ಬುಧವಾರ, ಜನವರಿ 21, 2026
ರಾಯಚೂರಿನಲ್ಲಿ ಫೆ.05 ರಿಂದ ಮೂರು ದಿನಗಳ ಕಾಲ ಕೃಷಿ ಮೇಳ
ಬಳ್ಳಾರಿ,ಜ.21(ಕರ್ನಾಟಕ ವಾರ್ತೆ):
“ಸಮಗ್ರ ಕೃಷಿ - ಸ್ವಾವಲಂಬಿ ಕೃಷಿ” ಎಂಬ ದ್ಯೇಯದೊಂದಿಗೆ ಫೆ.05, 06 ಮತ್ತು 07 ರಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕೃಷಿ ಮೇಳ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಸಮಗ್ರ ಕೃಷಿ ಪದ್ದತಿ ಹಾಗೂ ಇತರೆ ಕುರಿತು ಅರಿವು ಮೂಡಿಸಲಾಗುತ್ತಿದ್ದು, ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳ ರೈತರು, ರೈತ ಮಹಿಳೆಯರು ಭಾಗವಹಿಸಿ, ಮೇಳದ ಸದುಪಯೋಗಪಡೆದುಕೊಳ್ಳಬೇಕು ಎಂದು ಬಳ್ಳಾರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ