ಶುಕ್ರವಾರ, ಜನವರಿ 9, 2026

ಸಿರುಗುಪ್ಪ ನಗರಸಭೆ: ಜ.13 ರಂದು ಆಯವ್ಯಯ ಪೂರ್ವಭಾವಿ ಸಭೆ

ಬಳ್ಳಾರಿ,ಜ.09(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರಸಭೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಜನವರಿ 13 ರಂದು ಬೆಳಿಗ್ಗೆ 11.30 ಗಂಟೆಗೆ ಸಿರುಗುಪ್ಪ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪಟ್ಟಣದ ನಾಗರಿಕರು, ಸರ್ಕಾರೇತರ ಸಂಸ್ಥೆಗಳು, ಕೈಗಾರಿಕೋಧ್ಯಮಿಗಳು, ಪ್ರಮುಖ ವ್ಯಾಪಾರಸ್ಥರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ/ಸAಸ್ಥೆಗಳ ಪ್ರತಿನಿಧಿಗಳು ಆಗಮಿಸಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಮುಂಗಡ ಆಯ-ವ್ಯಯ ತಯಾರಿಕೆಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ