ಬುಧವಾರ, ಜನವರಿ 14, 2026
ಜ.16 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.14(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜ.16 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:*
ಎಫ್-7 ವ್ಯಾಪ್ತಿಯ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬಾರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಸಪ್ಪ ಬೀದಿ, ತಾಯಮ್ಮ ಕಟ್ಟೆ.
ಎಫ್-23 ವ್ಯಾಪ್ತಿಯ ಹೆಚ್.ಗವಿಯಪ್ಪ ವೃತ್ತ, ಕಾರ್ ಸ್ಟಿçÃಟ್, ಬ್ರಾಹ್ಮಿಣ್ ಸ್ಟಿçÃಟ್, ಮಾರುತಿ ಕಾಲೋನಿ, ಜೈನ್ ಮಾರ್ಕೆಟ್ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ