ನೀಡಿದ್ದು, ಸುಮಾರು 200 ಕೋಟಿ ರೂ. ಅಧಿಕ ಅನುದಾನ ನೀಡಿದೆ. ಆದರೂ ಅಧಿಕಾರಿಗಳು ಸಮರ್ಪಕವಾಗಿ ಬಳಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು, ದೇವರು ವರ ಕೊಟ್ಟರೂ ಪೂಜಾರಿ ವರ ನೀಡುತ್ತಿಲ್ಲ ಎಂಬ ಗಾದೆ ಪ್ರಸ್ತಾಪಸಿದರು. 15ನೇ ರಾಜ್ಯ ಹಣಕಾಸು ಯೋಜನೆಯ ವೈಯಕ್ತಿಕ ಸೌಲಭ್ಯದಡಿ ಫಲಾನುಭವಿಗಳಿಗೆ ಏಕೆ ಸೌಲಭ್ಯ ನೀಡಿಲ್ಲ, ನಗರ ವ್ಯಾಪ್ತಿಯಲ್ಲಿ ಬೋರ್‌ವೆಲ್, ಮೋಟಾರ್ ಪಂಪ್ ಅಳವಡಿಕೆಗೆ ರೂ.35 ಲಕ್ಷ ಅನುದಾನವಿದ್ದು, ಏಕೆ ಖರ್ಚು ಮಾಡಿಲ್ಲ? ಪಾಲಿಕೆಯ ಸದಸ್ಯರೊಬ್ಬರು ತಮ್ಮ ವಾರ್ಡ್ನಲ್ಲಿ ಬೋರ್‌ವೆಲ್ ಅಳವಡಿಕೆಗಾಗಿ ಎರಡು ವರ್ಷಗಳಿಂದ ಮನವಿ ಮಾಡುತ್ತಾರೆ. ಏಕೆ ಅಳವಡಿಸಲಾಗುತ್ತಿಲ್ಲ? ಅದೇರೀತಿಯಾಗಿ ನಗರದಲ್ಲಿ ಉದ್ಯಾನವನ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿದೂ ಅನುದಾನವಿದೆ. ಏಕೆ ಬಳಸುತ್ತಿಲ್ಲ? ಎಂದು ಸಂಬAಧಿಸಿದ ಅಧಿಕಾರಿಯ ಮೇಲೆ ಸಚಿವರು ಗರಂ ಆದರು. ನಮ್ಮ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅನಧೀಕೃತ ಕಟ್ಟಡ, ಬಡಾವಣೆಗಳನ್ನು ಅಧಿಕೃತವಾಗಿಸಲು ಇ-ಖಾತಾ ಅಭಿಯಾನ ಆರಂಭಿಸಿದ್ದು, ವರ್ಷಕ್ಕಿಂತ ವರ್ಷ ತೆರಿಗೆ ಆದಾಯ ಹೆಚ್ಚಳಗೊಳ್ಳಬೇಕು ಎಂದು ಹೇಳಿದ ಸಚಿವರು, ಮಹಾನಗರ ಪಾಲಿಕೆಯ ವಾರ್ಷಿಕವಾರು ತೆರಿಗೆ ನಿಗದಿತ ಗುರಿ ತಲುಪುತ್ತಿದೆಯೇ? ನಗರದಲ್ಲಿ ಮನೆಗಳಿಗಿಂತ ವ್ಯಾಪಾರಕ್ಕಾಗಿ ಪರವಾನಿಗೆ ಪಡೆದ ವಾಣಿಜ್ಯ ಮಳಿಗೆಗಳ ತೆರಿಗೆ ಕಡ್ಡಾಯವಾಗಿ ಪಾವತಿಸುವಂತೆ ಸೂಚಿಸಬೇಕು. ಇಲ್ಲದಿದ್ದಲ್ಲಿ ಬಡ್ಡಿ, ಚಕ್ರಬಡ್ಡಿ ಒಳಗೊಂಡು ಪಾವತಿಸಲು ಎಚ್ಚರಿಸಬೇಕು ಎಂದರು. ಮಹಾನಗರ ಪಾಲಿಕೆಯಲ್ಲಿ ಜನನ-ಮರಣ ಪ್ರಮಾಣ ಪತ್ರ ವಿತರಣೆ ಸಕಾಲದಲ್ಲಿ ಜರಗುತ್ತಿದೆಯೇ? ಎಂದು ಪ್ರಶ್ನಿಸಿದ ಅವರು, ಸಿಬ್ಬಂದಿ ಕೊರತೆ, ಖಾಲಿ ಇರುವ ಹುದ್ದೆಗಳ ಮಾಹಿತಿ ನೀಡಬೇಕು. ಈ ಕುರಿತು ಇಲಾಖೆಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗುವುದು ಎಂದರು. ಬಳಿಕ ಮಹಾನಗರ ಪಾಲಿಕೆಯಲ್ಲಿ ಕಸ ಗೂಡಿಸುವ ಯಂತ್ರ, ಜೆಟ್ಟಿಂಗ್ ಯಂತ್ರ ಇದೆಯೇ? ಎಂದು ವಿಚಾರಿಸಿದ ಅವರು, ಇದಕ್ಕೆ ಪಾಲಿಕೆ ಸದಸ್ಯರು ಹಳೆಯ ಮಾದರಿಯ ಯಂತ್ರಗಳಿದ್ದು, ಅವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಭೆಗೆ ಪ್ರಸ್ತಾಪಿಸಿದಾಗ, ಸಿಎಸ್‌ಆರ್ ಅನುದಾನದಡಿ ಆಧುನಿಕ ಯಂತ್ರಗಳನ್ನು ಖರೀದಿಸಿ ಪಾಲಿಕೆಗೆ ಹಸ್ತಾಂತರಿಸಲಾಗುವುದು ಎಂದು ಸಚಿವರ ಗಮನಕ್ಕೆ ತಂದರು. ಮುಖ್ಯಮಂತ್ರಿಯವರ ಕನಸಿನ ಯೋಜನೆಯಾದ ಬಡವರ ಹಸಿವು ನೀಗಿಸಲು ಆರಂಭಿಸಿದ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವಂತಿಲ್ಲ, ಯಾವುದೇ ಕ್ಯಾಂಟೀನ್ ಗಳ ಗುತ್ತಿಗೆದಾರರ ಬಿಲ್ ಪಾವತಿ ಬಾಕಿ ಇದ್ದಲ್ಲಿ ಕೂಡಲೇ ಅವುಗಳನ್ನು ಇತ್ಯರ್ಥಪಡಿಸಬೇಕು ಮತ್ತು ಕ್ಯಾಂಟೀನ್ ಗಳನ್ನು ಆರಂಭಿಸಬೇಕು ಎಂದು ಖಡಕ್ ಸೂಚನೆ ನೀಡಿದರು. ನಗರದ ಅಭಿವೃದ್ಧಿಯಲ್ಲಿ ಸದಸ್ಯರ ಪಾತ್ರವು ಅತೀ ಮುಖ್ಯವಾಗಿದ್ದು, ಅಧಿಕಾರಿಗಳು ಅವರೊಂದಿಗೆ ಸೌಹಾರ್ದತೆ ಹೊಂದುವ ಮೂಲಕ ಜನರ ಕಷ್ಟ-ಕಾರ್ಪಣ್ಯಗಳನ್ನು ಅರಿತು ಬೇಕಾದ ಸೌಲಭ್ಯ ಒದಗಿಸಬೇಕು ಎಂದು ಕಿವಿಮಾತು ಹೇಳಿದರು. ಸಭೆಯಲ್ಲಿ ಸಂಸದ ಈ.ತುಕಾರಾಮ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಉಪಮೇಯರ್ ಮೊಬಿನಾ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸೇರಿದಂತೆ ಪಾಲಿಕೆ ಸದಸ್ಯರು, ಬುಡಾ ಮತ್ತು ಪಾಲಿಕೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ