ಶನಿವಾರ, ಜನವರಿ 3, 2026

ಜ.05 ರಂದು ಶಿವಯೋಗಿ ಸಿದ್ದರಾಮ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಜ.03(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜ.14 ರಂದು ಜಿಲ್ಲಾ ಕೇಂದ್ರದಲ್ಲಿ ಶಿವಯೋಗಿ ಸಿದ್ದರಾಮ ಜಯಂತಿ ಆಚರಣೆ ಕುರಿತು ಚರ್ಚಿಸಲು ಜ.05 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಆಯೋಜಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ