ಶುಕ್ರವಾರ, ಡಿಸೆಂಬರ್ 5, 2025

ತೋಟಗಾರಿಕೆ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಡಿ.05(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2026-27 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮನರೇಗಾ ಯೋಜನೆಯಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. *ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ:* ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು. ಆಸಕ್ತ ರೈತ ಫಲಾನುಭವಿಗಳು ಈ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ