ಶುಕ್ರವಾರ, ಜನವರಿ 9, 2026
ಜ.11 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.09(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11 ಕೆವಿಯ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11 ಕೆವಿ ಫೀಡರನಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.11 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಫೀಡರ್ ಎಫ್-63 ಮತ್ತು ಎಫ್-64 ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-63 ಫೀಡರ್ ಮಾರ್ಗದ ರೂಪನ ಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ, ಮುಂತಾದ ಏರಿಯಾಗಳು.
ಎಫ್-64 ಫೀಡರ್ ಮಾರ್ಗದ ಎಸ್.ಆರ್.ಎಂ. ಲೇ ಔಟ್, ಸಂಸ್ಕೃತಿ ಶಾಲೆ, ವಿಶಾಲ ನಗರ, ಹನುಮಾನ ನಗರ, ಬಿ.ಗೋನಾಳ್, ಹೌಸಿಂಗ್ ಬೋರ್ಡ್, ವೆಂಕಟಲಕ್ಷಿö್ಮ ನಗರ, ಅಂಜಿನಪ್ಪ ನಗರ, ಎಸ್.ಆರ್.ಪಿ ಕಾಲೋನಿ, ಎಮ್.ಜಿ. ಅನಂತಪುರ ರಸ್ತೆ, ಆಗಡಿ ಮಾರೆಪ್ಪ ಕಾಂಪೌAಡ್, ದತ್ತ ಸಾಯಿ ನಗರ, ಆಶ್ರಯ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ