ಬುಧವಾರ, ಡಿಸೆಂಬರ್ 17, 2025

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿಕೆ | ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಅಧಿಕಾರಿಗಳು ಉತ್ತಮ ಪ್ರಗತಿ ಸಾಧಿಸಿ

ಬಳ್ಳಾರಿ,ಡಿ.17(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಬಳ್ಳಾರಿ ಜಿಲ್ಲೆಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮ ಪ್ರಗತಿ ಸಾಧಿಸಿಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಗೃಹಲಕ್ಷಿö್ಮÃ ಮತ್ತು ಶಕ್ತಿ ಯೋಜನೆಯು ಮಹಿಳೆಯರಿಗೆ ಸ್ವವಲಂಬನೆಯ ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಿದೆ. ಪಂಚ ಗ್ಯಾರಂಟಿ ಯೋಜನೆಯು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರದೇ ಎಲ್ಲಾ ವರ್ಗದ ಜನರಿಗೆ ತಲುಪುತ್ತಿದೆ ಎಂದರು. ಪAಚ ಗ್ಯಾರಂಟಿ ಯೋಜನೆಗಳ ಸಕಾಲಿಕ ಜಾರಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಸರ್ಕಾರದ ಕಲ್ಯಾಣ ಕಾರ್ಯಗಳು ತಲುಪುತ್ತಿರುವುದಕ್ಕೆ ಇದೊಂದು ಸಾಕ್ಷಿಯಾಗಿದೆ. ಅದೇರೀತಿಯಾಗಿ ತಾಪಂ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಸರ್ಕಾರದ ನಿರ್ದೇಶನವಿದ್ದು, ತಾಲ್ಲೂಕು ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ತಾಲ್ಲೂಕಿನಲ್ಲಿ 3-4 ಗ್ರಾಮ ಪಂಚಾಯತ್ ಫಲಾನುಭವಿಗಳ ಸಮಸ್ಯೆ ಕುರಿತು ಗ್ರಾಮ ಸಭೆ ಅಥವಾ ಇನ್ನೀತರೆ ಪೂರಕ ಸಭೆ ಜರುಗಿಸಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ತಾಲ್ಲೂಕು ಸಮಿತಿ ರಚಿಸಬೇಕಿದೆ. ಈ ಕುರಿತು ಸರ್ಕಾರದ ನಿರ್ದೇಶನವಿದೆ ಎಂದರು. ಗೃಹಲಕ್ಷಿö್ಮÃ ಯೋಜನೆಯಡಿ ಜಿಲ್ಲೆಯ ಒಟ್ಟು 29,9,004 ಲಕ್ಷ ಫಲಾನುಭವಿಗಳ ಪೈಕಿ 28,9,938 ಫಲಾನುಭವಿಗಳಿಗೆ ಸಹಾಯಧನ ನೆರವು ತಲುಪಿದ್ದು, ಶೇ.96.97 ರಷ್ಟು ಪ್ರಗತಿಯಾಗಿದೆ. ಈವರೆಗೆ ಈ ಯೋಜನೆಯಡಿ ಜಿಲ್ಲೆಗೆ 1259.16 ಕೋಟಿ ರೂ. (2023 ರ ಆಗಷ್ಟ್ ತಿಂಗಳಿನಿAದ 2025 ಆಗಷ್ಟ್ ವರೆಗೆ) ಸರ್ಕಾರ ಪಾವತಿಸಿದೆ. ಜಿಲ್ಲೆಯಲ್ಲಿ 223 ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಗೃಹಲಕ್ಷಿö್ಮÃ ಯೋಜನೆಯಡಿ ಸಹಾಯಧನ ದೊರಕಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅವರನ್ನು ಈ ಯೋಜನೆಯಡಿ ನೋಂದಣಿ ಮಾಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಅವರು ಸಭೆಗೆ ತಿಳಿಸಿದರು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಲಾಗಿದ್ದು, ಜಿಲ್ಲೆಯಲ್ಲಿ 6 ಘಟಕಗಳಿವೆ. ದಿನಕ್ಕೆ 68 ಸಾವಿರಕ್ಕಿಂತ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಈವರೆಗೆ ಒಟ್ಟು 622.50 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ರೂ.244.47 ಕೋಟಿ (2023 ರ ಜೂನ್ ತಿಂಗಳಿನಿAದ 2025ರ ಅಕ್ಟೋಬರ್ ವರೆಗೆ) ವೆಚ್ಚವಾಗಿದೆ ಎಂದು ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಪ್ರತಿಕ್ರಿಯಿಸಿ, ಬಳ್ಳಾರಿ ಜಿಲ್ಲೆಯ ಕಾರೆಕಲ್ಲು ಗ್ರಾಮಕ್ಕೆ ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ತೊಂದರೆಯಾಗುತ್ತಿದ್ದು, ಹೆಚ್ಚಿನ ಬಸ್ ಕಾರ್ಯಾಚರಣೆ ನಡೆಸಬೇಕು ಎಂದು ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಹೇಳಿದರು. ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಿಕೊAಡ 2.97 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ಪ್ರಯೋಜನ ತಲುಪಿದ್ದು, ಪ್ರಗತಿ ಪ್ರಮಾಣ ಶೇ.98 ಪ್ರಗತಿಯಾಗಿದೆ. ಈ ಯೋಜನೆಗೆ ರೂ.374 ಕೋಟಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವೆಚ್ಚವಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧ್ಯಕ್ಷರು ಜಿಲ್ಲೆಯಲ್ಲಿ ಪ್ರತಿ ಮನೆಗೂ ಮೀಟರ್ ಇರುವ ಮತ್ತು ಇಲ್ಲದೆ ಇರುವ ಬಗ್ಗೆ ಮಾಹಿತಿ ನೀಡಬೇಕು. ಮೀಟರ್‌ನ ದರದ ಬಗ್ಗೆ ಮತ್ತು ಪ್ರತಿ ಮನೆಗೆ ಮೀಟರ್ ಅವಳವಡಿಸಿಕೊಳ್ಳುವುದರ ಬಗ್ಗೆ ಭಿತ್ತಿಪತ್ರ ಹೊರಡಿಸಿ ಪ್ರತಿ ತಾಲ್ಲೂಕು ಅಧ್ಯಕ್ಷರಿಗೆ ವಿತರಿಸಿ, ಮೀಟರ್ ಅಳವಡಿಕೆಯ ಬಗ್ಗೆ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಜೆಸ್ಕಾಂ ಅಧಿಕಾರಿಗಳು ಇದಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ಮೀಟರ್ ಅಳವಡಿಕೆಗೆ 2000 ಸಾವಿರದ ಒಳಗೆ ದರ ನಿಗಧಿ ಮಾಡಿದ್ದು, ಪ್ರತಿ ಮನೆಗೂ ಮೀಟರ್ ಅಳವಡಿಸಲಾಗುತ್ತಿದೆ ಹಾಗೂ ವಿದ್ಯುತ್ ಸಂಬAಧಿತ ಸಮಸ್ಯೆಗಳಿಗೆ 1912 ಸಹಾಯವಾಣಿ ಸಂಖ್ಯೆಯ ಮಾಹಿತಿ ನೀಡಲಾಗುತ್ತಿದೆ. ವಿದ್ಯುತ್ ಸಮಸ್ಯೆ ಪರಿಹರಿಸಲು 24*7 ವಾಹನಗಳು ಇವೆ ಎಂದು ಹೇಳಿದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಒಟ್ಟು 1.81 ಕೋಟಿ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಒಟ್ಟು 292.29 ಕೋಟಿ ರೂ. ಡಿಬಿಟಿ ಮೂಲಕ ಹಣ ಪಾವತಿಸಲಾಗಿದ್ದು, 2025 ರ ಫೆಬ್ರವರಿ ತಿಂಗಳಿನಿAದ ಹಣ ಬದಲಾಗಿ, ಪಡಿತರ ಅಕ್ಕಿ ಮತ್ತು ಜೋಳ ಸಹ ವಿತರಿಸಲಾಗುತ್ತಿದೆ. ಒಟ್ಟು 53 ಲಕ್ಷ ಕ್ವಿಂಟಾಲ್‌ಗೆ 122.65 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ತೊಗರಿ ಬೇಳೆ, ಹೆಸರು, ಉಪ್ಪು, ಸಕ್ಕರೆ, ಅಡುಗೆ ಎಣ್ಣೆ ಸೇರಿದ ಆಹಾರ ಕಿಟ್ ವಿತರಿಸಲು ನಿರ್ಧರಿಸಲಾಗಿದ್ದು, 1-2 ಸದ್ಯಸರಿದ್ದರೆ ಅರ್ಧ ಕೆ.ಜಿ ಯಂತೆ ಕಿಟ್, 3-4 ಸದಸ್ಯರಿದ್ದರೆ 1 ಕೆ.ಜಿ ಯಂತೆ ಹಾಗೂ 4-5 ಕ್ಕಿಂತ ಹೆಚ್ಚು ಸದಸ್ಯರಿಗೆ 1 ವರೆ ಕೆ.ಜಿ ಯಂತೆ ವಿತರಿಸಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಅವರು, ಪಡಿತರ ಚೀಟಿಯಲ್ಲಿ ಮಹಿಳಾ ಮುಖ್ಯಸ್ಥರು ಮರಣ ಹೊಂದಿದ್ದರೆ ಅದರ ಬಗ್ಗೆ ಮಾಹಿತಿಯನ್ನು ಮಹಿಳಾ ಅಭಿವೃದ್ಧಿ ಇಲಾಖೆಗೆ ತಿಳಿಸಬೇಕು. ಇದರಿಂದ ಮರಣ ಹೊಂದಿದ ಮುಖ್ಯಸ್ಥರ ನಂತರ ಇನ್ನೋರ್ವ ಮಹಿಳಾ ಸದಸ್ಯೆಗೆ ಗೃಹಲಕ್ಷಿö್ಮÃ ಯೋಜನೆ ಪ್ರಯೋಜನ ಸಿಗಲಿದೆ ಎಂದು ಹೇಳಿದರು. ಯುವ ನಿಧಿ ಯೋಜನೆ ಮೂಲಕ 10699 ನೋಂದಾಯಿಸಿಕೊAಡ ಅರ್ಹ ಅಭ್ಯರ್ಥಿಗಳಿಗೆ ಇಲ್ಲಿಯವರೆಗೆ ರೂ.21.99 ಕೋಟಿ ಹಣಕಾಸು ನೆರವು ತಲುಪಿದ್ದು, ಇದರಿಂದ ನಿರುದ್ಯೋಗ ಯುವಕರಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಅವರು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಅವರು, ಯುವನಿಧಿ ಯೋಜನೆಗೆ ನೋಂದಾಯಿಸಿಕೊAಡ ಅಭ್ಯರ್ಥಿಗಳು ಅವರು ಕೆಲಸಕ್ಕೆ ಸೇರಿದ ಬಗ್ಗೆ ವಿಚಾರಿಸಿ ಕೆಲಸ ಸಿಕ್ಕಿದ ನಂತರವು ಯೋಜನೆಯ ಪ್ರಯೋಜನ ಪಡೆಯುತ್ತಿರುವುದರ ಬಗ್ಗೆ ಗಮನ ವಹಿಸಿಬೇಕು. ಉದ್ಯೋಗ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಅದೇರೀತಿಯಾಗಿ ಗೃಹಲಕ್ಷಿö್ಮÃ ಯೋಜನೆಯಡಿ ನೋಂದಾಯಿಸಿಕೊAಡ ಜಿಲ್ಲೆಯ ಫಲಾನುಭವಿಗಳಿಗೆ ವಿವಿಧ ಕಾರಣಗಳಿಂದ ಹಣ ಪಾವತಿಯಾಗುತ್ತಿಲ್ಲ ಎಂದು ದೂರು ಕೇಳಿಬರುತ್ತಿವೆ. ಅವರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಇತ್ಯರ್ಥಕ್ಕೆ ಗ್ರಾಪಂ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಆಯೋಜಿಸಬೇಕು ಎಂದು ತಾಪಂ ಇಒ ಗಳಿಗೆ ನಿರ್ದೇಶನ ನೀಡಿದ ಅವರು, ಎನ್‌ಪಿಸಿಐ ಲಿಂಕ್ ಮಾಡಿಸದೇ ಇರುವ 904 ಮತ್ತು ಆಧಾರ್ ಇ-ಕೆವೈಸಿ ಮಾಡಿಸದೇ ಇರುವ 109 ಫಲಾನುಭವಿಗಳ ಮಾಹಿತಿ ಪಡೆದು ಕೂಡಲೇ ಪರಿಹರಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಆಯೋಜಿಸಲಾಗುವ ಉದ್ಯೋಗ ಮೇಳಗಳಲ್ಲಿ ‘ಯುವ ನಿಧಿ’ ಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರುಗಳು, ಜಿಲ್ಲಾ ಸಮಿತಿ ಸದಸ್ಯರುಗಳು ಪಾಲ್ಗೊಂಡು ಗ್ಯಾರಂಟಿ ಅನುಷ್ಟಾನಕ್ಕೆ ಹಾಗೂ ಅರ್ಹರಿಗೆ ಯೋಜನೆ ತಲುಪಿಸುವಲ್ಲಿ ಇರುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಂ.ಆಶಾಲತಾ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಕುರುಗೋಡು ತಾಲ್ಲೂಕು ಅಧ್ಯಕ್ಷ ಜಿ.ಬಸವನಗೌಡ, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷ ಮಾರುತಿ ವರಪ್ರಸಾದ್ ರೆಡ್ಡಿ, ಸಂಡೂರು ತಾಲ್ಲೂಕು ಅಧ್ಯಕ್ಷ ನೂರುದ್ಧೀನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಸೇರಿದಂತೆ ತಾಪಂ ಇಒಗಳು ಹಾಗೂ ಇತರರು ಉಪಸ್ಥಿತರಿದ್ದರು. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ