ಬುಧವಾರ, ಡಿಸೆಂಬರ್ 24, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ 36 ವಷÀðದ ಎ.ಕಿರಣ್ ಎನ್ನುವ ವ್ಯಕ್ತಿಯು ಡಿ.10 ರಂದು ನಗರದ ಬಿಮ್ಸ್ ಆಸ್ಪತ್ರೆ ಎದುರು ಇರುವ ಟಚಪ್ ಕಟಿಂಗ್ ಶಾಪ್‌ಗೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಮರಳಿ ಬಾರದೇ ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ ಅಂದಾಜು 5.6 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಗಡ್ಡ ಮೀಸೆ ಬಿಟ್ಟಿರುತ್ತಾನೆ. ಎಡಗೈ ಗೆ ಇಂಗ್ಲಿಷ್‌ನಲ್ಲಿ ಎ ಎಂದು ಹಚ್ಚೆ ಹಾಕಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಚಕ್ಸ್ ಶರ್ಟ್, ಬೂದಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, 9480803047, ಪಿಎಸ್‌ಐ ಮೊ.94808203085 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ