ಗುರುವಾರ, ಡಿಸೆಂಬರ್ 4, 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಈಗಾಗಲೇ ಆನ್ ಲೈನ್ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳು ಅರ್ಹರಾಗಿದ್ದು, ಆನ್‌ಲೈನ್ ನಲ್ಲಿ ಸಲ್ಲಿಸಿ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು. ಮಾಹಿತಿ ಕೇಂದ್ರದ ವಿಳಾಸ: ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ-ಮೊ.8310321101, ಸಂಡೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ-ಮೊ.9036925966, 8660575061, ಸಿರುಗುಪ್ಪ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ-ಮೊ.9148889975. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 (24*7) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ