ಮಂಗಳವಾರ, ಜನವರಿ 13, 2026
ಜ.16 ರಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಂಗಡ ಆಯ-ವ್ಯಯ ಸಿದ್ಧತಾ ಸಭೆ
ಬಳ್ಳಾರಿ,ಜ.13(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣ ಪಂಚಾಯಿತಿಯ 2026-27ನೇ ಸಾಲಿನ ಮುಂಗಡ ಆಯ-ವ್ಯಯ ವರದಿಯ ಸಿದ್ದತೆ ಕುರಿತು ಜ.16 ರಂದು ಮಧ್ಯಾಹ್ನ 03.30 ಗಂಟೆಗೆ ಆಡಳಿತಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕುಡತಿನಿ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಹಾಗಾಗಿ ಪಟ್ಟಣ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯ ನಾಗರೀಕರು, ಪಟ್ಟಣದ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಹಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ