ಗುರುವಾರ, ಮೇ 14, 2026
ಹೆಲ್ಮೆಟ್ ಜಾಗೃತಿಗಾಗಿ ಬೈಕ್ ಸವಾರಿ ಮಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ | ಹೆಲ್ಮೆಟ್ ಧರಿಸುವುದು ಕಡ್ಡಾಯ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಜೀವ ರಕ್ಷಣೆಗಾಗಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನಾಗರಿಕರ ಪ್ರಾಣ ರಕ್ಷಣೆಯು ಕಾನೂನಿನ ಮುಖ್ಯ ಉದ್ದೇಶವಾಗಿದ್ದು, ಸಾರ್ವಜನಿಕರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರಿ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ, ಹೆಲ್ಮೆಟ್ ವಿತರಣೆ ಹಾಗೂ ಬೈಕ್ ರ‍್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾನೂನು ಎಂಬುದು ಸಾರ್ವಜನಿಕರ ಹಿತರಕ್ಷಣೆಗಾಗಿ ನಾವೇ ಮಾಡಿಕೊಂಡಿರುವುದು ಎಂಬ ಅರಿವು ಎಲ್ಲರಲ್ಲಿ ಇರಬೇಕು. ಹೆಲ್ಮೆಟ್ ಕಡ್ಡಾಯದಿಂದ ವಿನಾಯಿತಿ ನೀಡುವಂತೆ ಯಾರೂ ಮನವಿ ಮಾಡಬಾರದು. ವಿನಾಯಿತಿ ಕೇಳುವುದು ಎಂದರೆ ‘ಜನರ ಪ್ರಾಣ ರಕ್ಷಣೆ ಮಾಡಬೇಡಿ’ ಮತ್ತು ‘ಕುಟುಂಬದ ಬಗ್ಗೆ ಕಾಳಜಿ ಇಲ್ಲ’ ಎಂದು ಹೇಳಿದಂತೆ ಎಂದು ಅವರು ತಿಳಿಸಿದರು.
ಬಳ್ಳಾರಿಯ ಜನರು ಈಗಾಗಲೇ ಸಕಾಲ ಸೇವೆ ಮತ್ತು ಜನಗಣತಿ ಕಾರ್ಯಗಳಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನ ಪಡೆದು ತಮ್ಮ ಇಚ್ಛಾಶಕ್ತಿಯನ್ನು ಸಾಬೀತುಪಡಿಸಿದ್ದಾರೆ. ಅದೇ ರೀತಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಜಿಲ್ಲೆಯ ಹೆಸರನ್ನು ಎತ್ತಿಹಿಡಿಯಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಬೈಕ್ ಅಪಘಾತಗಳ ಅಂಕಿಅAಶಗಳು ಆತಂಕಕಾರಿಯಾಗಿದ್ದು, ಪ್ರತಿಯೊಬ್ಬ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯೊಂದರಲ್ಲೇ ಕಳೆದ ಮೂರು ವರ್ಷಗಳಲ್ಲಿ (2023 ರಿಂದ 2026ರ ಏಪ್ರಿಲ್ ವರೆಗೆ) ಬೈಕ್ ಅಪಘಾತಗಳಿಂದಾಗಿ ಒಟ್ಟು 462 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸರಾಸರಿ ಪ್ರತಿ ಎರಡು ದಿನಕ್ಕೆ ಒಂದು ಸಾವು ಬೈಕ್ ಅಪಘಾತದಿಂದ ಸಂಭವಿಸುತ್ತಿದೆ. ಅಂದರೆ ವರ್ಷಕ್ಕೆ ಸುಮಾರು 150ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಅಂಕಿ-ಅAಶ ವಿವರಿಸಿದರು.
ಸಂಚಾರ ನಿಯಮಗಳನ್ನು ಕೇವಲ ದಂಡ ಅಥವಾ ಪೊಲೀಸರ ಭಯಕ್ಕಾಗಿ ಪಾಲಿಸಬಾರದು. ನಮ್ಮ ಶಿರ (ತಲೆ) ಸುರಕ್ಷಿತವಾಗಿದ್ದರೆ ಮಾತ್ರ ದೇಹಕ್ಕೆ ಚೈತನ್ಯವಿರುತ್ತದೆ ಎಂಬುದು ಪ್ರತಿಯೊಬ್ಬರ ಮನವರಿಕೆಯಾಗಬೇಕು. ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಲು ಯಾವುದೇ ಜಿಲ್ಲೆಗಳಿಗೂ ಅವಕಾಶವಿಲ್ಲ. ಉರಿಬಿಸಿಲು ಅಥವಾ ಇತರ ಕಾರಣಗಳನ್ನು ನೀಡುವುದು ಸರಿಯಲ್ಲ, ಇದು ನಮ್ಮ ಮತ್ತು ನಮ್ಮ ಕುಟುಂಬದ ಸುರಕ್ಷತೆಗಾಗಿ ಮಾಡುವ ಸಣ್ಣ ಹೂಡಿಕೆಯಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಇಂದಿನ ಕಾಲದಲ್ಲಿ ಜನರು ತಾವು ಬಳಸುವ ಬೆಲೆಬಾಳುವ ಮೊಬೈಲ್ ಫೋನ್‌ಗಳಿಗೆ ನೀಡುವಷ್ಟೂ ಸುರಕ್ಷತೆಯನ್ನು ತಮ್ಮ ಜೀವಕ್ಕೆ ನೀಡುತ್ತಿಲ್ಲ ಎಂಬುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.
ಮೊಬೈಲ್ ಕೆಳಗೆ ಬಿದ್ದರೆ ಸ್ಕಿçÃನ್ ಒಡೆಯಬಾರದು ಎಂದು ಸ್ಕಿçÃನ್ ಗಾರ್ಡ್ ಹಾಕಿಸುವ ನಾವು, ಅದಕ್ಕಿಂತಲೂ ಅಮೂಲ್ಯವಾದ ನಮ್ಮ ಮೆದುಳು ಮತ್ತು ಜೀವದ ರಕ್ಷಣೆಗೆ ಹೆಲ್ಮೆಟ್ ಧರಿಸಲು ನಿರ್ಲಕ್ಷö್ಯ ಮಾಡುತ್ತಿದ್ದೇವೆ. ನಾವು ಜೀವಂತವಾಗಿದ್ದರೆ ಮಾತ್ರ ಈ ಜಗತ್ತು ನಮಗೆ ಅಸ್ತಿತ್ವದಲ್ಲಿರುತ್ತದೆ. ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡರೆ ಅಥವಾ ಗಂಭೀರ ಗಾಯಗಳಾದರೆ ಆ ಕುಟುಂಬ ಅನುಭವಿಸುವ ನೋವು ಮತ್ತು ಸಂಕಷ್ಟಗಳು ಅಪಾರವಾಗಿದೆ ಎಂದರು.
ಬರುವ ಜೂನ್ 1 ರಿಂದ ಜಿಲ್ಲಾದ್ಯಂತ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು. ನಮ್ಮ ಕುಟುಂಬದವರ, ಸ್ನೇಹಿತರ ಮತ್ತು ನಮ್ಮವರ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಈ ನಿಯಮವನ್ನು ಪಾಲಿಸಿ, ಹೆಲ್ಮೆಟ್ ಧರಿಸುವ ಮೂಲಕ ಅಮೂಲ್ಯವಾದ ಜೀವಗಳನ್ನು ಉಳಿಸೋಣ ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸೆಖೆ ಅಥವಾ ಅಸ್ವಸ್ಥತೆಯ ಕಾರಣ ನೀಡಿ ಹೆಲ್ಮೆಟ್ ಧರಿಸುವುದನ್ನು ಕಡೆಗಣಿಸಬಾರದು. ಸ್ವಲ್ಪ ಸಮಯದ ಅನಾನುಕೂಲಕ್ಕಿಂತ ಪ್ರಾಣ ರಕ್ಷಣೆ ಮುಖ್ಯ. ನಿಮ್ಮ ಮತ್ತು ನಿಮ್ಮ ಕುಟುಂಬದ ಹಿತದೃಷ್ಟಿಯಿಂದ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಹೇಳಿದರು.
ಇದಕ್ಕೂ ಮುನ್ನ ಗಣ್ಯರು ‘ಹೆಲ್ಮೆಟ್ ಧರಿಸಿ- ಜೀವ ಉಳಿಸಿ’ ಎನ್ನುವ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿದರು. ಬಳಿಕ ಪೌರಕಾರ್ಮಿಕರಿಗೆ, ಸಾರ್ವಜನಿಕರು ಒಳಗೊಂಡAತೆ 100 ಹೆಲ್ಮೆಟ್ ಗಳನ್ನು ವಿತರಿಸಲಾಯಿತು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಡಿಎಆರ್ ಡಿಎಸ್ಪಿ ತಿಪ್ಪೇಸ್ವಾಮಿ, ಬಳ್ಳಾರಿ ನಗರ ಡಿಎಸ್ಪಿ ಗೋವಿಂದರಾಜು, ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರುದ್ರಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಸೇರಿದಂತೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.
*ಆಕರ್ಷಕ ಬೈಕ್ ರ‍್ಯಾಲಿ:*
ಹೆಲ್ಮೆಟ್ ಜಾಗೃತಿ ಅಂಗವಾಗಿ ನಗರದಲ್ಲಿ ಆಕರ್ಷಕ ಬೈಕ್ ರ‍್ಯಾಲಿ ನಡೆಯಿತು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಜಾಗೃತಿ ಅಂಗವಾಗಿ ಸ್ವತಃ ತಾವೇ ಬೈಕ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು.
ರ‍್ಯಾಲಿಯು ಜಿಲ್ಲಾ ಪೊಲೀಸ್ ಕಚೇರಿಯಿಂದ ಪ್ರಾರಂಭಗೊAಡು - ದುರ್ಗಮ್ಮ ದೇವಸ್ಥಾನ ರೈಲ್ವೆ ಸೇತುವೆ ಕೆಳ ರಸ್ತೆ-ಯುಬಿ ಸರ್ಕಲ್-ಗಡಿಗಿ ಚೆನ್ನಪ್ಪ ವೃತ್ತ - ಬೆಂಗಳೂರು ರಸ್ತೆ- ತೇರುಬೀದಿ-ಹೆಚ್.ಆರ್. ಗವಿಯಪ್ಪ ವೃತ್ತ-ಅಂಬೇಡ್ಕರ್ ವೃತ್ತ-ಸುಧಾ ಕ್ರಾಸ್- ಇನ್‌ಪೆಂಟ್ರಿ ರಸ್ತೆ-ಎಸ್.ಪಿ ಸರ್ಕಲ್-ದುರ್ಗಮ್ಮ ದೇವಸ್ಥಾನ-ಕೆಇಬಿ ಸರ್ಕಲ್-ಬಸವೇಶ್ವರ ನಗರ-ಎಸ್.ಎನ್ ಪೇಟೆ ಮೇಲು ಸೇತುವೆ-ಕೂಲ್ ಕಾರ್ನರ್-ಡಿಎಆರ್ ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು.
--------
ಬಳ್ಳಾರಿ: ಮೇ 21 ರಂದು ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
*ಅರ್ಹತೆ:*
ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
*ಅಗತ್ಯವಿರುವ ದಾಖಲೆಗಳು:*
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು.
ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಅಪರಿಚಿತ ವ್ಯಕ್ತಿ ಆತ್ಮಹತ್ಯೆ - ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ಸಮೀಪ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗಾಗಿ ಸಹಕರಿಸಬೇಕು.
ಮೇ 13 ರಂದು ತೋರಣಗಲ್ಲು ರೈಲ್ವೇ ನಿಲ್ದಾಣದ ಯಾರ್ಡ್ ಹತ್ತಿರದ ರೈಲ್ವೇ ಕಿ.ಮೀ ನಂ: 175/0 ಬಳಿ ಚಲಿಸುವ ರೈಲಿಗೆ ತಲೆಕೊಟ್ಟು ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
---------
ಬುಧವಾರ, ಮೇ 13, 2026
ಬಳ್ಳಾರಿ: ಹಸ್ತಪ್ರತಿಗಳ ಸಂರಕ್ಷಣೆಗೆ 'ಜ್ಞಾನ ಭಾರತಂ ಮಿಷನ್' ಚಾಲನೆ | ಸಾರ್ವಜನಿಕರ ಸಹಕಾರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕರೆ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಶತಮಾನಗಳ ಇತಿಹಾಸವಿರುವ ಭಾರತದ ಜ್ಞಾನ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ 'ಜ್ಞಾನ ಭಾರತಂ ಮಿಷನ್' ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
*ಯೋಜನೆಯ ಉದ್ದೇಶ ಮತ್ತು ಕಾರ್ಯವೈಖರಿ:*
ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು 'ರಾಷ್ಟ್ರೀಯ ಹಸ್ತಪ್ರತಿ ಭಂಡಾರ' ನಿರ್ಮಿಸುವುದು ಈ ಮಿಷನ್‌ನ ಮುಖ್ಯ ಉದ್ದೇಶ. ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಇದರ ನೋಡೆಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.
*ಜಿಲ್ಲಾ ಮಟ್ಟದ ಸಮಿತಿ ರಚನೆ:*
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಜಿಲ್ಲೆಯ ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿ ಹೊತ್ತಿದೆ. ಸಮೀಕ್ಷೆಯು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಮತ್ತು ಮೆಟಾಡೇಟಾ ದಾಖಲೀಕರಣ ಮಾಡಲಾಗುತ್ತಿದೆ.
*ಗಮನಾರ್ಹ ಪ್ರಗತಿ:*
ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವು ವೇಗವಾಗಿ ನಡೆಯುತ್ತಿದ್ದು, 17 ಜಿಲ್ಲೆಗಳಲ್ಲಿ ಏ.27 ರ ವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿಯೂ ಸಮೀಕ್ಷಾ ಕಾರ್ಯವು ಪ್ರಗತಿಯಲ್ಲಿದೆ. ಈ ಸಮೀಕ್ಷಾ ಪ್ರಕ್ರಿಯೆಯು ಮೇ ರವರೆಗೆ ಅಂತ್ಯದವರೆಗೆ ಮುಂದುವರಿಯಲಿದೆ.
*ಸಾರ್ವಜನಿಕರಿಗೆ ಮನವಿ:*
ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾರ ಬಳಿಯಾದರೂ ಪ್ರಾಚೀನ ಹಸ್ತಪ್ರತಿಗಳು ಅಥವಾ ಬರವಣಿಗೆಯುಳ್ಳ ತಾಳೆಗರಿಗಳು ಲಭ್ಯವಿದ್ದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ. ಮಾಹಿತಿ ನೀಡಲು ಇಚ್ಛಿಸುವವರು ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು: ಡಾ. ಆರ್. ಮಂಜನಾಯ್ಕ್: ಪುರಾತತ್ವ ಸಹಾಯಕರು, ಕಮಲಾಪುರ (ಮೊ: 9945415518), ಶ್ರೀಹರಿ ಮಾಸನೂರು: ಪ್ರವಾಸಿ ಅಧಿಕಾರಿಗಳು, ಕಮಲಾಪುರ (ಮೊ:7892722443).
ನಮ್ಮ ಪೂರ್ವಜರ ಜ್ಞಾನದ ಕುರುಹುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ರಾಷ್ಟ್ರೀಯ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಸಂಸ್ಥೆಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
-----------
ಬಳ್ಳಾರಿ: ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಜಿಲ್ಲೆಯ ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಬರುವ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ಸಂರಕ್ಷಿಸುವ ಕಾರ್ಯ ಜಿಲ್ಲಾಡಳಿತದಿಂದ ಬುಧವಾರವೂ ಮುಂದುವರೆಯಿತು.
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಭುವನಗಿರಿ ಕಾಲೋನಿಯ ಅಶೋಕ್ ನಗರದ ಸರ್ವೆ ನಂಬರ್ 348 ರಲ್ಲಿನ ಒಟ್ಟು 11.59 ಎಕರೆ ಜಮೀನು ಕರ್ನಾಟಕ ಸರ್ಕಾರದ ಸ್ವತ್ತಾಗಿದ್ದು, ಬುಧವಾರ ಸ್ಥಳದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಾಗವನ್ನು ಸಮತಟ್ಟುಗೊಳಿಸುವ ಮೂಲಕ ಗುರುತಿಸುವ ಕಾರ್ಯ ನಡೆಯಿತು.
ಒತ್ತುವರಿದಾರರಿಗೆ ಎಚ್ಚರಿಕೆ ನೀಡುವ ಫಲಕವನ್ನು ವಿವಾದಿತ ಸ್ಥಳದಲ್ಲಿ ಅಳವಡಿಸುವ ಮೂಲಕ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ನಾಮಫಲಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
*ಕಠಿಣ ಕಾನೂನು ಕ್ರಮದ ಎಚ್ಚರಿಕೆ:*
ಸರ್ಕಾರಿ ಜಮೀನುಗಳನ್ನು ಯಾರಾದರೂ ಒತ್ತುವರಿ ಮಾಡಿಕೊಂಡಲ್ಲಿ ಅಥವಾ ಅನಧಿಕೃತವಾಗಿ ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಇಂತಹ ಜಾಗಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಹಾಗೂ ಕಂದಾಯ, ಪೊಲೀಸ್ ಅಧಿಕಾರಿಗಳು ಇದ್ದರು.
-----------
ವ್ಯಕ್ತಿ ನಾಪತ್ತೆ - ಪತ್ತೆಗೆ ಮನವಿ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ನಗರದ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ವಟ್ಟಪ್ಪಗೇರಿಯ ನಿವಾಸಿ ಯೇಸುದಾಸ್ ಎನ್ನುವ 43 ವರ್ಷದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಘಟನೆಯ ವಿವರ:
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಜ್ಯೋತಿ ಎಂಬುವವರ ಪತಿ ಯೇಸುದಾಸ್ ಎಂಬುವವರು 2022ರ ಜ.02 ರಿಂದ ನಾಪತ್ತೆಯಾಗಿದ್ದಾರೆ. ದೂರಿನ ಅನ್ವಯ ತಾವು ಸಾಲ ಮಾಡಿಕೊಂಡಿರುವುದಾಗಿಯೂ ಮತ್ತು ಸಾಲಗಾರರು ಹಣ ಮರಳಿಸುವಂತೆ ಕೇಳುತ್ತಿದ್ದಾರೆ ಎಂದು ಪತ್ನಿಗೆ ತಿಳಿಸಿದ್ದರು. ಅಂದಿನಿAದ ಅವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ವ್ಯಕ್ತಿಯ ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೆಇಬಿ ಲೈನ್ ಮ್ಯಾನ್ ಕೆಲಸ ಮಾಡುತ್ತಿರುತ್ತಾನೆ. ಮನೆಯಿಂದ ಹೊರಡುವಾಗ ಯಾವ ಬಟ್ಟೆ ಧರಿಸಿದ್ದನು ಎಂಬ ಮಾಹಿತಿ ಲಭ್ಯವಿಲ್ಲ.
ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆ ದೂ.08392-240731, 244145, ಬಳ್ಳಾರಿ ಕಂಟ್ರೋಲ್ ರೂಂ 08392-258100, ಕೌಲ್ ಬಜಾರ್ ಠಾಣೆ ಪಿಐ ಮೊ.9480803047, ಪಿ.ಎಸ್.ಐ 94808203084, 9480803085 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
------------
ಮೇ 14 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 14 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌAಡ್, ನಾಗಪ್ಪ ಕಟ್ಟೆ, ಹೂವಿನ ಮಾರುಕಟ್ಟೆ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಹೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
2026-27ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜುಲೈ 01ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಅರ್ಜಿಗಳನ್ನು https://khtigadag.ac.in/Admissionform.pdf ಲಿAಕ್‌ನಲ್ಲಿ ಡೌನ್‌ಲೊಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.15 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
*ಡಿಪ್ಲೋಮಾ ಕೋರ್ಸ್ಗಳಿಗೆ ಲಭ್ಯವಿರುವ ಸಂಸ್ಥೆಗಳ ವಿವರ:*
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) - 22 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) - 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) - 03 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) - 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ಸೀಟ್‌ಗಳನ್ನು ಕಾಯ್ದಿರಿಸಲಾಗಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‌ಗಾಗಿ ಕರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್‌ನ 1ನೇ ಮಹಡಿಯ ಕೊಠಡಿ ಸಂಖ್ಯೆ 29ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ಅಥವಾ ಮೊ.9902772936, 9844837264 ಮತ್ತು 9901313417 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಮೇ 28 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿಯು ‘ನಿಧಿ ಆಪ್ಕೆ ನಿಕಟ್ 2.0’ (ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ) ಎಂಬ ವಿಸ್ತೃತ ಕಾರ್ಯಕ್ರಮವನ್ನು ಮೇ 28 ರಂದು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಅಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಆಯ್ದ ಸ್ಥಳಗಳಲ್ಲಿ ನಡೆಯಲಿದೆ.
*ಕಾರ್ಯಕ್ರಮದ ಸ್ಥಳಗಳು:*
ಬಳ್ಳಾರಿ ನಗರದ ಕೌಲ್ ಬಜಾರ್‌ನ ಜೀನತ್ ಟ್ರಾನ್ಸ್ಪೋರ್ಟ್ ಕಂಪನಿ, ಕೊಪ್ಪಳ
ದುದ್ದೇಶ್ ಮೆಟಲ್ಸ್, ವಿಜಯನಗರ ಜಿಲ್ಲೆಯ ಪೋಲಿಪ್ಯಾಕ್ ಇಂಡಸ್ಟಿçÃಸ್, ಚಿತ್ರದುರ್ಗದ ಅರವಿಂದ್ ಲಿಮಿಟೆಡ್.
ಈ ವಿಶೇಷ ಶಿಬಿರವು ಕಾರ್ಮಿಕರು, ಪಿಂಚಣಿದಾರರು ಮತ್ತು ಉದ್ಯೋಗದಾತರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ಗುರಿಯನ್ನು ಹೊಂದಿದೆ. ಇದರ ಜೊತೆಗೆ ಉದ್ಯೋಗದಾತರ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದು.
ಕಾರ್ಮಿಕರು ಮತ್ತು ಉದ್ಯೋಗದಾತರಿಗೆ ಲಭ್ಯವಿರುವ ಆನ್‌ಲೈನ್ ಸೇವೆಗಳ ಬಗ್ಗೆ ಮಾಹಿತಿ ನೀಡುವುದು. ಹೊಸ ಉಪಕ್ರಮಗಳು ಹಾಗೂ ಸುಧಾರಣೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಭಾಗವಾಗಿದೆ.
ಆಯಾ ಭಾಗದ ಕಾರ್ಮಿಕರು, ಪಿಂಚಣಿದಾರರು ಮತ್ತು ಉದ್ಯೋಗದಾತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಪ್ರತಿ ವರ್ಷ ಆಗಸ್ಟ್ 7 ರಂದು ಆಚರಿಸಲಾಗುವ ‘ರಾಷ್ಟಿçÃಯ ಕೈಮಗ್ಗ ದಿನಾಚರಣೆ' ಅಂಗವಾಗಿ, ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ ಮತ್ತು ಶ್ರೇಷ್ಠತೆ ಹೊಂದಿರುವ ನೇಕಾರರಿಗೆ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯು ನಗದು ಬಹುಮಾನ, ನೆನಪಿನ ಕಾಣಿಕೆ, ಶಾಲು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
*ನಗದು ಬಹುಮಾನದ ವಿವರ:*
ಪ್ರಶಸ್ತಿ ವಿಜೇತರಿಗೆ ವಿವಿಧ ವಿಭಾಗಗಳಲ್ಲಿ ನಗದು ಬಹುಮಾನ ನೀಡಲಾಗುತ್ತದೆ. ರೇಷ್ಮೆ ವಲಯ- ರೂ.25,000(ಪ್ರಥಮ), ರೂ.20,000(ದ್ವಿತೀಯ).
ಹತ್ತಿ ವಲಯ- ರೂ.20,000(ಪ್ರಥಮ), ರೂ.15,000(ದ್ವಿತೀಯ).
ಉಣ್ಣೆ ವಲಯ- ರೂ.15,000(ಪ್ರಥಮ).
*ಅರ್ಹತೆ:*
ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 30 ವರ್ಷ ವಯಸ್ಸನ್ನು ಪೂರೈಸಿರಬೇಕು. ಕೈಮಗ್ಗ ನೇಯ್ಗೆಯಲ್ಲಿ ಸುಮಾರು 10 ವರ್ಷಗಳ ಅನುಭವ ಹೊಂದಿರಬೇಕು. ಪ್ರಶಸ್ತಿಗಾಗಿ ಸಲ್ಲಿಸುವ ಉತ್ಪನ್ನದ ಮಾದರಿಯನ್ನು ಅರ್ಜಿದಾರರೇ ಸ್ವತಃ ತಯಾರಿಸಿರಬೇಕು.
*ಅರ್ಜಿ ಸಲ್ಲಿಸುವ ವಿಧಾನ:*
ಅರ್ಹ ನೇಕಾರರು ಬಳ್ಳಾರಿಯ ಹೊಸ ಜಿಲ್ಲಾಡಳಿತ ಭವನದ ‘ಎ' ಬ್ಲಾಕ್‌ನಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ (ಕೊಠಡಿ ಸಂಖ್ಯೆ 29, 1ನೇ ಮಹಡಿ) ಭೇಟಿ ನೀಡಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-266075 ಅಥವಾ ಮೊ.9901313417, 9844837264 ಅನ್ನು ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಬಳ್ಳಾರಿ: ಮಕ್ಕಳಲ್ಲಿನ ಸೃಜನಾತ್ಮಕ ಪ್ರತಿಭೆ ಅನಾವರಣಗೊಳಿಸಿದ ಬೇಸಿಗೆ ಶಿಬಿರ | ಪ್ರತಿಭೆಗಳನ್ನು ಮರೆಯದೆ ಬೆಳೆಸಿಕೊಳ್ಳಿ: ಸವಿತಾ.ಸಿ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಮಕ್ಕಳು ತಾವು ಕಲಿತ ಕಲೆಗಳನ್ನು ಮರೆಯದೆ, ವೈಯಕ್ತಿಕವಾಗಿ ನಿರಂತರವಾಗಿ ಅಭ್ಯಾಸ ಮಾಡುವ ಮೂಲಕ ತಮ್ಮ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಯಾದ ಸವಿತಾ.ಸಿ ಅವರು ಹೇಳಿದರು.
ಮಂಗಳವಾರದAದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪಾರ್ವತಿ ನಗರದ 2ನೇ ಕ್ರಾಸ್‌ನಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 05 ರಿಂದ 16 ವರ್ಷದ ಮಕ್ಕಳಿಗಾಗಿ ಆಯೋಜಿಸಲಾಗಿದ್ದ 15 ದಿನಗಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಸಂಗೀತ, ಕಸದಿಂದ ರಸ, ಕರಾಟೆ, ಯೋಗ ಇತ್ಯಾದಿಗಳ ‘ಬೇಸಿಗೆ ಶಿಬಿರ’ದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳು ಶಿಬಿರದಲ್ಲಿ ಕಳೆದ 15 ದಿನಗಳ ಕಾಲ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಪಡೆದ ತರಬೇತಿಯನ್ನು ಕೇವಲ ಶಿಬಿರಕ್ಕೆ ಸೀಮಿತಗೊಳಿಸಬಾರದು. ಬದಲಾಗಿ ನಿರಂತರ ಅಭ್ಯಸಿಸುತ್ತಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿವೆ. ಇಲ್ಲಿ ಕಲಿತ ವಿಷಯಗಳು ಮುಂದಿನ ದಿನಗಳಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಆತ್ಮವಿಶ್ವಾಸ ನೀಡುತ್ತವೆ ಎಂದು ತಿಳಿಸಿದರು.
ಶಿಬಿರದ ಅವಧಿಯಲ್ಲಿ ಮಕ್ಕಳು ಕಲಿತ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಂಗೀತ, ಯೋಗ ಹಾಗೂ ಕರಾಟೆ ಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಶಿಬಿರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಬೇಸಿಗೆ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದ ಮಲ್ಲಿಕಾರ್ಜುನ (ಚಿತ್ರಕಲೆ/ಕರಕುಶಲೆ), ಕವಿತಾ (ಸಂಗೀತ), ನಾಗರಾಜ ಕೆ.(ಚದುರಂಗ), ಪ್ರಕಾಶ್ (ಯೋಗ) ಹಾಗೂ ಮನೋಜ್ (ಕರಾಟೆ) ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಳೆನಾಗಪ್ಪ, ಶಾಲಾ ಶಿಕ್ಷಣ ಇಲಾಖೆಯ ಕೋಟ್ರೇಶ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ವೆಂಕಟೇಶ್, ಎಫ್.ಗೌಸೀಯ, ಶಾಶಿಬಕಾ ಜಿಲ್ಲಾ ವ್ಯವಸ್ಥಾಪಕ ಜಗನ್ನಾಥ.ಕೆ ಸೇರಿದಂತೆ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.
---------
ಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಸರ್ಕಾರೇತರ ಹಾಗೂ ಅನುದಾನಿತ ವಸತಿ ನಿಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚನೆ ನೀಡಿದ್ದಾರೆ.
‘06 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ಕಾರ್ಯವಿಧಾನಗಳ ಮಾರ್ಗಸೂಚಿಗಳು-2025’ ಅನ್ನು ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಈ ಪ್ರಕಟಣೆ ಹೊರಡಿಸಿದ ದಿನದಿಂದ 2 ತಿಂಗಳೊಳಗೆ ಎಲ್ಲಾ ವಸತಿ ನಿಲಯಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ವಸತಿ ನಿಲಯಗಳು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರೇತರ ಮತ್ತು ಅನುದಾನಿತ ವಸತಿ ನಿಲಯಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅರ್ಜಿ ಸಲ್ಲಿಸಬೇಕು. ಮಾರ್ಗಸೂಚಿ-2025 ರಲ್ಲಿ ನೀಡಲಾಗಿರುವ ‘ನಮೂನೆ-1' ರಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ನಗರದ ಕಂಟೋನ್‌ಮೆAಟ್ ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ (ದೂ.08392-241373) ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಮಂಗಳವಾರ, ಮೇ 12, 2026
ಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನ
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ):
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಭೂ ಒಡೆತನ ಯೋಜನೆ'ಯಡಿ ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ಭೂ ಮಾಲೀಕರೊಬ್ಬರು ತಮ್ಮ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಜಮೀನಿಗೆ ಸಂಬAಧಿಸಿದAತೆ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ನಿಗಮವು ಕಾಲಾವಕಾಶ ನೀಡಿದೆ.
*ಜಮೀನಿನ ವಿವರ:*
ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಹೋಬಳಿಯ ಕಮ್ಮರಚೇಡು ಗ್ರಾಮದ ಸರ್ವೆ ನಂಬರ್ 4/2, ವಿಸ್ತೀರ್ಣ 7 ಎಕರೆ 58 ಗುಂಟೆ.
ಮಾಲೀಕರ ವಿಳಾಸ: ಕೆ.ಹೆಚ್. ಮಹೇಶ್ (ತಂದೆ: ಹನುಮಂತ ರೆಡ್ಡಿ), ವಾರ್ಡ್ ನಂ. 29, ಬಂಡಿಹಟ್ಟಿ, ತಾಯಮ್ಮ ದೇವಸ್ಥಾನ ಹತ್ತಿರ, ಕೌಲ್ ಬಜಾರ್, ಬಳ್ಳಾರಿ ನಗರ.
ಈ ಜಮೀನಿನ ಮಾರಾಟ ಪ್ರಕ್ರಿಯೆಗೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕಾನೂನಾತ್ಮಕ ಅಥವಾ ಇತರ ಆಕ್ಷೇಪಣೆಗಳಿದ್ದಲ್ಲಿ ಮೇ 30 ರೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆAಟ್, ಬಳ್ಳಾರಿ ಇಲ್ಲಿಗೆ ಕಚೇರಿಯ ಅವಧಿಯಲ್ಲಿ ನೇರವಾಗಿ ಭೇಟಿ ನೀಡಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-245551 ಗೆ ಸಂಪರ್ಕಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆ
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ):
ಜಿಲ್ಲೆಯ ಪಡಿತರ ಕಾರ್ಡುದಾರರಿಗೆ ಮೇ ಮತ್ತು ಜೂನ್-2026ರ ಮಾಹೆಯ ಪಡಿತರ ಹಂಚಿಕೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪಿಹೆಚ್‌ಹೆಚ್ ಕಾರ್ಡುದಾರರಿಗೆ ಎನ್‌ಎಫ್‌ಎಸ್‌ಎ ಯೋಜನೆಯಡಿ 5 ಕೆ.ಜಿ ಮತ್ತು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಸೇರಿ ಪ್ರತಿ ಸದಸ್ಯರಿಗೆ ಒಟ್ಟು 10 ಕೆ.ಜಿ ಆಹಾರಧಾನ್ಯ ನೀಡಲಾಗುತ್ತದೆ.
ಅಂತ್ಯೋದಯ ಕಾರ್ಡುದಾರರಿಗೆ ಎನ್‌ಎಫ್‌ಎಸ್‌ಎ ಯೋಜನೆಯಡಿ 35 ಕೆ.ಜಿ ಆಹಾರಧಾನ್ಯ ನೀಡಲಾಗುತ್ತದೆ.
ಅನ್ನಭಾಗ್ಯ ಹೆಚ್ಚುವರಿ ಪಡಿತರ: ಅಂತ್ಯೋದಯ ಕಾರ್ಡ್ನಲ್ಲಿ 4ಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ, ಅಂತಹ ಸದಸ್ಯರಿಗೆ ತಲಾ 5 ಕೆ.ಜಿ ಆಹಾರಧಾನ್ಯ ವಿತರಿಸಲಾಗುತ್ತದೆ.
ಮೇ ಮಾಹೆಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಸಂಬAಧಿಸಿದ ಕೇವಲ ಎನ್‌ಎಫ್‌ಎಸ್‌ಎ ಆಹಾರಧಾನ್ಯಗಳನ್ನು ಮಾತ್ರ ವಿತರಿಸಲಾಗುತ್ತದೆ. ಜೂನ್ ಮಾಹೆಯಲ್ಲಿ ಮೇ ಮತ್ತು ಜೂನ್ ತಿಂಗಳ ಪಾಲಿನ ಅನ್ನಭಾಗ್ಯ ಯೋಜನೆಯ ಪಡಿತರವನ್ನು ಮಾತ್ರ ವಿತರಿಸಲಾಗುತ್ತದೆ.
ಈ ಹಂಚಿಕೆಯ ಹಿನ್ನೆಲೆಯಲ್ಲಿ, ಮೇ ಮತ್ತು ಜೂನ್ ತಿಂಗಳಲ್ಲಿ ಪಡಿತರ ಪಡೆಯುವಾಗ ಸಾರ್ವಜನಿಕರು ಎರಡು ಬಾರಿ ಬಯೋ ದೃಢೀಕರಣ ನೀಡಬೇಕೆಂದು ಸೂಚಿಸಲಾಗಿದೆ. ಪಡಿತರ ಹಂಚಿಕೆಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ, ನಿಗದಿಪಡಿಸಿದ ಪ್ರಮಾಣದಂತೆಯೇ ಆಹಾರಧಾನ್ಯಗಳನ್ನು ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಮೇ 15 ರಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ):
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ‘ಸಮಗ್ರ ಮಕ್ಕಳ ರಕ್ಷಣಾ ಯೋಜನೆ’ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
-----
ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತ ಅಳವಡಿಸಿಕೊಳ್ಳಿ
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ):
ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಡಿಹಟ್ಟಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಹೆಚ್.ಏಸಯ್ಯ ಅವರು ಹೇಳಿದರು.
ನಗರದ ಕೋಟೆ ಪ್ರದೇಶದ ಶ್ರೀ ಮೇಧಾ ಪದವಿ ಪೂರ್ವ ವಿದ್ಯಾಲಯದಲ್ಲಿ ಮೈ ಭಾರತ್ (ಮೇರಾ ಯುವ ಭಾರತ್) ಹಾಗೂ ಚಿಗುರು ಕಲಾತಂಡ ಇಬ್ರಾಹಿಂಪುರ ಇವರ ಸಂಯುಕ್ರಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಜೀವನದಲ್ಲಿ ಎದುರಿಸಿದ ಕಠಿಣ ಸವಾಲುಗಳು ಮತ್ತು ದುಃಖದ ಘಟನೆಗಳನ್ನು ನಾವೆಲ್ಲರೂ ಇಂದು ಸ್ಮರಿಸಬೇಕಾಗಿದೆ ಎಂದರು.
ಇದೇ ವೇಳೆ ಭಾರತದ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮ್ ಕಿರಣ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬ ಮಾನವನೂ ಸಮಾನವಾಗಿ ಬಾಳುವ ಹಕ್ಕನ್ನು ನೀಡಿದ್ದಾರೆ. ನಾವೆಲ್ಲರೂ ಪರಸ್ಪರ ಪ್ರೀತಿ ಮತ್ತು ಮಾನವೀಯತೆಯಿಂದ ಬದುಕಬೇಕು. ವಿದ್ಯಾರ್ಥಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
*ಕ್ರಾಂತಿ ಗೀತೆಗಳ ಗಾಯನ:*
ಜಾನಪದ ಕಲಾವಿದ ತಿಮ್ಮಲಾಪುರದ ಹನುಮಯ್ಯ ಅವರು ಅಂಬೇಡ್ಕರ್ ಅವರ ಹೋರಾಟದ ಬದುಕನ್ನು ಬಿಂಬಿಸುವ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಇವರ ಗಾಯನವು ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.
ಈ ಸಂದರ್ಭದಲ್ಲಿ ಮೇರಾ ಯುವ ಭಾರತ್ ಕೇಂದ್ರದ ಅಮರೇಶ್ವರ, ಚಿಗುರು ಕಲಾತಂಡದ ಅಧ್ಯಕ್ಷ ಹುಲುಗಪ್ಪ ಎಸ್.ಎಂ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
--------
ಸೋಮವಾರ, ಮೇ 11, 2026
ಸಣ್ಣ ಆಹಾರ ಉದ್ಯಮಗಳಿಗೆ ಪಿಎಂಎಫ್‌ಎAಇ ಯೋಜನೆ
ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ):
ಸಣ್ಣ ಮತ್ತು ಕಿರು ಆಹಾರ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹಾಗೂ ಗ್ರಾಮೀಣ ಭಾಗದ ಉದ್ಯಮಗಳನ್ನು ಆರ್ಥಿಕವಾಗಿ ಸಬಲೀಕರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಜಿಲ್ಲೆಯ ರೈತರು ಮತ್ತು ಯುವ ಉದ್ಯಮಿಗಳಿಗೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ನಡೆಸುತ್ತಿರುವ ಉದ್ಯಮಿಗಳು ತಮ್ಮ ವ್ಯವಹಾರವನ್ನು ಅಧಿಕೃತವಾಗಿ ನೋಂದಾಯಿಸಿಕೊಳ್ಳಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಅವಕಾಶವಿದೆ.
ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಖರೀದಿಗೆ ಒಟ್ಟು ಶೇ.50 ಸಹಾಯಧನ ದೊರೆಯಲಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.35 ಆಗಿದ್ದರೆ, ರಾಜ್ಯ ಸರ್ಕಾರವು ಶೇ.15 ರಷ್ಟು ನೆರವು ನೀಡುತ್ತದೆ. ಉದ್ದಿಮೆದಾರರಿಗೆ ಬ್ಯಾಂಕ್‌ಗಳ ಮೂಲಕ ಶೇ.90 ರಷ್ಟು ಸುಲಭ ಸಾಲದ ಸೌಲಭ್ಯವನ್ನು ಒದಗಿಸಲಾಗುವುದು.
ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಗತ್ಯವಾದ ತಾಂತ್ರಿಕ ತರಬೇತಿಯನ್ನು ನೀಡಲಾಗುತ್ತದೆ. ಸಣ್ಣ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಮಾರುಕಟ್ಟೆ ಪ್ರವೇಶಿಸಲು ನೆರವು ನೀಡಲಾಗುತ್ತದೆ.
*ಯಾರು ಅರ್ಜಿ ಸಲ್ಲಿಸಬಹುದು?:*
ಸಣ್ಣ ಆಹಾರ ಉತ್ಪಾದಕರು, ಮನೆಯಲ್ಲಿಯೇ ಆಹಾರ ಉತ್ಪನ್ನಗಳನ್ನು ತಯಾರಿಸುವ ಉದ್ಯಮಿಗಳು, ಸ್ವಸಹಾಯ ಗುಂಪುಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
*ಬಳ್ಳಾರಿ ಜಿಲ್ಲೆಗೆ ವಿಶೇಷ ಅವಕಾಶ:*
ಬಳ್ಳಾರಿ ಜಿಲ್ಲೆಯು ಭತ್ತ, ಮೆಕ್ಕೆಜೋಳ, ಮೆಣಸಿನಕಾಯಿ, ದಾಳಿಂಬೆ ಹಾಗೂ ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ರೈತರು ತಮ್ಮ ಈ ಬೆಳೆಗಳನ್ನು ಕೇವಲ ಕಚ್ಚಾ ರೂಪದಲ್ಲಿ ಮಾರಾಟ ಮಾಡದೆ, ಈ ಯೋಜನೆಯಡಿ ಸಂಸ್ಕರಿಸಿ ಮಾರಾಟ ಮಾಡುವುದರಿಂದ ಹೆಚ್ಚಿನ ಲಾಭ ಗಳಿಸಲು ಸಾಧ್ಯವಿದೆ.
ಆತ್ಮನಿರ್ಭರ ಭಾರತದ ಕನಸನ್ನು ನನಸು ಮಾಡುವಲ್ಲಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಪಿಎಂಎಫ್‌ಎAಇ ಯೋಜನೆ ಮಹತ್ವದ ಪಾತ್ರ ವಹಿಸುತ್ತದೆ. ಜಿಲ್ಲೆಯ ಯುವಕರು ಮತ್ತು ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಆಸಕ್ತರು ಪಿಎಂಎಫ್‌ಎAಇ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ರೈತರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ರೈತ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1800-425-3553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
‘ಸಖಿ’ ಒನ್ ಸ್ಟಾಪ್ ಸೆಂಟರ್‌ನ ಕಾನೂನು ಸಲಹೆಗಾರರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ
ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ವೈದ್ಯಕೀಯ, ಪೊಲೀಸ್ ಸಹಾಯ, ಕಾನೂನು ನೆರವು, ಸಮಾಲೋಚನೆ ಹಾಗೂ ತಾತ್ಕಾಲಿಕ ವಸತಿ ಒಳಗೊಂಡು ಸಮಗ್ರ ಸೇವೆಗಳನ್ನು ನೀಡಲು ಅಗತ್ಯವಿರುವ ಇಬ್ಬರು ಕಾನೂನು ಸಲಹೆಗಾರರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ.
ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ವಾರದ 24*7 ಅವಧಿಯಲ್ಲಿ ಪಾಳಿ ಆಧಾರದ ಮೇಲೆ ಕೆಲಸ ನಿರ್ವಹಿಸಬೇಕಿರುತ್ತದೆ.
ಏ.27 ರಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಹಾಗೂ ಸದಸ್ಯರ ನೇತೃತ್ವದಲ್ಲಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಒಟ್ಟು 7 ಅಭ್ಯರ್ಥಿಗಳು ಹಾಜರಿದ್ದು, ಇಬ್ಬರು ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಹಾಜರಿದ್ದ 7 ಅರ್ಹ ಅಭ್ಯರ್ಥಿಗಳಿಗೆ ಮುಂದಿನ ಹಂತದ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ಅದರ ದಿನಾಂಕವನ್ನು ಶೀಘ್ರದಲ್ಲೇ ಪ್ರತ್ಯೇಕವಾಗಿ ಪ್ರಕಟಿಸಲಾಗುವುದು.
*ಆಯ್ಕೆಯ ಮಾನದಂಡಗಳು (ಒಟ್ಟು 100 ಅಂಕ):*
ಅಭ್ಯರ್ಥಿಗಳ ಆಯ್ಕೆಯನ್ನು ಈ ಕೆಳಕಂಡ ಪಾರದರ್ಶಕ ಮಾನದಂಡಗಳ ಆಧಾರದ ಮೇಲೆ ನಡೆಸಲಾಗುತ್ತದೆ. ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು-ಶೇ.65, ಕೆಲಸದ ಅನುಭವ ಪ್ರತಿ 2 ವರ್ಷಕ್ಕೆ 2 ಅಂಕಗಳAತೆ ಒಟ್ಟು 10, ಸಂವಹನ ಕೌಶಲ್ಯಗಳು-10 ಅಂಕ, ವಿಷಯ ಜ್ಞಾನ-10 ಅಂಕ ಹಾಗೂ ಕಾರ್ಯನಿರ್ವಹಣೆ -05 ಅಂಕ ಸೇರಿ ಒಟ್ಟು 100 ಅಂಕಗಳಿಗೆ ಸಂದರ್ಶನಕ್ಕೆ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
-------
ಪ್ರತಿಷ್ಠಿತ ಶಾಲೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ; ಮೇ 16ಕ್ಕೆ ದಿನ ನಿಗದಿ
ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಬೇಕಿದ್ದ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಮೊದಲು ಮೇ 12 ರಂದು ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಯನ್ನು ಈಗ ಮೇ 16 ರಂದು ನಡೆಸಲು ತೀರ್ಮಾನಿಸಲಾಗಿದೆ.
ಮೇ 16 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಹೆಡ್ ಪೋಸ್ಟ್ ಆಫೀಸ್ ಹತ್ತಿರದ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಅಲ್ಲೀಪುರದ ವಿಶ್ವೇಶ್ವರಯ್ಯ ಪ್ರೌಢ ಶಾಲೆ(ಬೆಸ್ಟ್ ಸ್ಕೂಲ್), ವಿದ್ಯಾನಗರದ ನಂದ ವಸತಿ ಶಾಲೆ, ಬೆಳಗಲ್ ಕ್ರಾಸ್ ನ ಶ್ರೀ ನಂದಿ ಪ್ರೌಢಶಾಲೆ (ಸಿ.ಬಿ.ಎಸ್.ಇ) (ವಸತಿ ರಹಿತ), ಸಿರುಗುಪ್ಪದ ವಿಜಯಮೇರಿ ಪ್ರಾಥಮಿಕ ಶಾಲೆ (ವಸತಿ ಸಹಿತ), ದಮ್ಮೂರಿನ ಬೃಂದಾ ಇಂಟರ್ ನ್ಯಾಷನಲ್ ಸ್ಕೂಲ್(ವಸತಿ ಸಹಿತ) ಶಾಲೆಗಳಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು-ಬಳ್ಳಾರಿ ಮೊ.8495026070, ಸಿರುಗುಪ್ಪ ಮೊ.9742581434 ಹಾಗೂ ಸಂಡೂರು ಮೊ.9448316710 ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಮೇ 14 ರಂದು ನೇರ ಸಂದರ್ಶನ
ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಮೇ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಎಂ.ಜಿ ರಸ್ತೆಯ ಶಾಂತಿನಿಕೇತನ ಶಾಲೆಯ ಮುಂಭಾಗದ ಭಾರತ್ ಫೈನಾನ್ಷಿಯಲ್ ಇನ್ಕೂ÷್ಲಷನ್ ಲಿಮಿಟೆಡ್ ಕಚೇರಿಯಲ್ಲಿ ವಿಶೇಷ ನೇರ ಸಂದರ್ಶನ ಆಯೋಜಿಸಲಾಗಿದೆ.
ಇಂಡಸ್ ಇಂಡ್ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪಿಯುಸಿ ಅಥವಾ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ದ್ವಿಚಕ್ರ ವಾಹನ ಕಡ್ಡಾಯವಾಗಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಳ್ಳಾರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಬಳ್ಳಾರಿ ಜಿಲ್ಲೆಯಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಲಸಿಕಾ ಅಭಿಯಾನ: 14 ವರ್ಷದ 5,658 ಹೆಣ್ಣು ಮಕ್ಕಳಿಗೆ ಲಸಿಕೆ ವಿತರಣೆ
ಬಳ್ಳಾರಿ,ಮೇ 11(ಕರ್ನಾಟಕ ವಾರ್ತೆ):
ಹೆಣ್ಣು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಾರಕವಾಗಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಿಲ್ಲೆಯಾದ್ಯಂತ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆಯನ್ನು ನೀಡಲಾಗುತ್ತಿದೆ. ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ಈ ಸುರಕ್ಷಿತ ಲಸಿಕೆಯನ್ನು ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.
ವೈಯಕ್ತಿಕ ಶುಚಿತ್ವದ ಕೊರತೆ ಹಾಗೂ ಅಸುರಕ್ಷಿತ ಲೈಂಗಿಕ ಸಂಪರ್ಕದಿAದ ಹರಡುವ ಹೆಚ್.ಪಿ.ವಿ ಸೋಂಕು ಕಾಲಕ್ರಮೇಣ ಕ್ಯಾನ್ಸರ್ ಆಗಿ ಮಾರ್ಪಡುತ್ತದೆ. ಇದನ್ನು ತಡೆಯಲು 14 ವರ್ಷದ ಹರೆಯದಲ್ಲೇ ಲಸಿಕೆ ನೀಡುವುದು ಅತ್ಯಂತ ಪರಿಣಾಮಕಾರಿ ಕ್ರಮವಾಗಿದೆ. ಈ ಲಸಿಕೆಯನ್ನು ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ.99 ರಷ್ಟು ತಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಅಭಿಯಾನವು ಮಾರ್ಚ್ 11 ರಿಂದ ಪ್ರಾರಂಭವಾಗಿದ್ದು, ಒಟ್ಟು 90 ದಿನಗಳ ಕಾಲ ನಡೆಯಲಿದೆ. 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಈ ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದು, ಲಸಿಕೆ ಪಡೆಯಲು ಬರುವಾಗ ಪೋಷಕರು ಜೊತೆಯಲ್ಲಿರಬೇಕು ಮತ್ತು ಮಗುವಿನ ಜನನ ಪ್ರಮಾಣ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಇದುವರೆಗೆ ಲಸಿಕೆ ಪಡೆದ ಮಕ್ಕಳಲ್ಲಿ ಯಾವುದೇ ಅಡ್ಡಪರಿಣಾಮಗಳು ಕಂಡುಬAದಿಲ್ಲ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
*ಗುರಿ:* ಜಿಲ್ಲೆಯಲ್ಲಿ ಒಟ್ಟು 16,495 ಹೆಣ್ಣು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈವರೆಗೆ 5,658 ಮಕ್ಕಳಿಗೆ ಲಸಿಕೆ ನೀಡಲಾಗಿದೆ.
*ತಾಲ್ಲೂಕುವಾರು ಪ್ರಗತಿ ವಿವರ:*
ಬಳ್ಳಾರಿ ತಾಲ್ಲೂಕಿನಲ್ಲಿ 7,578 ಹೆಣ್ಣು ಮಕ್ಕಳ ಗುರಿ ಹೊಂದಲಾಗಿದ್ದು, ಇದುವರೆಗೆ 2,324 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಅದರಂತೆ, ಸಂಡೂರು ತಾಲ್ಲೂಕಿನಲ್ಲಿ 2,840 ಮಕ್ಕಳಲ್ಲಿ 881 ಮಕ್ಕಳಿಗೆ ಹಾಕಲಾಗಿದೆ. ಸಿರುಗುಪ್ಪ ತಾಲ್ಲೂಕಿನಲ್ಲಿ 3,054 ಮಕ್ಕಳಲ್ಲಿ 1,453 ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ 1,543 ಮಕ್ಕಳಲ್ಲಿ 630 ಮಂದಿಗೆ ಲಸಿಕೆ ನೀಡಲಾಗಿದೆ ಹಾಗೂ ಕಂಪ್ಲಿ ತಾಲ್ಲೂಕಿನ 1,480 ಹೆಣ್ಣು ಮಕ್ಕಳಲ್ಲಿ 370 ಹೆಣ್ಣು ಲಸಿಕೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಲಸಿಕೆಯ ಬಗ್ಗೆ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಬೇಡಿ. ಕ್ಯಾನ್ಸರ್ ಮುಕ್ತ ನಾಳೆಗಾಗಿ ಇಂದು ನಿಮ್ಮ ಮಕ್ಕಳಿಗೆ ಲಸಿಕೆಯ ಸುರಕ್ಷಾ ಕವಚವನ್ನು ನೀಡಿ. ಹೆಚ್ಚಿನ ಮಾಹಿತಿಗಾಗಿ ಅಥವಾ ಲಸಿಕೆ ಪಡೆಯಲು ಪೋಷಕರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಬಳ್ಳಾರಿ: ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ
ಬಳ್ಳಾರಿ,ಮೇ 10(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 'ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ'ಯನ್ನು ಭಾನುವಾರ ಅತ್ಯಂತ ಸರಳವಾಗಿ ಆಚರಿಸಲಾಯಿತು.
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶೋಕ ಆಚರಿಸಲಾಗುತ್ತಿದ್ದು, ಸಚಿವರ ನಿಧನಕ್ಕೆ ಗೌರವ ಸೂಚಿಸುವ ಸಲುವಾಗಿ ಕೇವಲ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಹಾಗೂ ಇಲಾಖೆಯ ಸಿಬ್ಬಂದಿ ವರ್ಗ ಇದ್ದರು.
=====
ಶುಕ್ರವಾರ, ಮೇ 8, 2026
ಕಡಲೆಕಾಳು ಖರೀದಿ ಅವಧಿ ಮೇ 28 ರವರೆಗೆ ವಿಸ್ತರಣೆ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಯ ನಿಗದಿತ ಕಾಲಾವಧಿಯನ್ನು ಮೇ 28 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಡಲೆಕಾಳು ಖರೀದಿಯ ಪ್ರಕ್ರಿಯೆಯು ಮೇ 28 ರವರೆಗೆ ಮುಂದುವರಿಯಲಿದೆ. ಈ ಯೋಜನೆಯಡಿ ಕೇವಲ ಈಗಾಗಲೇ ನೋಂದಾಯಿತರಾಗಿರುವ ರೈತರಿಂದ ಮಾತ್ರ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಖರೀದಿ ಪ್ರಕ್ರಿಯೆಯ ಉಳಿದ ನಿಯಮ ಹಾಗೂ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬಳ್ಳಾರಿ ಶಾಖೆಯನ್ನು ಅಥವಾ ಮೊ.9449864453 ಅನ್ನು ಸಂಪರ್ಕಿಸಬಹುದಾಗಿದೆ.
ರೈತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗಬಾರದು. ಸರ್ಕಾರದ ಈ ಸೌಲಭ್ಯವನ್ನು ರೈತರು ನೇರವಾಗಿ ಪಡೆದುಕೊಳ್ಳಬೇಕು ಮತ್ತು ಯಾವುದೇ ವಂಚನೆಗೆ ಒಳಗಾಗಬಾರದು. ಜಿಲ್ಲೆಯ ಎಲ್ಲಾ ಅರ್ಹ ರೈತರು ನಿಗದಿತ ಅವಧಿಯೊಳಗೆ ತಮ್ಮ ಕಡಲೆಕಾಳು ಉತ್ಪನ್ನವನ್ನು ಮಾರಾಟ ಮಾಡಿ ಬೆಂಬಲ ಬೆಲೆಯ ಪ್ರಯೋಜನ ಪಡೆಯಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು' ಯೋಜನೆಯಡಿ ಶೈಕ್ಷಣಿಕ ಸಾಲ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು' ಶೈಕ್ಷಣಿಕ ಸಾಲ ಯೋಜನೆಯಡಿ ವಿವಿಧ ವೃತ್ತಿಪರ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮುಸ್ಲಿಂ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. 2026-27ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುವ ಸಿಇಟಿ ಅಥವಾ ನೀಟ್ ಪರೀಕ್ಷೆಯಲ್ಲಿ ಆಯ್ಕೆಯಾಗಿ ವೈದ್ಯಕೀಯ (ಎಂಬಿಬಿಎಸ್) ಮತ್ತು ದಂತ ವೈದ್ಯಕೀಯ (ಬಿಡಿಎಸ್), ಬಿ.ಇ/ಬಿ.ಟೆಕ್ ಮತ್ತು ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ https://kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯೊಂದಿಗೆ ಮೂಲ ಇನ್ಡೆಮ್ನಿಟಿ ಬಾಂಡ್ ಮತ್ತು ಸಾಲಕ್ಕೆ ಸಂಬAಧಿಸಿದ ಅಗತ್ಯ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನ ಆಜಾದ್ ಭವನ, 1ನೇ ಮಹಡಿ, ಮುಸ್ಲಿಂ ಶಾದಿ ಮಹಾಲ್ ಪಕ್ಕದಲ್ಲಿ, ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ, ಬಳ್ಳಾರಿ-583101 ಅಥವಾ ದೂ.08392-294370 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿ ಮೇ 18ರವರೆಗೆ ವಿಸ್ತರಣೆ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವ ಪ್ರಕ್ರಿಯೆಯ ಕಾಲಾವಧಿಯನ್ನು ಮೇ 18 ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.
ಈ ಸೌಲಭ್ಯವು ಕೇವಲ ಈಗಾಗಲೇ ನೋಂದಾಯಿತರಾದ ರೈತರಿಗೆ ಮಾತ್ರ ಅನ್ವಯಿಸುತ್ತದೆ. ರೈತರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ, ನೇರವಾಗಿ ಸರ್ಕಾರದ ಖರೀದಿ ಕೇಂದ್ರಗಳ ಮೂಲಕವೇ ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಉಳಿದಂತೆ ಖರೀದಿ ಪ್ರಕ್ರಿಯೆಯ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ಮಾಹಿತಿ ಅಥವಾ ವಿಚಾರಣೆಗಾಗಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬಳ್ಳಾರಿ ಶಾಖೆ ಅಥವಾ ಮೊ.9449864453 ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಮೇ 09 ರಂದು ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಇದೇ ಮೇ 09 ರಂದು ಚಿತ್ರದುರ್ಗ ನಗರದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಜನರನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಒಟ್ಟು 200 ಬಸ್ಸುಗಳನ್ನು ಚಿತ್ರದುರ್ಗ ಜಿಲ್ಲೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ಮೇ 09 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ, ಸಂಡೂರು ಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.
ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಮೇ 18 ರಂದು ಬಳ್ಳಾರಿಗೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷರ ಭೇಟಿ: ಸಾರ್ವಜನಿಕ ಕುಂದುಕೊರತೆ ಸಭೆ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ. ಎಲ್ ಅವರು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಮೇ 18 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ಮತ್ತು ಅಹವಾಲು ಸ್ವೀಕಾರ ಮಾಡುವರು.
ಬಳಿಕ ಮಧ್ಯಾಹ್ನ 2.15 ಗಂಟೆಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾ ಗೋಷ್ಠಿ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
*ಸಾರ್ವಜನಿಕರಿಗೆ ಮನವಿ:*
ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಈ ಕುಂದುಕೊರತೆಗಳ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಬಿಎಸ್ಸಿ ಭೂವಿಜ್ಞಾನ ಪದವೀಧರನ ನೈಸರ್ಗಿಕ ಕೃಷಿ ಕ್ರಾಂತಿ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಇಂದಿನ ಆಧುನಿಕ ಯುಗದಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ, ಓದಿದ ಪದವಿಗೂ ತಾನು ಮಾಡುವ ಕಾಯಕಕ್ಕೂ ನಂಟು ಬೆಸೆದು, ರಾಸಾಯನಿಕ ಮುಕ್ತ ಕೃಷಿಯ ಮೂಲಕ ಹೊಸ ಹಾದಿ ನಿರ್ಮಿಸಿದ್ದಾರೆ ಬಳ್ಳಾರಿ ತಾಲೂಕಿನ ಜಾಲಿಬೆಂಚಿ ಗ್ರಾಮದ ಈಶ್ವರ್ ರೆಡ್ಡಿ.
ಬಿಎಸ್ಸಿ ಭೂವಿಜ್ಞಾನ ಪದವೀಧರರಾದ ಇವರು, ಭೂಮಿಯ ಪದರಗಳ ಜ್ಞಾನದೊಂದಿಗೆ ನೈಸರ್ಗಿಕ ಕೃಷಿಯಲ್ಲಿ ತೊಡಗಿ ಜಿಲ್ಲೆಯಾದ್ಯಂತ ಮಾದರಿ ರೈತರಾಗಿ ಹೊರಹೊಮ್ಮಿದ್ದಾರೆ.
*ವೈವಿಧ್ಯಮಯ ಬೆಳೆಗಳ ನಂದನವನ:*
ತಮ್ಮ 11 ಎಕರೆ ಜಮೀನನ್ನು ಈಶ್ವರ್ ರೆಡ್ಡಿ ಅವರು ಕೇವಲ ಒಂದು ಬೆಳೆಗೆ ಸೀಮಿತಗೊಳಿಸದೆ, ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ತೋಟಗಾರಿಕೆ ಬೆಳೆಗಳಾಗಿ 6 ಎಕರೆಯಲ್ಲಿ ತೆಂಗು (320), ಬಾಳೆ (600), ಕೋಕೋ (600) ಮತ್ತು ನುಗ್ಗೆ (600) ಗಿಡಗಳನ್ನು ಬೆಳೆಸಿದ್ದಾರೆ.
ಅರಣ್ಯ ಕೃಷಿಯಲ್ಲಿ ಮಹಾಗನಿ (500), ಹೆಬ್ಬೇವು (300), ಹುಣಸೆ, ಸೀತಾಫಲ, ಪೇರಲ ಮತ್ತು ಕರಿಬೇವು ಸೇರಿದಂತೆ ವಿವಿಧ ಮರಗಳನ್ನು ಬೆಳೆಸಿ ಪರಿಸರ ಸಮತೋಲನ ಕಾಪಾಡಿದ್ದಾರೆ. ಇದಕ್ಕೆ ಅಂತರ ಬೆಳೆಗಳಾಗಿ 2 ಎಕರೆಯಲ್ಲಿ ಮೆಕ್ಕೆಜೋಳ ಮತ್ತು ತೊಗರಿಯನ್ನು ವೈಜ್ಞಾನಿಕವಾಗಿ ಬೆಳೆದಿದ್ದಾರೆ. ನರ್ಸರಿ ಮೂಲಕ 2 ಎಕರೆಯಲ್ಲಿ ಮೆಣಸಿನಕಾಯಿ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುತ್ತಿದ್ದಾರೆ.
*ಕೃಷಿಯ ‘ಪಂಚಾಮೃತ'ಗಳು: ಸಾವಯವವೇ ಇವರ ಬ್ರಹ್ಮಾಸ್ತç:*
ರಾಸಾಯನಿಕ ಗೊಬ್ಬರಗಳಿಗೆ ಈಶ್ವರ್ ರೆಡ್ಡಿ ಅವರ ಹೊಲದಲ್ಲಿ ಪ್ರವೇಶವಿಲ್ಲ. ಮನೆಯಲ್ಲೇ ಇರುವ 4 ಗಿರ್ ಆಕಳುಗಳು ಇವರ ಕೃಷಿ ಸಾಮ್ರಾಜ್ಯದ ಶಕ್ತಿ. ಜೀವಾಮೃತ ಹಾಗೂ ಗೋಕೃಪಾಮೃತಗಳ ಮೂಲಕ ಮಣ್ಣಿನ ಜೀವಾಣುಗಳನ್ನು ಹೆಚ್ಚಿಸಲು ಬಳಸುತ್ತಾರೆ. ಬೇವಿನೆಲೆ, ಹೊಂಗೆ, ಸೀತಾಫಲ, ತುಳಸಿ ಸೇರಿದಂತೆ 20ಕ್ಕೂ ಹೆಚ್ಚು ಸಸ್ಯಗಳ ಎಲೆಗಳಿಂದ ತಯಾರಿಸಿದ ದಶಪರ್ಣಿ ಅರ್ಕವೇ ಬೆಳೆಗಳ ರಕ್ಷಣಾ ಕವಚ. ಮೀನು ಮತ್ತು ಮೊಟ್ಟೆಯಿಂದ ತಯಾರಿಸಿದ ಫಿಶ್ ಹಾಗೂ ಎಗ್ ಅಮೈನೋ ಆಸಿಡ್ ಈ ನೈಸರ್ಗಿಕ ದ್ರಾವಣಗಳು ಸಸ್ಯಗಳಿಗೆ ಸಾರಜನಕ ಒದಗಿಸಿ, ಹೂವು-ಹಣ್ಣು ಬಿಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತಿವೆ. ಕೃಷಿ ತ್ಯಾಜ್ಯದಿಂದ ಜೈವಿಕ ಅನಿಲ ಮತ್ತು ದ್ರವ ಗೊಬ್ಬರ ತಯಾರಿಸಲು ಬಯೋ ಡೈಜೆಸ್ಟರ್ ಬಳಸುತ್ತಿದ್ದಾರೆ.
*ನೀರಿನ ಮಿತವ್ಯಯ ಮತ್ತು ಉಪಕಸುಬು:*
ನೀರಿನ ಅಭಾವ ನೀಗಿಸಲು ಕೃಷಿ ಇಲಾಖೆಯ ನೆರವಿನಿಂದ ಮುಕ್ಕಾಲು ಎಕರೆಯಲ್ಲಿ ಬೃಹತ್ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ. ಇದರಲ್ಲಿ 40,000 ಮೀನುಮರಿಗಳನ್ನು ಬಿಡುವ ಮೂಲಕ ಮೀನುಗಾರಿಕೆಯಲ್ಲೂ ಆದಾಯ ಕಂಡುಕೊAಡಿದ್ದಾರೆ. ಅಲ್ಲದೆ, ಸರ್ಕಾರದ ‘ಪಿಎಂ ಕುಸುಮ್' ಯೋಜನೆಯಡಿ ಸೌರಪಂಪು ಅಳವಡಿಸಿಕೊಳ್ಳುವ ಮೂಲಕ ಸುಸ್ಥಿರ ಇಂಧನ ಬಳಕೆಗೆ ಮುಂದಾಗಿದ್ದಾರೆ.
*ಮಾರುಕಟ್ಟೆ ಮತ್ತು ಯಶಸ್ಸು:*
ಇವರು ಬೆಳೆದ ಬಾಳೆಹಣ್ಣು ಮತ್ತು ನುಗ್ಗೆಕಾಯಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಪ್ರತಿದಿನ 40-50 ಕೆಜಿ ಬಾಳೆಹಣ್ಣು ಹಾಗೂ ನುಗ್ಗೆಯನ್ನು ನೇರವಾಗಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಪೂರೈಸುವ ಮೂಲಕ ಲಾಭದಾಯಕ ಮಾರುಕಟ್ಟೆ ಕಂಡುಕೊAಡಿದ್ದಾರೆ. ಭೂಮಿಯ ಫಲವತ್ತತೆ ಹೆಚ್ಚಿಸಲು ವರ್ಷಕ್ಕೆ 10 ಟ್ರಾö್ಯಕ್ಟರ್‌ಗಳಷ್ಟು ಸಗಣಿ ಗೊಬ್ಬರವನ್ನು ಮಣ್ಣಿಗೆ ಬೆರೆಸುತ್ತಿರುವುದು ಇವರ ಕೃಷಿ ಪ್ರೇಮಕ್ಕೆ ಸಾಕ್ಷಿ.
ಈಶ್ವರ್ ರೆಡ್ಡಿ ಅವರ ಸಾಧನೆಯನ್ನು ಗುರುತಿಸಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಜಯ ಕರ್ನಾಟಕ ಸಂಸ್ಥೆಯಿAದ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಹಾಗೂ ದೂರದರ್ಶನ ಸೇರಿದಂತೆ ಪ್ರಮುಖ ಮಾಧ್ಯಮಗಳು ಇವರ ಕೃಷಿ ಭೂಮಿಗೆ ಭೇಟಿ ನೀಡಿ ಸಂದರ್ಶನ ನಡೆಸಿರುವುದು, ಈಶ್ವರ್ ರೆಡ್ಡಿ ಅವರ 'ಹಸಿರು ಕ್ರಾಂತಿ' ಜಿಲ್ಲೆಗೆ ಮಾದರಿಯಾಗಿದೆ ಎಂಬುದಕ್ಕೆ ಪುಷ್ಟಿ ನೀಡುತ್ತದೆ. ಇವರ ಕ್ಷೇತ್ರವನ್ನು ರಾಷ್ಟಿçÃಯ ನೈಸರ್ಗಿಕ ಕೃಷಿ ಅಭಿಯಾನದಡಿ ‘ಜೈವಿಕ ಇನ್ಪುಟ್ ಸಂಪನ್ಮೂಲ ಕೇಂದ್ರ' ವಾಗಿ ಆಯ್ಕೆ ಮಾಡಲಾಗಿದೆ.
“ಯುವಜನತೆ ಕೇವಲ ಉದ್ಯೋಗದ ಬೆನ್ನತ್ತದೆ, ಭೂಮಿತಾಯಿಯ ಒಡಲನ್ನು ಕೆಡಿಸದೆ ನೈಸರ್ಗಿಕ ಕೃಷಿಯತ್ತ ಮುಖ ಮಾಡಬೇಕು. ವಿಷಮುಕ್ತ ಆಹಾರ ಬೆಳೆಯುವುದೇ ನಾವು ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ” ಎಂದು ಹೇಳುತ್ತಾರೆ ರೈತ ಈಶ್ವರ್ ರೆಡ್ಡಿ.
-----------
ಬರಡಾಗಿದ್ದ ಭೂಮಿಯಲ್ಲಿ ಕೃಷಿ ಕ್ರಾಂತಿ: ಮೋಕಾ ಹೋಬಳಿಯ ರೈತ ಭೋಗಾ ರೆಡ್ಡಿಗೆ ‘ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ' ಪ್ರಶಸ್ತಿ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
“ಛಲವಿದ್ದರೆ ಬರಡು ಭೂಮಿಯನ್ನೂ ಬಂಗಾರ ಮಾಡಬಹುದು” ಎಂಬುದನ್ನು ಬಳ್ಳಾರಿ ತಾಲ್ಲೂಕಿನ ಮೋಕಾ ಹೋಬಳಿಯ ಕೆ.ವೀರಾಪುರ ಗ್ರಾಮದ ಪ್ರಗತಿಪರ ರೈತ ಭೋಗಾ ರೆಡ್ಡಿ ಅವರು ಸಾಬೀತುಪಡಿಸಿದ್ದಾರೆ.
ಮಳೆ ಕೊರತೆಯಿಂದ ಕೃಷಿಯೇ ಅಸಾಧ್ಯವೆನ್ನಲಾಗುವ ಈ ಭಾಗದಲ್ಲಿ, ತಮ್ಮ 3.5 ಎಕರೆ ಒಣಭೂಮಿಯಲ್ಲಿ ಅವರು ಕಂಡುಕೊAಡ ಕೃಷಿ ಲಾಭ ಇಂದು ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.
ಅಪ್ಪಟ ಪರಿಶ್ರಮ ಮತ್ತು ವೈಜ್ಞಾನಿಕ ದೃಷ್ಟಿಕೋನದೊಂದಿಗೆ ಕೃಷಿ ಕೈಗೊಂಡಿರುವ ಭೋಗಾ ರೆಡ್ಡಿ ಅವರಿಗೆ, ಕೃಷಿ ಇಲಾಖೆಯ ವತಿಯಿಂದ ‘ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.
*ಬಹುಬೆಳೆ ಪದ್ಧತಿಯೇ ಯಶಸ್ಸಿನ ಸೂತ್ರ:*
ಕೇವಲ ಒಂದು ಬೆಳೆಗೆ ಸೀಮಿತವಾಗದೆ, ಅರಣ್ಯ ಕೃಷಿ ಹಾಗೂ ತೋಟಗಾರಿಕೆಯನ್ನು ಮೇಳೈಸುವ ಮೂಲಕ ಇವರು ಅಚ್ಚರಿ ಮೂಡಿಸಿದ್ದಾರೆ. ಇವರ ಜಮೀನಿನಲ್ಲಿ ಪ್ರಸ್ತುತ 650 ಮಹಾಗನಿ, 140 ಸಾಗುವಾಣಿ (ಟೀಕ್), 100 ಹೆಬ್ಬೇವು ಹಾಗೂ 18 ಶ್ರೀಗಂಧದ ಗಿಡಗಳಿವೆ. ತೋಟಗಾರಿಕೆ ಬೆಳೆಗಳಾಗಿ 150 ಸಪೋಟಾ, 50 ನಿಂಬೆ, 20 ತೆಂಗು, 4 ಮಾವು ಹಾಗೂ 20 ಕರಿಬೇವು ಗಿಡಗಳನ್ನು ಯಶಸ್ವಿಯಾಗಿ ಬೆಳೆಸುತ್ತಿದ್ದಾರೆ. ಇದರೊಂದಿಗೆ ವಾರ್ಷಿಕ ಬೆಳೆಗಳು ಹಾಗೂ ಹೈನುಗಾರಿಕೆಯನ್ನೂ (ಡೈರಿ) ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.
*ಆಧುನಿಕತೆ ಮತ್ತು ಸಂಪ್ರದಾಯದ ಸಂಗಮ:*
ನೀರಿನ ಕೊರತೆಯನ್ನು ನೀಗಿಸಲು ಜಮೀನಿನಲ್ಲಿ ಎರಡು ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿದ್ದು, ಸಮರ್ಪಕ ನೀರಾವರಿ ವ್ಯವಸ್ಥೆ ಅಳವಡಿಸಿದ್ದಾರೆ. ವಿದ್ಯುತ್ ಉಳಿತಾಯ ಹಾಗೂ ಪರಿಸರ ಸ್ನೇಹಿ ಕೃಷಿಗಾಗಿ ಸೌರ ಪಂಪ್‌ಸೆಟ್ ಬಳಸುತ್ತಿರುವುದು ವಿಶೇಷ.
ಮಣ್ಣಿನ ಆರೋಗ್ಯ ಕಾಪಾಡಲು ಇವರು ಯಾವುದೇ ರಾಸಾಯನಿಕ ಗೊಬ್ಬರದ ಮೊರೆ ಹೋಗದೆ, ಹೊಲದಲ್ಲಿ ಬಿದ್ದ ಎಲೆಗಳಿಂದಲೇ ಸ್ವಯಂ ಕಾಂಪೋಸ್ಟ್ ಗೊಬ್ಬರ ತಯಾರಿಸಿ ಗಿಡಗಳಿಗೆ ಬಳಸುತ್ತಿದ್ದಾರೆ. ಪ್ರಾಚೀನ ಪದ್ಧತಿ ಹಾಗೂ ಸರ್ಕಾರದ ಇಲಾಖೆಗಳ ತಜ್ಞರ ಸಲಹೆಯನ್ನು ಸರಿಯಾದ ಸಮಯದಲ್ಲಿ ಅಳವಡಿಸಿಕೊಂಡಿರುವುದೇ ಇವರ ಈ ಸಾಧನೆಯ ಗುಟ್ಟು.
*ರೈತರಿಗೆ ಮಾದರಿ:*
ತಂದೆಯ ಈ ಸಾಹಸಕ್ಕೆ ಪುತ್ರ ರಾಜಶೇಖರ ರೆಡ್ಡಿ ಬೆನ್ನೆಲುಬಾಗಿ ನಿಂತಿದ್ದಾರೆ. ಕೃಷಿ ಇಲಾಖೆಯ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಬೆಳೆದ ಇವರ ತೋಟ, ಇಂದು ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಒಂದು 'ಕೃಷಿ ಪಾಠಶಾಲೆ'ಯಂತಿದೆ. ಕೃಷಿ ಅಸಾಧ್ಯವೆಂದು ನಗರ ಪ್ರದೇಶಗಳತ್ತ ಮುಖ ಮಾಡುವ ಯುವಕರಿಗೆ, ಭೋಗಾ ರೆಡ್ಡಿ ಅವರ ಈ ಸಾಧನೆ ಒಂದು ಸ್ಫೂರ್ತಿಯ ಸೆಲೆಯಾಗಿದೆ.
-----------
ಯೂಟ್ಯೂಬ್ ರೈತನ ಯಶೋಗಾಥೆ: ಸಾವಯವ ಕೃಷಿಯಲ್ಲಿ ನಿತೀಶ್ ರೆಡ್ಡಿ ಸಾಧನೆ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಕೇವಲ 1.67 ಎಕರೆ ಜಮೀನಿನಲ್ಲಿ ಆಧುನಿಕ ಮತ್ತು ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿರುವ ನಿತೀಶ್ ರೆಡ್ಡಿ ಇಂದು ಜಿಲ್ಲೆಯ ಯುವ ರೈತರಿಗೆ ಮಾದರಿಯಾಗಿದ್ದಾರೆ.
*ಪ್ರೇರಣೆ ಮತ್ತು ಕೃಷಿ ಆರಂಭ:*
ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ನಿತೀಶ್ ರೆಡ್ಡಿ, ಐ.ಟಿ.ಐ ವಿದ್ಯಾಭ್ಯಾಸ ಮುಗಿಸಿದ್ದು, ಉದ್ಯೋಗಕ್ಕಾಗಿ ಅಲೆಯದೆ ಕೃಷಿಯಲ್ಲಿ ತೊಡಗಿಸಿಕೊಂಡರು. ಮಹಾರಾಷ್ಟçದ ಕನ್ನೇರಿ ಮಠದ ಪೂಜ್ಯ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಸಾವಯವ ಕೃಷಿ ಪದ್ಧತಿಯನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿದ ಇವರು, ಅದರಿಂದ ಪ್ರೇರಿತರಾಗಿ ತಮ್ಮ ಪುಟ್ಟ ಜಮೀನಿನಲ್ಲಿ ಪ್ರಯೋಗ ಆರಂಭಿಸಿದರು.
*ವೈವಿಧ್ಯಮಯ ಬೆಳೆಗಳ ಸಮಾಗಮ:*
ನಿತೀಶ್ ರೆಡ್ಡಿ ತಮ್ಮ ಜಮೀನಿನಲ್ಲಿ ಕೇವಲ ಒಂದೇ ಬೆಳೆಗೆ ಸೀಮಿತವಾಗದೆ ವೈವಿಧ್ಯತೆಯನ್ನು ಕಾಪಾಡಿಕೊಂಡಿದ್ದಾರೆ. ‘ಟಿ' ಮಾದರಿಯಲ್ಲಿ 2*10 ಅಡಿ ಅಂತರದಲ್ಲಿ ಡ್ರಾಗನ್ ಹಣ್ಣು ಬೆಳೆಸಿದ್ದಾರೆ. ಬಳ್ಳಾರಿಯ ಉಷ್ಣ ಹವಾಗುಣಕ್ಕೆ ಹೊಂದಿಕೊಳ್ಳುವ 330 ಸೇಬು ಗಿಡಗಳನ್ನು ಉಪಬೆಳೆಯಾಗಿ ಬೆಳೆಯುತ್ತಿದ್ದಾರೆ.
ಅದರ ಜೊತೆಗೆ ಹೊಲದ ಸುತ್ತಲೂ ತೆಂಗು, ಬಾಳೆ, ಪಪ್ಪಾಯ, ಕರಿಬೇವು, ನಿಂಬೆ, ಸಪೋಟ, ಬಟರ್ ಫ್ರೂಟ್, ಮೋಸಂಬಿ, ಪೇರಲ ಮತ್ತು ಸೀತಾಫಲದಂತಹ ಹಣ್ಣಿನ ಗಿಡಗಳನ್ನು ಮಿಶ್ರ ಬೆಳೆಯಾಗಿ ಬೆಳೆಸಿದ್ದಾರೆ.
ಡ್ರಾಗನ್ ಹಣ್ಣಿನ ಸಾಲುಗಳ ಮಧ್ಯೆ ಬೆಂಡೆಕಾಯಿ, ಸೌತೇಕಾಯಿ, ಹೀರೆಕಾಯಿಯಂತಹ ತರಕಾರಿಗಳನ್ನು ಬೆಳೆಯುವ ಮೂಲಕ ಅಂತರ ಬೇಸಾಯ ಪದ್ಧತಿಯಿಂದ ಜಾಗದ ಸದುಪಯೋಗ ಪಡೆದಿದ್ದಾರೆ.
*ಸಾವಯವ ಪದ್ಧತಿ ಮತ್ತು ನಿರ್ವಹಣೆ:*
ಸಂಪೂರ್ಣ ರಾಸಾಯನಿಕ ಮುಕ್ತ ಕೃಷಿ ಇವರ ಗುರಿ. ಪರಾಗಸ್ಪರ್ಶ ಕ್ರಿಯೆ ಹೆಚ್ಚಿಸಿ ಉತ್ತಮ ಇಳುವರಿ ಪಡೆಯಲು ಜೇನು ಪೆಟ್ಟಿಗೆಗಳನ್ನು ಅಳವಡಿಸಿ ಜೇನು ಸಾಕಾಣಿಕೆ ಕೃಷಿ ಮಾಡಿದ್ದಾರೆ. ಜೀವಾಮೃತ, ಪಂಚಗವ್ಯ, ಗೋಕೃಪಾಮೃತ ಮತ್ತು ಘನ ಜೀವಾಮೃತದಂತಹ ನೈಸರ್ಗಿಕ ಗೊಬ್ಬರಗಳನ್ನು ತಾವೇ ತಯಾರಿಸುತ್ತಾರೆ.
*ನವೀನ ತಂತ್ರಜ್ಞಾನ:*
ಕೊರಿಯನ್ ನೈಸರ್ಗಿಕ ಕೃಷಿ ಪದ್ಧತಿಯಡಿ ಬಾಳೆದಿಂಡಿನ ದ್ರವ ರೂಪದ ಗೊಬ್ಬರ ಮತ್ತು ಮೀನಿನ ಅಮೈನೋ ಆಸಿಡ್‌ಗಳನ್ನು ಬಳಸುವ ಮೂಲಕ ನವೀನ ತಂತ್ರಜ್ಞಾನ ಅಳವಡಿಕೊಂಡಿದ್ದಾರೆ.
*ಸಬ್ಸಿಡಿ ಸೌಲಭ್ಯ:*
ಕೃಷಿ ಇಲಾಖೆಯ ಕೋಳೂರಿನ ರೈತ ಸಂಪರ್ಕ ಕೇಂದ್ರದ ವತಿಯಿಂದ 2025-26 ನೇ ಸಾಲಿನಲ್ಲಿ ರಾಷ್ಟಿçÃಯ ಕೃಷಿ ವಿಕಾಸ ಯೋಜನೆ ಮತ್ತು ಸಮಗ್ರ ಕೃಷಿ ಪದ್ಧತಿ ಯೋಜನೆಯಡಿ ಹಸು, ಎರೆಹುಳು ತೊಟ್ಟಿ ಮತ್ತು ಜೇನು ಪೆಟ್ಟಿಗೆ ಖರೀದಿಸಲು 30 ಸಾವಿರ ರೂ. ಸಹಾಯಧನ ಪಡೆದಿದ್ದಾರೆ.
*ಆದಾಯ ಮತ್ತು ಮಾರುಕಟ್ಟೆ:*
ನಿತೀಶ್ ರೆಡ್ಡಿ ಕೇವಲ ಬೆಳೆಯುವುದಷ್ಟೇ ಅಲ್ಲದೆ, ಉತ್ತಮ ಮಾರುಕಟ್ಟೆ ಮಾಹಿತಿಯನ್ನೂ ಯೂಟ್ಯೂಬ್ ಮೂಲಕವೇ ಪಡೆಯುತ್ತಾರೆ. ತಮ್ಮ ಉತ್ಪನ್ನಗಳನ್ನು ಗುಣಮಟ್ಟದ ಆಧಾರದ ಮೇಲೆ ವರ್ಗೀಕರಿಸಿ, ತಾವೇ ಖುದ್ದಾಗಿ ಮಾರಾಟ ಮಾಡುತ್ತಾರೆ. ಡ್ರಾಗನ್ ಹಣ್ಣಿನಿಂದ ವಾರ್ಷಿಕವಾಗಿ ಸುಮಾರು 1.5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ.
*ಗೌರವ ಮತ್ತು ಪ್ರಶಸ್ತಿ:*
ಈ ಸಾಧನೆಯನ್ನು ಗುರುತಿಸಿ, ಕೃಷಿ ಇಲಾಖೆಯು ನಿತೀಶ್ ರೆಡ್ಡಿಯವರ ತಾಯಿ ನಿರ್ಮಲಾ ಅವರಿಗೆ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ (ರೈತ ಮಹಿಳೆ) ಪ್ರಶಸ್ತಿ ನೀಡಿ ಗೌರವಿಸಿದೆ ಹಾಗೂ ಸಾವಯವ ಕೃಷಿ ಅಳವಡಿಸಿಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಪಡೆಯುವುದು ಕುರಿತು ಮಾಹಿತಿ ಒದಗಿಸಲಾಗಿದೆ. ಯಾವುದೇ ಕೂಲಿ ಆಳುಗಳ ಸಹಾಯವಿಲ್ಲದೆ ಇಡೀ ಕುಟುಂಬವೇ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು ಈ ಯಶಸ್ಸಿನ ಹಿಂದಿನ ರಹಸ್ಯ ಎಂಬುದು ನಾವೆಲ್ಲರೂ ಕಾಣಬಹುದಾಗಿದೆ.
----------
ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಸೂಚನೆ | ವಸತಿ ನಿಲಯಗಳ ನೋಂದಣಿ ಕಡ್ಡಾಯ ಮತ್ತು ಮಕ್ಕಳ ಸುರಕ್ಷತೆ ಆದ್ಯತೆಯಾಗಬೇಕು
ಬಳ್ಳಾರಿ,ಮೇ 07(ಕರ್ನಾಟಕ ವಾರ್ತೆ):
ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳ ವಸತಿ ನಿಲಯಗಳು ಕಡ್ಡಾಯವಾಗಿ ಹೊಸ ನಿಯಮಾವಳಿಗಳಡಿ ನೋಂದಾಯಿಸಿಕೊಳ್ಳಬೇಕು ಮತ್ತು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2 ತಿಂಗಳ ಅವಧಿಯೊಳಗೆ ಎಲ್ಲಾ ವಸತಿ ನಿಲಯಗಳು 'ಕರ್ನಾಟಕ ಮಕ್ಕಳ ವಸತಿ ನಿಲಯಗಳ ನಿಯಂತ್ರಣ ನಿಯಮಗಳು-2025' ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪನ್ನೇಕರ್ ಅವರು ಮಾತನಾಡಿ, ಪ್ರತಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ, ಮೇಲ್ವಿಚಾರಣಾ ಸಮಿತಿ ಮತ್ತು ರ್ಯಾಗಿಂಗ್ ತಡೆ ಸಮಿತಿಗಳನ್ನು ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು ಎಂದು ಹೇಳಿದರು.
ಆಡಳಿತ ಮಂಡಳಿಗಳಲ್ಲಿ ಕನಿಷ್ಠ ಒಬ್ಬ ಮಹಿಳಾ ಸದಸ್ಯರಿರಬೇಕು. ಬಾಲಕಿಯರ ನಿಲಯಗಳಿಗೆ ಮಹಿಳಾ ವಾರ್ಡನ್ ಮತ್ತು ಬಾಲಕರ ನಿಲಯಗಳಿಗೆ ಪುರುಷ ವಾರ್ಡನ್ ನೇಮಿಸುವುದು ಕಡ್ಡಾಯ. ಮಕ್ಕಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ತಡೆಯಲು ಪ್ರತಿ 15 ದಿನಗಳಿಗೊಮ್ಮೆ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ತಪಾಸಣೆ ಮಾಡಬೇಕು. ಅಲ್ಲದೆ, 1098 ಮತ್ತು 112 ಸಹಾಯವಾಣಿ ಸಂಖ್ಯೆಗಳನ್ನು ಗೋಡೆಗಳ ಮೇಲೆ ಕಡ್ಡಾಯವಾಗಿ ಬರೆಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ವಸತಿ ನಿಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯನ್ನು ಖಾತ್ರಿಪಡಿಸಿಕೊಳ್ಳಲು ಸೂಚಿಸಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ಮಕ್ಕಳ ರಕ್ಷಣಾ ನೀತಿ-2015 ರ ಅನುಷ್ಠಾನದ ಪರಿಷ್ಕೃತ ಮಕ್ಕಳ ರಕ್ಷಣಾ ನೀತಿಯಡಿ ಸಿಬ್ಬಂದಿಗಳ ಕಡ್ಡಾಯ ಪೊಲೀಸ್ ಪರಿಶೀಲನೆ, ದೂರು ಪೆಟ್ಟಿಗೆಗಳ ಅಳವಡಿಕೆ ಮತ್ತು ನಿಗದಿತ ಊಟದ ಮೆನು ಪಾಲನೆ, ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ತಜ್ಞರಿಂದ ನಿರಂತರ ತಪಾಸಣೆ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ, ಡಿಡಿಪಿಐ ಉಮಾದೇವಿ ಹಾಗೂ ಜಿಲ್ಲೆಯ ವಿವಿಧ ವಸತಿ ನಿಲಯಗಳ 170ಕ್ಕೂ ಹೆಚ್ಚು ಮುಖ್ಯಸ್ಥರು ಮತ್ತು ನಿಲಯಪಾಲಕರು ಉಪಸ್ಥಿತರಿದ್ದರು.
======
ಕುಡತಿನಿ ಪಟ್ಟಣ ವ್ಯಾಪ್ತಿಯಲ್ಲಿ ಮೇ 14ರವರೆಗೆ ನಿಷೇಧಾಜ್ಞೆ ಜಾರಿ
ಬಳ್ಳಾರಿ,ಮೇ 07(ಕರ್ನಾಟಕ ವಾರ್ತೆ):
ಕುಡತಿನಿ ಕೈಗಾರಿಕಾ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆ ಮತ್ತು ಗಡಿ ಗುರುತಿಸುವಿಕೆ ವೇಳೆ ಉಂಟಾಗಬಹುದಾದ ಪ್ರತಿಭಟನೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆಯ ದೃಷ್ಟಿಯಿಂದ ಕುಡತಿನಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 07 ರಿಂದ 14 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಪ-ವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ ಅವರು ಆದೇಶ ಹೊರಡಿಸಿದ್ದಾರೆ.
*ಹಿನ್ನೆಲೆ:*
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕುಡತಿನಿ ಪ್ರದೇಶದಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮೊಜಣಿ ಹಾಗೂ ಗಡಿ ಗುರುತಿಸಲು ಮುಂದಾಗಿದೆ. ಈ ವೇಳೆ ಸ್ಥಳೀಯ ಭೂ ಸಂತ್ರಸ್ತ ರೈತರು ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂಬುದಾಗಿ ಪೊಲೀಸರು ವರದಿ ನೀಡಿರುವ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾದ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
*ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಗಳು:*
ಬಳ್ಳಾರಿ ಉಪ-ವಿಭಾಗಾಧಿಕಾರಿ ರಾಜೇಶ ಹೆಚ್.ಡಿ. ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿ ಈ ಕೆಳಗಿನ ಪ್ರದೇಶಗಳಲ್ಲಿ ನಿರ್ಬಂಧ ವಿಧಿಸಿದ್ದಾರೆ.
ಸಂಪೂರ್ಣ ಕುಡತಿನಿ ಕೆ.ಐ.ಎ.ಡಿ.ಬಿ ಪ್ರದೇಶ, ಬಳ್ಳಾರಿ ಬೈಪಾಸ್ ರಸ್ತೆಯಿಂದ ಸುಲ್ತಾನಪುರ ಕ್ರಾಸ್ ಬಳಿಯ ಬೂದಿಕಣಿವೆವರೆಗೆ, ಸುಲ್ತಾನಪುರ ಕ್ರಾಸ್‌ನಿಂದ ಸುಲ್ತಾನಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಹರಗಿನದೊಣಿ ರಸ್ತೆಯವರೆಗೆ, ಕುಡತಿನಿ ಪಟ್ಟಣದಿಂದ ತಿಮ್ಮಲಾಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಏಳುಬೆಂಚಿ ರಸ್ತೆಯ ರೈಲ್ವೇ ಗೇಟ್ ವರೆಗಿನ ಪ್ರದೇಶ.
ನಿಗದಿಪಡಿಸಿದ ಪ್ರದೇಶಗಳಲ್ಲಿ 4ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರಗಳು, ಪೆಟ್ರೋಲ್, ಡೀಸೆಲ್, ವಿಷದ ಬಾಟಲಿಗಳು, ಕಲ್ಲು, ಸೌದೆ ಅಥವಾ ಚಾಕುಗಳಂತಹ ಹರಿತವಾದ ಆಯುಧಗಳನ್ನು ಹಿಡಿದು ಓಡಾಡುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.
ಈ ಆದೇಶವು ಮೇ 7ರ ಸಂಜೆ 06 ಗಂಟೆಯಿಂದ ಮೇ 14ರ ಸಂಜೆ 06 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
=====
ಗುರುವಾರ, ಮೇ 7, 2026
ಬಳ್ಳಾರಿ: ಮೇ 15 ರಂದು ‘ಪಿಂಚಣಿ ಅದಾಲತ್’ ಮತ್ತು ‘ಜಿಪಿಎಫ್ ಅದಾಲತ್’ ಆಯೋಜನೆ
ಬಳ್ಳಾರಿ,ಮೇ 07(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15 ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇ 15 ರಂದು ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 02.30 ಗಂಟೆಗೆ ಜಿಪಿಎಫ್ ಅದಾಲತ್ ಒಳಗೊಂಡು ಎರಡು ಪ್ರತ್ಯೇಕ ಅವಧಿಗಳಲ್ಲಿ ಈ ಅದಾಲತ್ ಆಯೋಜಿಸಲಾಗಿದೆ.
ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯ ನಿವೃತ್ತಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಸಂಬAಧಿಸಿದ ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಅಪರ ನಿರ್ದೇಶಕರು ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ.
ಪಿಂಚಣಿ ಪಾವತಿಗೆ ಸಂಬAಧಿಸಿದAತೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ ನ ಈ ಸುವರ್ಣಾವಕಾಶ ಬಳಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಸಿಪೆಟ್: ಉದ್ಯೋಗಾಧಾರಿತ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 07(ಕರ್ನಾಟಕ ವಾರ್ತೆ):
ಮೈಸೂರಿನಲ್ಲಿರುವ ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್), ತನ್ನ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಪಾಲಿಮರ್, ಪೆಟ್ರೋಕೆಮಿಕಲ್ಸ್ ಮತ್ತು ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯದಲ್ಲಿ ಜಾಗತಿಕ ಮಟ್ಟದ ಬೇಡಿಕೆ ಇರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗದ ಖಚಿತತೆ ನೀಡುವ ದೃಷ್ಟಿಯಿಂದ ಈ ತರಬೇತಿಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ತಿಳಿಸಿದ್ದಾರೆ.
*ಪ್ರವೇಶಕ್ಕೆ ಲಭ್ಯವಿರುವ ಕೋರ್ಸ್ಗಳು:*
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ- 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ- 3 ವರ್ಷದ ಅವಧಿ.
*ಅರ್ಹತೆಗಳು:*
ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅಥವಾ ಈ ವರ್ಷ ಪರೀಕ್ಷೆ ಬರೆದು ಫಲಿತಾಂಶ ನಿರೀಕ್ಷಿಸುತ್ತಿರುವವರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪಿಯುಸಿ (ವಿಜ್ಞಾನ) ಅಥವಾ ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ಪ್ರವೇಶ ಪಡೆಯಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಆನ್ ಲೈನ್ ವೆಬ್ ಸೈಟ್ (https://cipet26.onlineregistrationform.org/CIPET/) ಅಥವಾ (http://www.cipet.gov.in) ಗೆ ಭೇಟಿ ನೀಡಬಹುದು. ಮೇ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮೊ.9480253024 ಅಥವಾ 9791431827 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಬುಧವಾರ, ಮೇ 6, 2026
ಬಳ್ಳಾರಿ ಕೆಕೆಆರ್‌ಟಿಸಿ ವಿಭಾಗದಲ್ಲಿ ತಾಂತ್ರಿಕ ಶಿಷ್ಯವೇತನ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗವು ಐ.ಟಿ.ಐ ಉತ್ತೀರ್ಣರಾದ ಅಭ್ಯರ್ಥಿಗಳಿಂದ ತಾಂತ್ರಿಕ ಶಿಷ್ಯವೇತನ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಬಳ್ಳಾರಿ ವಿಭಾಗದ ಘಟಕ-1, 2, 3 ಹಾಗೂ ಕುರುಗೋಡು, ಸಿರುಗುಪ್ಪ, ಸಂಡೂರು ಘಟಕಗಳಲ್ಲಿ ಎಲೆಕ್ಟಿçಷಿಯನ್-08, ಡೀಸೆಲ್ ಮೆಕ್ಯಾನಿಕ್-20, ಮೋಟಾರ್ ವೆಹಿಕಲ್ ಮೆಕ್ಯಾನಿಕ್-15 ಸೇರಿ ಒಟ್ಟು 43 ಸ್ಥಾನಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಮೊದಲು ಕೇಂದ್ರ ಸರ್ಕಾರದ ಅಧಿಕೃತ ಪೋರ್ಟಲ್‌ಗಳಾದ www.apprenticeship.gov.in ಅಥವಾ www.ncvtmis.com ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳು ಮಾತ್ರ ನೇರ ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.
ಮೇ 25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಿರುಗುಪ್ಪ ರಸ್ತೆಯ ಕೆ.ಕೆ.ಆರ್.ಟಿ.ಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಸಂದರ್ಶನದ ಮೂಲ ದಾಖಲಾತಿಗಳ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.
*ಅಗತ್ಯವಿರುವ ದಾಖಲೆಗಳು:*
ಐ.ಟಿ.ಐ ಮೂಲ ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಬ್ಯಾಂಕ್ ಪಾಸ್‌ಬುಕ್ ಪ್ರತಿ (ಆಧಾರ್ ಲಿಂಕ್ ಆಗಿರಬೇಕು), ಆನ್‌ಲೈನ್ ನೋಂದಣಿ ಪ್ರತಿ, ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಳ್ಳಾರಿಯ ವಿಭಾಗೀಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇಪಿಎಫ್‌ಓ: ಮೇ 13 ರಂದು ಪಿಂಚಣಿ ಅದಾಲತ್
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಮೇ 10 ರೊಳಗಾಗಿ ರವಾನಿಸಬಹುದಾಗಿದೆ. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ಅವಧಿ ಮೇ 16ರವರೆಗೆ ವಿಸ್ತರಣೆ
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ “ಶುಲ್ಕ ಮರುಪಾವತಿ” ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.
ಪೋಷಕರು, ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ್ದ ದಿನಾಂಕವನ್ನು ಮೇ 16 ರವರೆಗೆ ವಿಸ್ತರಿಸಲಾಗಿದೆ.
*ಅನ್ವಯವಾಗುವ ಕೋರ್ಸ್ಗಳು:*
ಈ ಸೌಲಭ್ಯವು ಬಿ.ಆರ್ಕ್, ಎಂ.ಸಿ.ಎ, ಎಂ.ಸಿ.ಎಚ್ (ವೈದ್ಯಕೀಯ), ಎಂ.ಡಿ, ಎಂ.ಎಸ್ (ಮಾಸ್ಟರ್ ಆಫ್ ಸರ್ಜರಿ), ಎಂ.ಎಸ್, ಎಂ.ಎಸ್ಸಿ (ಅಲೈಡ್ ಸೈನ್ಸಸ್), ಎಂ.ಪಿ.ಟಿ (ಫಿಸಿಯೋಥೆರಪಿ), ಎಂ.ಎಚ್.ಎ, ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್, ಎಂ.ಪಿ.ಎಚ್ (ಅಲೈಡ್ ಸೈನ್ಸಸ್), ಎಂ.ಎಸ್ಸಿ. ನರ್ಸಿಂಗ್, ಎಂ.ಎಸ್ಸಿ, ಎಂ.ಟೆಕ್, ಎಂಬಿಎ, ಎಂಬಿಎ ಫಿನ್‌ಟೆಕ್, ಎಂಬಿಎ (ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್), ಎಂಬಿಬಿಎಸ್, ಎಂಎಸ್ ಆಯುರ್ವೇದ ಎಂಡಿ (ಆಯುರ್ವೇದ), ಎಂಡಿ (ಹೋಮ್), ಎಂಡಿಎಸ್, ಪಿಜಿ ಡಿಪ್ಲೊಮಾ ಇನ್ ಡೆಂಟಲ್, ಫಾರ್ಮ್.ಡಿ (ಪೋಸ್ಟ್ ಬ್ಯಾಕಲೌರಿಯೇಟ್), ಎಂ.ಫಾರ್ಮ್, ಬಿ.ಇ, ಬಿ.ಟೆಕ್, ಬಿ.ಎಸ್ಸಿ(ಆನರ್ಸ್), ಬಿ.ವಿ.ಎಸ್ಸಿ ಮತ್ತು ಎಎಚ್, ಬಿಎಎಂಎಸ್ (ಆಯುರ್ವೇದ), ಬಿಎಚ್‌ಎಂಎಸ್ (ಹೋಮಿಯೋಪತಿ), ಬಿಎನ್‌ವೈಎಸ್ (ಯೋಗ ಮತ್ತು ಪ್ರಕೃತಿ ಚಿಕಿತ್ಸೆ), ಬುಲ್ವಿಎಸ್ (ಯುನಾನಿ), ಬಿಎಎಂಎಸ್, ಬಿಡಿಎಸ್, ಎಂ.ಆರ್ಕ್, ಬಿ.ಎಫ್.ಎಸ್ಸಿ, ಬಿ.ಫಾರ್ಮ್, ಫಾರ್ಮ್.ಡಿ, ಬಿ.ಎಸ್ಸಿ (ಅಲೈಡ್ ಸೈನ್ಸಸ್), ಬಿಪಿಟಿ (ಫಿಸಿಯೋಥೆರಪಿ), ಆಕ್ಯುಪೇಷನಲ್ ಥೆರಪಿಯಲ್ಲಿ ಪದವಿ, ಬಿ.ಡಿ.ಎಸ್. ಬಿ.ಎಸ್ಸಿ.(ನರ್ಸಿಂಗ್), ಬಿ.ಎಸ್ಸಿ(ಪೋಸ್ಟ್ ಈಸಿಕ್), ಬಿ.ಎಡ್, ಬಿ.ಪ್ಲಾನ್, ಡಿಎಂ (ವೈದ್ಯಕೀಯ), ಎಂ.ಫಿಲ್, ಬಿ ಟೆಕ್ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್ (ಪೂರ್ಣ ಸ್ಟಾö್ಯಕ್ ಅಭಿವೃದ್ಧಿ), ಬಿ.ಟೆಕ್ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಎಂಜಿನಿಯರಿAಗ್ (ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ), ಪಿ.ಎಚ್‌ಡಿ, ಪ್ಯಾರಾಮೆಡಿಕಲ್ ಕೋರ್ಸ್ಗಳು ಮತ್ತು ಎಲ್ಲಾ ಡಿಪ್ಲೋಮಾ ಕೋರ್ಸ್ಗಳು ಸೇರಿದಂತೆ ವಿವಿಧ ವೃತ್ತಿಪರ ಮತ್ತು ಪದವಿ/ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಇಲಾಖಾ ಸಹಾಯವಾಣಿ ಮೊ.8050770004 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶ ಸಹಾಯವಾಣಿ 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಮಣ್ಣಿನ ಆರೋಗ್ಯ ರಕ್ಷಣೆಗೆ ವೈವಿಧ್ಯಮಯ ಬೆಳೆ ಪದ್ಧತಿ ಅನಿವಾರ್ಯ: ಡಾ.ರಮೇಶ ಎಂ.ಎನ್
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
ಸುಸ್ಥಿರ ಕೃಷಿ ಮತ್ತು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ರೈತರು ಸಾಂಪ್ರದಾಯಿಕ ಏಕಬೆಳೆ ಪದ್ಧತಿಯಿಂದ ಹೊರಬಂದು ವೈವಿಧ್ಯಮಯ ಬೆಳೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಐಸಿಎಆರ್-ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ರಮೇಶ ಎಂ.ಎನ್ ಅವರು ಹೇಳಿದರು.
ಬಳ್ಳಾರಿಯ ಪ್ರಾದೇಶಿಕ ಕೇಂದ್ರದ ಐಸಿಎಆರ್-ಐಐಎಸ್‌ಡಬ್ಲ್ಯೂಸಿ ವತಿಯಿಂದ ಬುಡಕಟ್ಟು ಉಪ ಯೋಜನೆ ಅಡಿ ಮಂಗಳವಾರ ಸಂಡೂರು ತಾಲ್ಲೂಕಿನ ಮಟ್ಟಜನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ಮಣ್ಣಿನ ಆರೋಗ್ಯ ಚೇತನಕ್ಕಾಗಿ ವೈವಿಧ್ಯಮಯ ಬೆಳೆ ವ್ಯವಸ್ಥೆಗಳು” ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ ಸಾವಯವ ಗೊಬ್ಬರ ತಯಾರಿಸುವುದು ಮತ್ತು ಬೆಳೆ ಅವಶೇಷಗಳನ್ನು ಸುಡದೆ ಮಣ್ಣಿನಲ್ಲಿ ಸೇರಿಸುವುದು ಮಣ್ಣಿನ ಆರೋಗ್ಯಕ್ಕೆ ಪೂರಕ. ಪಶುಪಾಲನೆ, ಹಸಿರು ಎಲೆ ಗೊಬ್ಬರ ಮತ್ತು ಕೃಷಿ ಅರಣ್ಯ ವ್ಯವಸ್ಥೆಗಳು ರೈತರಿಗೆ ಹೆಚ್ಚುವರಿ ಆದಾಯ ನೀಡುವುದಲ್ಲದೆ, ಹವಾಮಾನ ವೈಪರೀತ್ಯ ಎದುರಿಸಲು ಶಕ್ತಿ ನೀಡುತ್ತವೆ ಎಂದು ತಿಳಿಸಿದರು.
ಮಣ್ಣು ಪರೀಕ್ಷೆಯ ಮಹತ್ವದ ಕುರಿತು ಮಾತನಾಡಿದ ಹಿರಿಯ ವಿಜ್ಞಾನಿ ಡಾ.ಮಹಿಪಾಲ್ ಚೌಧರಿ ಅವರು, ರೈತರು ಸರಿಯಾದ ಮೂಲ, ಸರಿಯಾದ ದರ, ಸರಿಯಾದ ಸಮಯ ಮತ್ತು ಸರಿಯಾದ ಸ್ಥಳ (4ಆರ್ ವಿಧಾನ) ಎಂಬ ಸೂತ್ರದಡಿ ರಸಗೊಬ್ಬರ ಬಳಸಬೇಕು. ಮಟ್ಟಜನಹಳ್ಳಿಯ ಕಬ್ಬಿಣ ಸಮೃದ್ಧ ಕೆಂಪು ಮಣ್ಣಿಗೆ ಜಿಪ್ಸಮ್ ಬಳಸುವುದರಿಂದ ಮಣ್ಣಿನ ರಚನೆ ಸುಧಾರಿಸಿ, ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೆಚ್ಚುತ್ತದೆ ಎಂದು ಮಾಹಿತಿ ನೀಡಿದರು.
ಹಿರಿಯ ವಿಜ್ಞಾನಿ ಡಾ.ರವಿ ಡುಪ್ಡಾಲ್ ಅವರು ಮಾತನಾಡಿ, ಬೆಳೆ ವೈವಿಧ್ಯೀಕರಣ ಮತ್ತು ಎಫ್‌ವೈಎಂ, ಹಸಿರು ಗೊಬ್ಬರ, ಕಾಂಪೋಸ್ಟ್, ವರ್ಮಿಕಾಂಪೋಸ್ಟ್, ಒಳಚರಂಡಿ ಕೆಸರು ಮತ್ತು ಪ್ರೆಸ್‌ಮಡ್‌ನಂತಹ ಪರ್ಯಾಯ ಪೋಷಕಾಂಶ ಮೂಲಗಳ ಬಳಕೆಯಿಂದ ಇನ್‌ಪುಟ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ಲಾಭದಾಯಕತೆಯನ್ನು ಸುಧಾರಿಸುತ್ತದೆ ಮತ್ತು ಪೋಷಕಾಂಶಗಳ ಬಳಕೆಯ ದಕ್ಷತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು.
ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳಲ್ಲಿ ಬೆಳೆ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುವಲ್ಲಿ ಮತ್ತು ಇಳುವರಿಯನ್ನು ಸ್ಥಿರಗೊಳಿಸುವಲ್ಲಿ ಅವುಗಳ ಪಾತ್ರ ಬಹುಮುಖ್ಯವಾಗಿದೆ. ವರ್ಮಿಕಾಂಪೋಸ್ಟ್, ಕಾಂಪೋಸ್ಟ್ ಮತ್ತು ಹಸಿರು ಗೊಬ್ಬರದ ಬಳಕೆಯಿಂದ ಕೃಷಿ ವೆಚ್ಚ ತಗ್ಗಿಸಿ ಲಾಭದಾಯಕತೆಯನ್ನು ಹೆಚ್ಚಿಸಿಕೊಳ್ಳುವ ವಿಧಾನಗಳನ್ನು ವಿವರಿಸಿದರು.
ಇನ್ನೋರ್ವ ವಿಜ್ಞಾನಿ ಡಾ.ಕವಿತಾ ಪಿ. ಜಾಧವ್ ಅವರು ಮಾತನಾಡಿ, ಜೀವಾಮೃತ, ಬೀಜಾಮೃತ ಮತ್ತು ಮಲ್ಚಿಂಗ್ (ಹೊದಿಕೆ) ಅಳವಡಿಕೆಯಿಂದ ಪರಿಸರ ಸ್ನೇಹಿ ಕೃಷಿ ಸಾಧ್ಯ. ಸೂಕ್ಷö್ಮ ಪೋಷಕಾಂಶಗಳ ಕೊರತೆಯನ್ನು ನೀಗಿಸುವ ಮೂಲಕ ಸುಸ್ಥಿರ ಇಳುವರಿ ಪಡೆಯಬಹುದು ಎಂದು ರೈತರಿಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ರೈತರಿಗೆ ಸುಧಾರಿತ ತಳಿಯ ತೊಗರಿ ಬೀಜಗಳನ್ನು (ಪಿಆರ್‌ಜಿ-176) ವಿತರಿಸಲಾಯಿತು. ಜಿಪ್ಸಮ್ ಮತ್ತು ಸೂಕ್ಷö್ಮ ಪೋಷಕಾಂಶಗಳನ್ನು ಜಮೀನಿನಲ್ಲಿ ಬಳಸುವ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.
ಈ ವೇಳೆ ಗ್ರಾಮದ ಸುಮಾರು 40ಕ್ಕೂ ಹೆಚ್ಚು ರೈತರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದರು.
---------
ಮಂಗಳವಾರ, ಮೇ 5, 2026
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ):
ಕುರುಗೋಡು ಪಟ್ಟಣದ 17 ನೇ ವಾರ್ಡ್ ನ ಹರಿಕೃಪ ಕಾಲೋನಿಯ ನಿವಾಸಿಯಾದ ಜಗದೀಶ ಎನ್ನುವ 48 ವರ್ಷದ ವ್ಯಕ್ತಿಯು ವಾಹನ ಚಾಲಕ ಕೆಲಸ ಮಾಡಿಕೊಂಡಿದ್ದು, 2017 ರ ನ.24 ರಂದು ಮನೆಯಿಂದ ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮರಳಿ ಬಾರದೇ ಕಾಣೆಯಾಗಿರುತ್ತಾನೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 4.8 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕ್ರಿಮ್ ಬಣ್ಣದ ಅಂಗಿ ಮತ್ತು ಗ್ರೇ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕುರುಗೋಡು: ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ):
ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) 2026-27ನೇ ಸಾಲಿನ ಆಗಸ್ಟ್ ಬ್ಯಾಚ್‌ನ ವಿವಿಧ ವೃತ್ತಿ ವಿಭಾಗಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೇ 08 ರೊಳಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.cite.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಕುರುಗೋಡು ಸರ್ಕಾರಿ ಐಟಿಐ ಕಾಲೇಜಿಗೆ ಭೇಟಿ ನೀಡಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದು.
*ಲಭ್ಯವಿರುವ ವೃತ್ತಿ ಕೋರ್ಸ್ಗಳು:*
ಎಲೆಕ್ಷಿ÷್ಟçÃಷಿಯನ್(2 ವರ್ಷ), ಫಿಟ್ಟರ್(2 ವರ್ಷ), ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್(2 ವರ್ಷ), ಸಿಎನ್‌ಸಿ ಮಷಿನಿಂಗ್ ಟೆಕ್ನಿಷಿಯನ್(2 ವರ್ಷ), ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ (2 ವರ್ಷ), ಇಂಡಸ್ಟಿçಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ (1 ವರ್ಷ), ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ (1 ವರ್ಷ), ಇಂಜಿನಿಯರಿAಗ್ ಡಿಸೈನ್ ಟೆಕ್ನಿಷಿಯನ್ (1 ವರ್ಷ).
ದಾಖಲಾತಿ ಹಾಗೂ ಇತರ ಮಾಹಿತಿಗಾಗಿ ವಿ.ತಿಮ್ಮರಾಜು (ಪ್ರಾಂಶುಪಾಲರು)-9980715718, ಸತೀಶ್ ಡಿ.ಜಿ-9481175925, ಮಹೇಶ್ ಟಿ-7892431265, ರಾಜಶೇಖರ್ ಪಿ.ಜೆ-7975845633 ಗೆ ಸಂಪರ್ಕಿಸಬಹುದಾಗಿದೆ ಎಂದು ಕುರುಗೋಡು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಬಿಸಿಲಿನ ಬೇಗೆಯಿಂದ ಜಾಗ್ರತೆ: ಸಾರ್ವಜನಿಕರಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಮಹತ್ವದ ಸಲಹೆಗಳು
ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ):
ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
*ಆರೋಗ್ಯ ರಕ್ಷಣೆಗೆ ಪ್ರಮುಖ ಕ್ರಮಗಳು:*
*ಸಾಕಷ್ಟು ನೀರು ಕುಡಿಯಿರಿ:* ಬಾಯಾರಿಕೆ ಇಲ್ಲದಿದ್ದರೂ ದಿನವಿಡೀ ಅತಿ ಹೆಚ್ಚು ನೀರನ್ನು ಕುಡಿಯುತ್ತಿರಬೇಕು. ನಿರ್ಜಲೀಕರಣ ತಡೆಯಲು ಇದು ಅತಿ ಮುಖ್ಯವಾಗಿದೆ.
*ನೈಸರ್ಗಿಕ ಪಾನೀಯಗಳ ಬಳಕೆ:* ಅಂಗಡಿಯ ಕೃತಕ ಪಾನೀಯಗಳ ಬದಲು ಮನೆಯಲ್ಲಿ ತಯಾರಿಸಿದ ನಿಂಬೆ ಹಣ್ಣಿನ ರಸ, ಮಜ್ಜಿಗೆ ಹಾಗೂ ನೈಸರ್ಗಿಕ ಎಳೆನೀರನ್ನು ಹೆಚ್ಚಾಗಿ ಸೇವಿಸಬೇಕು.
*ಆಹಾರ ಕ್ರಮ:* ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ ಹಾಗೂ ದ್ರಾಕ್ಷಿಯಂತಹ ನೀರಿನ ಅಂಶ ಹೆಚ್ಚಿರುವ ಹಣ್ಣು ಮತ್ತು ತರಕಾರಿಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು.
*ಉಡುಪು:* ಹಗುರವಾದ, ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ದೇಹವನ್ನು ತಂಪಾಗಿರಿಸಲು ಸಹಕಾರಿಯಾಗಲಿದೆ.
*ಹೊರಹೋಗುವಾಗ ವಹಿಸಬೇಕಾದ ಮುನ್ನೆಚ್ಚರಿಕೆ:*
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಆ ಸಮಯದಲ್ಲಿ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಿ. ಅನಿವಾರ್ಯವಿದ್ದಲ್ಲಿ ಛತ್ರಿ, ಟೋಪಿ, ಕಪ್ಪು ಕನ್ನಡಕ ಹಾಗೂ ಚಪ್ಪಲಿಗಳನ್ನು ಕಡ್ಡಾಯವಾಗಿ ಬಳಸಿ. ಸಭೆ-ಸಮಾರಂಭಗಳನ್ನು ನಡೆಸುವವರು ಜನರಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
*ತುರ್ತು ಸಂದರ್ಭದಲ್ಲಿ ಏನು ಮಾಡಬೇಕು?*
ಬಿಸಿಲಿನಿಂದ ಯಾರಾದರೂ ಪ್ರಜ್ಞೆ ತಪ್ಪಿ ಬಿದ್ದರೆ, ಕೂಡಲೇ ಅವರನ್ನು ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆ ಬಟ್ಟೆಯಿಂದ ಮೈ ಒರೆಸಿ, ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು.
*ಪ್ರಾಣಿಗಳ ಬಗ್ಗೆ ನಿಗಾ ಇರಲಿ:*
ಮನುಷ್ಯರಷ್ಟೇ ಅಲ್ಲದೆ ಸಾಕು ಪ್ರಾಣಿಗಳ ಬಗ್ಗೆಯೂ ಕಾಳಜಿ ವಹಿಸಬೇಕು. ಅವುಗಳನ್ನು ನೆರಳಿನಲ್ಲಿರಿಸಿ, ಕುಡಿಯಲು ಸಾಕಷ್ಟು ನೀರಿನ ವ್ಯವಸ್ಥೆ ಮಾಡಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಒಂಟಿಯಾಗಿ ಬಿಟ್ಟು ಹೋಗಬಾರದು ಎಂದು ಅವರು ತಿಳಿಸಿದ್ದಾರೆ.
ಆಲ್ಕೋಹಾಲ್, ಅತಿಯಾದ ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ (ತಂಪು ಪಾನೀಯ) ಪಾನೀಯಗಳು ದೇಹವನ್ನು ಶೀಘ್ರವಾಗಿ ನಿರ್ಜಲೀಕರಣಗೊಳಿಸುವುದರಿಂದ ಅವುಗಳ ಸೇವನೆಯನ್ನು ಆದಷ್ಟು ಕಡಿಮೆ ಮಾಡಬೇಕು.
ವಿಶೇಷವಾಗಿ ಕೆರೆ, ಬಾವಿ ಅಥವಾ ಕಾಲುವೆಗಳ ಹತ್ತಿರ ಮಕ್ಕಳು ಹೋಗದಂತೆ ಪೋಷಕರು ಹೆಚ್ಚಿನ ನಿಗಾ ವಹಿಸಬೇಕು ಎಂದು ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
----------
ವಸತಿ ರಹಿತರ ಅರ್ಹ ಫಲಾನುಭವಿಗಳ ಪಟ್ಟಿ ಸೇರ್ಪಡೆಗೆ ಮೇ 15 ಕೊನೆಯ ದಿನ
ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ):
2018ರ ವಸತಿ ರಹಿತ ಮತ್ತು ನಿವೇಶನ ರಹಿತ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರಿಸಲು ಹಾಗೂ ಪರಿಷ್ಕರಿಸಲು ಮೇ 15 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
2018ರಲ್ಲಿ ನಡೆಸಲಾದ ಸಮೀಕ್ಷಾ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಅರ್ಹ ಕುಟುಂಬಗಳನ್ನು ಪಟ್ಟಿಗೆ ಸೇರಿಸಲು ಈಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳ ಹೆಸರನ್ನು ಸೇರಿಸಲು ಮೇ 15 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ.
ಈ ನಿಗದಿತ ದಿನಾಂಕದ ನಂತರ ಯಾವುದೇ ಸೇರ್ಪಡೆಗೆ ಅವಕಾಶವಿರುವುದಿಲ್ಲ ಮತ್ತು ಅಂದೇ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಮೇ 15ರ ನಂತರ ಸಿದ್ಧವಾಗುವ ಪಟ್ಟಿಯನ್ನೇ ಅಂತಿಮ ‘ವಸತಿ ಮತ್ತು ನಿವೇಶನ ರಹಿತರ ಪಟ್ಟಿ' ಎಂದು ಪರಿಗಣಿಸಲಾಗುವುದು.
ಅರ್ಹ ಫಲಾನುಭವಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಥವಾ ಹೆಸರು ಸೇರ್ಪಡೆಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸಬಹುದಾಗಿದೆ. ವಸತಿ ಸೌಲಭ್ಯದಿಂದ ವಂಚಿತರಾದ ಅರ್ಹ ಕುಟುಂಬಗಳು ಈ ಕೂಡಲೇ ಸಂಬAಧಪಟ್ಟ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.
ಅರ್ಹ ಫಲಾನುಭವಿಗಳನ್ನು ಕೈ ಬಿಟ್ಟಿದ್ದಲ್ಲಿ ಸಂಬAಧಿಸಿದ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಮೇ 10 ರಂದು ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 10 ರಂದು ಸಂಜೆ 07 ಗಂಟೆಗೆÀ ನಗರದ ಪಾರ್ವತಿ ನಗರ ಬಡಾವಣೆಯ ಬಸವ ಭವನದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಎಸ್.ಜೆ.ವಿ.ಮಹಿಪಾಲ್ ಸೇರಿದಂತೆ ಇತರರು ಭಾಗವಹಿಸುವರು.
ಬಳ್ಳಾರಿಯ ಇಂಡೋ ಅಮೆರಿಕನ್ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಬಸವರಾಜ ಅಮಾತಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಬಳ್ಳಾರಿಯ ಎನ್.ಬಸವರಾಜ್ ತಂಡ ಹೇಮರೆಡ್ಡಿ ಮಲ್ಲಮ್ಮ ಗೀತೆಗಳ ಗಾಯನ ಕಾರ್ಯಕ್ರಮ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭಗೊAಡು ವಾಲ್ಮೀಕಿ ವೃತ್ತ(ಎಸ್‌ಪಿ ವೃತ್ತ) ಮೂಲಕ ಬಸವ ಭವನದ ಸಭಾಂಗಣದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಮಾಳಪುರ ಗ್ರಾಮದ ಕುಂಬಾರ ಕೇರಿಯ ಎಸ್.ವಿ ಶ್ರೀಕಾಂತ ಎನ್ನುವ 19 ವರ್ಷದ ಯುವಕ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯ ಎಲ್‌ಎನ್‌ಟಿ ಕಂಪನಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಏ.05 ರಂದು ಕೆಲಸಕ್ಕೆ ಹೋಗಿಬರುವುದಾಗಿ ಹೇಳಿ ಪುನಃ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.6 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258300, ತೋರಣಗಲ್ಲು ಡಿವೈಎಸ್‌ಪಿ ದೂ.9480803010, ಸಂಡೂರು ವೃತ್ತ ಸಿ.ಪಿ.ಐ ದೂ.08395-260100, 9480803036, ತೋರಣಗಲ್ಲು ಪೊಲೀಸ್ ಠಾಣೆ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-------
ಸೋಮವಾರ, ಮೇ 4, 2026
ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಾತಿ ಆರಂಭ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ನಗರದ ಹೊಸಪೇಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಾಲೇಜಿನಲ್ಲಿ ಲಭ್ಯವಿರುವ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟಾçನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟಿçಕಲ್ ಅಂಡ್ ಎಲೆಕ್ಟಾçನಿಕ್ಸ್, ಮೆಕ್ಯಾನಿಕಲ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿAಗ್ ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.
*ವೇಳಾಪಟ್ಟಿ:*
ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಂದು ಸಂಜೆ 06 ಗಂಟೆಯ ನಂತರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಮೇ 18 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಮೆರಿಟ್ ಪಟ್ಟಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಂಜೆ 06 ಗಂಟೆಯ ನಂತರ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ.
ಮೇ 22 ರಂದು ಸಂಜೆ 05.30 ಗಂಟೆಯ ನಂತರ ಸೀಟು ಹಂಚಿಕೆ ವಿವರಗಳ ಪ್ರಕಟಿಸಲಾಗುವುದು. ಮೇ 23 ರಿಂದ ಮೇ 25 ರವರೆಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅವಧಿ ಹಾಗೂ ಮೇ 26 ರಿಂದ ಮೇ 30 ರವರೆಗೆ ಕಾಲೇಜು ಮಟ್ಟದಲ್ಲಿ ಮೆರಿಟ್ ಮತ್ತು ರೋಸ್ಟರ್ ಆಧಾರದ ಖಾಲಿ ಉಳಿದ ಸೀಟುಗಳಿಗೆ ಆಫ್‌ಲೈನ್ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಾಲೇಜು ಪಾಲಿಟೆಕ್ನಿಕ್ ಕಚೇರಿ ಅಥವಾ ದೂ.08392-294371 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಮೇ 08 ರಂದು ಬಳ್ಳಾರಿ ತಾಪಂ ಮಾಸಿಕ ಕೆಡಿಪಿ ಸಭೆ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕು ಪಂಚಾಯಿತಿಯ ಮೊದಲನೇ ಮಾಸಿಕ ಕೆಡಿಪಿ ಸಭೆಯನ್ನು ಮೇ 08 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಬಳ್ಳಾರಿ ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ.
ಸಭೆಗೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ನಿಯೋಜಿಸದೇ, ತಾವೇ ಖುದ್ದಾಗಿ ಪೂರಕ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
---------
ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ನೀಡಲು ಭೂ ಮಾಲೀಕರಿಂದ ಅರ್ಜಿ ಆಹ್ವಾನ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕಚೇರಿ ವತಿಯಿಂದ ‘ಭೂ ಒಡೆತನ ಯೋಜನೆ'ಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನಿನ ಸೌಲಭ್ಯ ಕಲ್ಪಿಸಲು ಇತರ ಜನಾಂಗದವರಿAದ ಜಮೀನನ್ನು ಖರೀದಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಹೊರತುಪಡಿಸಿ, ಇತರ ಜನಾಂಗದವರಿAದ ಮಾತ್ರ ಜಮೀನನ್ನು ಖರೀದಿಸಲಾಗುತ್ತದೆ. ಜಮೀನು ನೀಡಲು ಆಸಕ್ತಿ ಇರುವ ಮಾಲೀಕರು ನಿಗಮಕ್ಕೆ ಒಪ್ಪಿಗೆ ಪತ್ರವನ್ನು ಸಲ್ಲಿಸಬಹುದಾಗಿದೆ.
ಆಸಕ್ತ ಭೂ ಮಾಲೀಕರು ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ನಂದಿ ಕಾಲೋನಿಯ 1ನೇ ಕ್ರಾಸ್ ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-245551, ಮೊ.9886618721 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಭಾನುವಾರ, ಮೇ 3, 2026
’ಶ್ರಮಿಕರೇ ದೇಶದ ನಿಜವಾದ ವಿಶ್ವಕರ್ಮರು’ | 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟಿಸಿ ಡಾ.ಮನ್ಸುಖ್ ಮಾಂಡವೀಯ ಹೇಳಿಕೆ
ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ):
ದೇಶದ ಶ್ರಮಿಕ ವರ್ಗವು ರಾಷ್ಟ್ರ ನಿರ್ಮಾಣದ ನಿಜವಾದ ಶಿಲ್ಪಿಗಳು ಮತ್ತು ನಮ್ಮ ಪಾಲಿನ ವಿಶ್ವಕರ್ಮರು. ಅವರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ ಹಾಗೂ ಯುವಜನ ವ್ಯವಹಾರಗಳ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು ಹೇಳಿದರು.
ಭಾನುವಾರ, ದೊಡ್ಡಬಳ್ಳಾಪುರದಲ್ಲಿ ನೂತನವಾಗಿ ನಿರ್ಮಿಸಲಾದ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಯ ಉದ್ಘಾಟನೆ ಹಾಗೂ ಇದೇ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ನಿರ್ಮಾಣವಾಗಲಿರುವ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
*ಉಚಿತ ಆರೋಗ್ಯ ತಪಾಸಣೆ ಅಭಿಯಾನ:*
ಹೊಸ ಕಾರ್ಮಿಕ ಸಂಹಿತೆಯ ಅಡಿಯಲ್ಲಿ, 40 ವರ್ಷ ದಾಟಿದ ಕಾರ್ಮಿಕರಿಗಾಗಿ ಮೇ 7 ರಿಂದ ದೇಶಾದ್ಯಂತ ಉಚಿತ ಆರೋಗ್ಯ ತಪಾಸಣೆ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ಘೋಷಿಸಿದರು.
*ಸಾಮಾಜಿಕ ಭದ್ರತೆಯ ವಿಸ್ತರಣೆ:*
2015 ರಲ್ಲಿ ಶೇ.19 ರಷ್ಟಿದ್ದ ಸಾಮಾಜಿಕ ಭದ್ರತಾ ವ್ಯಾಪ್ತಿಯು ಇಂದು ಶೇ.64 ಕ್ಕೆ ಏರಿಕೆಯಾಗಿದೆ. ಇಎಸ್ಐ ವಿಮಾದಾರರ ಸಂಖ್ಯೆ 2 ಕೋಟಿಯಿಂದ 4 ಕೋಟಿಗೆ ದ್ವಿಗುಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.
*ಶಿಕ್ಷಣದಲ್ಲಿ ಮೀಸಲಾತಿ:*
ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ 20 ಇಎಸ್ಐ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಶೇ. 40-50 ರಷ್ಟು ಸೀಟುಗಳನ್ನು ವಿಮಾದಾರರ ಮಕ್ಕಳಿಗಾಗಿಯೇ ಮೀಸಲಿಡಲಾಗಿದೆ ಎಂದರು.
ದೊಡ್ಡಬಳ್ಳಾಪುರದ ಭಾಗದಲ್ಲಿ 1.5 ಲಕ್ಷಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕರಿದ್ದು, ಅವರ ಕುಟುಂಬದ ಸದಸ್ಯರನ್ನೂ ಸೇರಿ ಒಟ್ಟು 5.5 ಲಕ್ಷ ಜನರಿಗೆ ಈ ಹೊಸ ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ಸೇವೆ ಲಭ್ಯವಾಗಲಿದೆ.
ಅದೇರೀತಿಯಾಗಿ, ಬಳ್ಳಾರಿ ವಿಭಾಗದ ಸುಮಾರು 64,000 ಕಾರ್ಮಿಕರು ಮತ್ತು ಅವರ ಕುಟುಂಬದವರು ಸೇರಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಲಿದೆ ಎಂದು ತಿಳಿಸಿದರು.
ಕೇಂದ್ರ ಕಾರ್ಮಿಕ ಮತ್ತು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಈ ಆಸ್ಪತ್ರೆಯು ಒಪಿಡಿ, ಮಾಡ್ಯುಲರ್ ಆಪರೇಷನ್ ಥಿಯೇಟರ್, ತುರ್ತು ಚಿಕಿತ್ಸೆ, ಸ್ತ್ರೀರೋಗ, ಮಕ್ಕಳ ಆರೋಗ್ಯ ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕಾರ್ಮಿಕರ ಜೀವನಮಟ್ಟ ಸುಧಾರಿಸಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ನಿರ್ಮಾಣದಲ್ಲಿ ಶ್ರಮಿಸಿದ ಕಾರ್ಮಿಕರನ್ನು ಸಚಿವರು ಇದೇ ಸಂದರ್ಭದಲ್ಲಿ ಗೌರವಿಸಿದರು ಮತ್ತು ಫಲಾನುಭವಿಗಳಿಗೆ ಇಎಸ್‌ಐ ಸೌಲಭ್ಯಗಳ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವು ಗಣ್ಯರು ಹಾಗೂ ವರ್ಚುವಲ್ ಮೂಲಕ ಬಳ್ಳಾರಿಯ ಇಎಸ್ಐ ಅಧಿಕಾರಿಗಳು ಉಪಸ್ಥಿತರಿದ್ದರು.
*ಆಸ್ಪತ್ರೆಗಳ ವಿಶೇಷತೆ:*
ದೊಡ್ಡಬಳ್ಳಾಪುರದ ಇಎಸ್ಐ ಆಸ್ಪತ್ರೆಯನ್ನು 101.14 ಕೋಟಿ ರೂ. ವೆಚ್ಚದಲ್ಲಿ 5 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಸಾಮಾನ್ಯ ಔಷಧ ವಿಭಾಗ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಮಕ್ಕಳ ವಿಭಾಗ, ಮೂಳೆಚಿಕಿತ್ಸೆ, ತುರ್ತು ಚಿಕಿತ್ಸೆ, ರೇಡಿಯಾಲಜಿ ಮತ್ತು ಸುಸಜ್ಜಿತ ಪ್ರಯೋಗಾಲಯಗಳು ಒಳಗೊಂಡಿದೆ. ಆಸ್ಪತ್ರೆ ಆವರಣದಲ್ಲಿ ಸಿಬ್ಬಂದಿಗಾಗಿ 32 ವಸತಿಗೃಹಗಳನ್ನು ನಿರ್ಮಿಸಲಾಗಿದೆ.
ಅದೇರೀತಿಯಾಗಿ, ಬಳ್ಳಾರಿಯಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆಗೆ 150 ಕೋಟಿ ರೂ. ವೆಚ್ಚವಾಗಲಿದ್ದು, 5.21 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತಲೆಯೆತ್ತಲಿದೆ. ಇದು ಉತ್ತರ ಕರ್ನಾಟಕದ ಕಾರ್ಮಿಕರಿಗೆ ವರದಾನವಾಗಲಿದೆ.
======
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)

















































