ಬುಧವಾರ, ಜನವರಿ 14, 2026
ಸಿರುಗುಪ್ಪ: ಜ.16 ರಂದು ಪ.ಜಾತಿ, ಪ.ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ
ಬಳ್ಳಾರಿ,ಜ.14(ಕರ್ನಾಟಕ ವಾರ್ತೆ):
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಜ.16 ರಿಂದ 18 ರ ವರೆಗೆ ಸಿರುಗುಪ್ಪ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ಜ.16 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ ಅವರು ಉದ್ಘಾಟಿಸುವರು.
ಕೆ.ಕೆ.ಆರ್.ಟಿ.ಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ಅಧ್ಯಕ್ಷತೆ ವಹಿಸುವರು.
ಸಿರುಗುಪ್ಪ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಾರುತಿ ವರಪ್ರಸಾದ ರೆಡ್ಡಿ, ಸಿರುಗುಪ್ಪ ತಹಶೀಲ್ದಾರರಾದ ಗೌಸಿಯಾ ಬೇಗಂ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜ.16 ರಿಂದ 18 ರ ವರೆಗೆ ಸಿರುಗುಪ್ಪ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತ ಏರ್ಪಡಿಸಿರುವ ವಸ್ತು ಪ್ರದರ್ಶನದಲ್ಲಿ ಸಾರ್ವಜನಿಕರು ಮಾಹಿತಿ ಮತ್ತು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ