ಶುಕ್ರವಾರ, ಜನವರಿ 9, 2026
ಕುರುಗೋಡು ಪುರಸಭೆ: ಜ.17 ರಂದು ಆಯವ್ಯಯ ಪೂರ್ವಭಾವಿ ಸಭೆ
ಬಳ್ಳಾರಿ,ಜ.09(ಕರ್ನಾಟಕ ವಾರ್ತೆ):
ಕುರುಗೋಡು ಪುರಸಭೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಕುರುಗೋಡು ಪುರಸಭೆಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮತ್ತು ಮುಖ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಜ.17 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪಟ್ಟಣದ ಗಣ್ಯ ವ್ಯಕ್ತಿಗಳು, ನೋಂದಾಯಿತ ಸಂಘ-ಸAಸ್ಥೆಗಳ ಸದಸ್ಯರು ಮತ್ತು ಕಾರ್ಯಾಲಯದ ಸದಸ್ಯರು ಆಗಮಿಸಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಮುಂಗಡ ಆಯ-ವ್ಯಯ ತಯಾರಿಕೆಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು ಎಂದು ಕುರುಗೋಡು ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ