ಸೋಮವಾರ, ಡಿಸೆಂಬರ್ 15, 2025
ಅನಾಮಧೇಯ ಮೃತ ವೃದ್ಧೆಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ):
ತಾಲ್ಲೂಕಿನ ಮೋಕಾ ಗ್ರಾಮದ ಈಶ್ವರ ದೇವಸ್ಥಾನದ ಬಳಿ ಸುಮಾರು 70 ರಿಂದ 75 ವರ್ಷದ ಅನಾಮಧೇಯ ವೃದ್ಧೆಯು ಡಿ.09 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದು, ವಾರಸುದಾರರ ಮಾಹಿತಿ ಇರುವುದಿಲ್ಲ. ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ: 4.5 ಅಡಿ ಎತ್ತರ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ತಿಳಿ ಹಸಿರು ಬಣ್ಣದ ಸೀರೆ, ಆರೆಂಜ್ ಬಣ್ಣದ ಸ್ವೆಟರ್ ಧರಿಸಿರುತ್ತಾಳೆ.
ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ದೂ.08292-293228, ಮೊ.9480803050, ಪಿಡಿ ಹಳ್ಳಿ ವೃತ್ತ ಸಿಪಿಐ ದೂ.08392-270480, ಮೊ.9480803031 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ