ಶುಕ್ರವಾರ, ಜನವರಿ 16, 2026
ಜ.17 ರಂದು ವಿದ್ಯುತ್ ಕಡಿತ
ಬಳ್ಳಾರಿ,ಜ.16(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜ.17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್-14 ರ ವ್ಯಾಪ್ತಿಯ ನಗರದ ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ದುರ್ಗಾ ಕಾಲೋನಿ, ವೆಂಕಟೇಶ್ವರ ನಗರ, ಎಚ್.ಎಲ್.ಸಿ. ಕಾಲೋನಿ, ಸತ್ಯ ಸಾಯಿ ಕಾಲೋನಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ