ಶುಕ್ರವಾರ, ಡಿಸೆಂಬರ್ 19, 2025

ಪ್ರಧಾನಮಂತ್ರಿ ರಾಷ್ಟಿçÃಯ ಡಯಾಲಿಸಿಸ್ ಸೇವೆ ಸದುಪಯೋಗ ಪಡೆದುಕೊಳ್ಳಿ: ಡಾ.ಯಲ್ಲಾ ರಮೇಶ್‌ಬಾಬು

ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ): ಜಿಲ್ಲೆಯ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಡಯಾಲಿಸಿಸ್ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಾ ಡಯಾಲಿಸಿಸ್ ಸೇವೆಗಳನ್ನು ಅರ್ಹ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಒದಗಿಸುವುದು ಮುಖ್ಯವಾಗಿದೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಆಸ್ಪತ್ರೆ, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ, ಹಾಗೂ ಸಂಡೂರು ತಾಲ್ಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳು ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸುತ್ತಿವೆ. ಹೊಸದಾಗಿ ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕುಗಳ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ಡಯಾಲಿಸಿಸ್ ಕೇಂದ್ರಗಳು ಹೊಸದಾಗಿ ಅನುಮೋದನೆಯಾಗಿದ್ದು, ಡಯಾಲಿಸಿಸ್ ಸೇವೆಗಳು ಪ್ರಾರಂಭಿಸುವ ಹಂತದಲ್ಲಿದೆ ಎಂದು ತಿಳಿಸಿದರು. ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ (ಬಿ.ಎಮ್.ಸಿ.ಆರ್.ಸಿ) ಯಲ್ಲಿ 100, ಜಿಲ್ಲಾ ಆಸ್ಪತ್ರೆ-50, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ-7, ಸಂಡೂರು ಸಾರ್ವಜನಿಕ ಆಸ್ಪತ್ರೆ-6 ಸೇರಿದಂತೆ ಒಟ್ಟು 163 ರೋಗಿಗಳು ಉಚಿತ ಡಯಾಲಿಸಿಸ್ ಸೇವೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಡಯಾಲಿಸಿಸ್ ಸೇವೆಗಳಿಗೆ ಅವಶ್ಯವಿರುವ ಸಾಮಾಗ್ರಿ ಏಕಬಳಕೆ ಡಯಾಲೈಜರನ್ನು ಉಪಯೋಗಿಸಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿನ (ತಾಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ) ಡಯಾಲಿಸಿಸ್ ಕೇಂದ್ರಗಳಲ್ಲಿ ಡಯಾಲಿಸಿಸ್ ಪ್ರಕ್ರಿಯೆ/ಕಾರ್ಯವಿಧಾನ ಮುಗಿದ ನಂತರ ರೋಗಿಗಳನ್ನು ಸಂಬAಧಪಟ್ಟ ಆಸ್ಪತ್ರೆಯ ವ್ಯಾಪ್ತಿಯ ನಗುಮಗು ವಾಹನದ ಮೂಲಕ ಮನೆಗೆ ತೆರಳಲು ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಗಳನ್ನು ಸೂಕ್ತ ಸಮಯದಲ್ಲಿ ಒದಗಿಸಲಾಗುತ್ತಿದೆ ಹಾಗೂ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯಲು ಮನ ಒಲಿಸಲು ಆಪ್ತ ಸಮಾಲೋಚನ ನಡೆಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ವೈದ್ಯರು, ಸಾರ್ವಜನಿಕರು ಹಾಗೂ ಇತರರು ಇದ್ದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ