ಗುರುವಾರ, ಡಿಸೆಂಬರ್ 11, 2025

ಕುರೇಕುಪ್ಪ ಪುರಸಭೆ: ಬೀದಿನಾಯಿ ದತ್ತು ಪಡೆದು ಪೋಷಿಸಲು ಆಸಕ್ತರಿದ್ದಲ್ಲಿ ಸಂಪರ್ಕಿಸಿ

ಬಳ್ಳಾರಿ,ಡಿ.11(ಕರ್ನಾಟಕ ವಾರ್ತೆ): ಕುರೇಕುಪ್ಪ ವ್ಯಾಪ್ತಿಯಲ್ಲಿನ ಬೀದಿನಾಯಿಗಳನ್ನು ದತ್ತು ಪಡೆದು ಪೋಷಣೆ ಮಾಡಲು ಹಾಗೂ ಆಶ್ರಣ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರಿದ್ದಲ್ಲಿ ಕೂಡಲೇ ಕುರೇಕುಪ್ಪ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ. ಬೀದಿನಾಯಿಗಳಿAದ ಸಾರ್ವಜನಿಕರಿಗೆ ಹಾಗೂ ಸಂಚರಿಸುವ ವಾಹನ ಸವಾರರಿಗೆ ಆಗುವ ತೊಂದರೆ ನಿಯಂತ್ರಿಸಲು ಪುರಸಭೆ ವತಿಯಿಂದ ಹಿಡಿದು ಅವುಗಳನ್ನು ಆಶ್ರಯತಾಣಕ್ಕೆ ಸಾಗಿಸಲಾಗುತ್ತಿದೆ. ಹಾಗಾಗಿ ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು, ಪ್ರಾಣಿಗಳ ಮೇಲೆ ದಯೆ ಇರುವವರು ಬೀದಿನಾಯಿಗಳನ್ನು ದತ್ತು ಪಡೆದು ಪೋಷಿಸಲು ಅಥವಾ ಆಶ್ರಣ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರು ಇದ್ದಲ್ಲಿ ಎನ್.ಜಿ.ಓ ಸಂಘ ಸಂಸ್ಥೆಗಳು, ಪ್ರಾಣಿದಯಾ ಸಂಘಗಳು ಹಾಗೂ ಇತರೆ ಪ್ರಾಣಿ ಪ್ರಿಯರು ಕುರೇಕುಪ್ಪ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ