ಮಂಗಳವಾರ, ಡಿಸೆಂಬರ್ 23, 2025

ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಸೂಚನೆ | ಜಿಲ್ಲೆಯಲ್ಲಿ ಜನನ, ಮರಣ ನೋಂದಣಿಗೆ ವಿಳಂಬ ತೋರುವಂತಿಲ್ಲ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳು ಮತ್ತು ಜನನ, ಮರಣ ಘಟನೆ ವಿವರ ನೋಂದಣಿಯಲ್ಲಿ ವಿಳಂಬ ತೋರುವಂತಿಲ್ಲ, ಈ ಕುರಿತು ಸಂಬAಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜನನ ಮತ್ತು ಮರಣ ಘಟನೆ ವಿವರಗಳನ್ನು ನಿಗದಿತ ಅವಧಿಯೊಳಗೆ ತಪ್ಪದೇ ಮಾಹಿತಿ ನೋಂದಾಯಿಸಿಕೊAಡು, ಸಂಬAಧಿಸಿದ ಕುಟುಂಬದವರಿಗೆ ಪ್ರಮಾಣಪತ್ರ ವಿತರಣೆ ಮಾಡಬೇಕು. ಅವರನ್ನು ಕಚೇರಿಗಳಿಗೆ ಅಲೆದಾಡಿಸುವಂತಿಲ್ಲ ಎಂದು ತಿಳಿಸಿದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 125 ಜನನ, ಮರಣ ಘಟನೆ ವಿವರ ನೋಂದಣಿಯಲ್ಲಿ ವಿಳಂಬವಾಗಿದ್ದು, ಎಲ್ಲಾ ಘಟನೆಗಳನ್ನು ನಿಗಧಿತ ಸಮಯದಲ್ಲಿ ನೋಂದಣಿ ಮಾಡಲು ಸಂಬAಧಿಸಿದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅದೇರೀತಿಯಾಗಿ ಸಂಡೂರು ತಾಲ್ಲೂಕಿನ ತೋರಣಗಲ್ಲು, ಬಂಡ್ರಿ, ಚೋರನೂರು, ತಾರನಗರ ಮತ್ತು ಸಿರುಗುಪ್ಪ ತಾಲ್ಲೂಕಿನ ಕರೂರು ಸರ್ಕಾರಿ ಆಸ್ಪತೆಗಳಲ್ಲಿ ಜನನ ಮತ್ತು ಮರಣ ಘಟನೆಗಳ ವಿವರ ನೋಂದಣಿಯಲ್ಲಿ ವಿಳಂಬವಾಗಿರುವುದು ಕಂಡುಬAದಿದ್ದು, ಕಾರಣ ಕೇಳಿ ಸಂಬAಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರನ್ನು ಜನನ ಮತ್ತು ಮರಣ ಪ್ರಮಾಣಪತ್ರಕ್ಕಾಗಿ ಅಲೆದಾಡಿಸಬಾರದು. ಸರ್ಕಾರದ ಮಾರ್ಗಸೂಚಿಯಂತೆ 21 ದಿನ ಗಳ ಬದಲಾಗಿ 21 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಪ್ರಮಾಣ ಪತ್ರಗಳನ್ನು ಕುಟುಂಬಸ್ಥರಿಗೆ ನೀಡುವಲ್ಲಿ ಯಶ್ವಸಿಯಾಗಬೇಕು. ಅದೇರೀತಿಯಾಗಿ ಮರಣ ಘಟನೆ ಸಂಭವಿಸಿದಲ್ಲಿ ಮೂರು ದಿನದೊಳಗೆ ನಗರ ಸ್ಥಳೀಯ-ಸಂಸ್ಥೆಗಳ ಸಿಬ್ಬಂದಿ ಮನೆ ಭೇಟಿ ನಡೆಸಿ ಪೂರಕ ದಾಖಲೆ ಪಡೆದು ಪ್ರಮಾಣಪತ್ರ ವಿತರಿಸಬೇಕು ಎಂದು ತಿಳಿಸಿದರು. ಪ್ರತಿ ತಿಂಗಳಿಗೊಮ್ಮೆ ಆಯಾ ತಾಲ್ಲೂಕುಗಳ ತಹಶೀಲ್ದಾರರು ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣೆಗೆ ಸಂಬAಧಿಸಿದAತೆ ಆಗುವ ವಿಳಂಬ ಕುರಿತು ಸಭೆ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಡೆಸಿದ ಬೆಳೆ ಕಟಾವು ಪ್ರಯೋಗದ ವರದಿ ಮಾಡುವಾಗ ಅಧಿಕಾರಿಗಳು ಸಮಯಕ್ಕೆ ಬೆಳೆ ಕಟಾವು ಪ್ರಯೋಗ ಮಾಡ ಬೇಕು. ತಂತ್ರಾAಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲಾ ಮಟ್ಟದಲ್ಲಿ ಗಣತಿ ಕಾರ್ಯ ಮಾಡುವ ಮೇಲ್ವಿಚಾಕರಿಗೆ ಮತ್ತು ತಾಲ್ಲೂಕು ಮಟ್ಟದಲ್ಲಿ ಗಣತಿ ಕಾರ್ಯ ಕೈಗೊಳ್ಳುವ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಗಣತಿ ಕಾರ್ಯ ವಿಧಾನದ ಕುರಿತು ಸೂಕ್ತ ತರಬೇತಿ ಹೊಂದಬೇಕು ಎಂದು ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ.ಪತ್ರಿಬಸಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ