ಗುರುವಾರ, ಜನವರಿ 1, 2026
ಜ.02 ರಂದು ಸಿರಿಧಾನ್ಯ ನಡಿಗೆ
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟಿçÃಯ ವಾಣಿಜ್ಯ ಮೇಳ-2026 ರ ಅಂಗವಾಗಿ ಸಿರಿಧಾನ್ಯಗಳ ಮಹತ್ವ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜ.02 ರಂದು ಬೆಳಿಗ್ಗೆ 06.30 ಗಂಟೆಗೆ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಹೆಚ್.ಆರ್.ಗವಿಯಪ್ಪ ವೃತ್ತ, ವಾಲ್ಮಿಕಿ ವೃತ್ತ, ದುರ್ಗಮ್ಮ ಗುಡಿ, ಗಡಿಗಿ ಚೆನ್ನಪ್ಪ ವೃತ್ತ ಮಾರ್ಗವಾಗಿ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಳ್ಳಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ