ಗುರುವಾರ, ಜನವರಿ 8, 2026

ಜ.09 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ.ಜ.08(ಕರ್ನಾಟಕ ವಾರ್ತೆ) ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-46, ಎಫ್-47 ಮತ್ತು ಎಫ್-25 ರ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.09 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ ಮತ್ತು ಸರ್ಕಲ್, ರಾಣಿತೋಟ, ಕಣೆಕಲ್ ಬಸ್‌ಸ್ಟಾö್ಯಂಡ್, ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂದುಗಡೆ ಏರಿಯಾ, ಆಂಧ್ರಾಳು ರಸ್ತೆ, ಕೊಲಮಿ ಚೌಕ್, ಮಿಲ್ಲರ್ ಪೇಟೆ, ಆಂಧ್ರಾಳು ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ