ಶನಿವಾರ, ಜನವರಿ 17, 2026

ಜ.18 ರಂದು ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆ

ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ತೋರಣಗಲ್ಲು ಜಿಂದಾಲ್ ಆದರ್ಶ ವಿದ್ಯಾಲಯ ಮತ್ತು ಬಳ್ಳಾರಿ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ಜ.18 ರಂದು ಬೆಳಿಗ್ಗೆ 11 ಗಂಟೆಗೆ ಸಂಡೂರು ತಾಲ್ಲೂಕಿನ ತೋರಣಗಲ್ ನ ಶಂಕರ ಹಿಲ್ ಟೌನ್ ನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಕಬ್ಸ್-ಬುಲ್ ಬುಲ್ಸ್, ಸ್ಕೌಟ್ಸ್-ಗೈಡ್ಸ್, ರೋರ‍್ಸ್-ರೇಂರ‍್ಸ್ ಮತ್ತು ದಳನಾಯಕರುಗಳಿಗೆ ‘ರಾಜ್ಯ ಮಟ್ಟದ ಗೀತಗಾಯ ಸ್ಪರ್ಧೆ’ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ ಲೋಕಸಭಾ ಸದಸ್ಯ ಈ.ತುಕಾರಾಮ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಡೂರು ಶಾಸಕರಾದ ಈ.ಅನ್ನಪೂರ್ಣ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ವಿಜಯನಗರ ಮತ್ತು ಸೇಲಮ್ ವರ್ಕ್ಸ್ ಜೆಎಸ್‌ಡಬ್ಲೂö್ಯ ಸ್ಟೀಲ್ ಲಿಮಿಟೆಡ್ ನ ಅಧ್ಯಕ್ಷ ಪಿ.ಕೆ ಮುರುಗನ್, ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಜಿಂದಾಲ್ ಆದರ್ಶ ವಿದ್ಯಾಲಯದ ಪ್ರಾಂಶುಪಾಲ ಕುಮಾರಸ್ವಾಮಿ ಬಳಿಗಾರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ (ಸ್ಕೌಟ್ಸ್) ಕುಪ್ಪಗಲ್ ವೀರೇಶ್, ಜಿಲ್ಲಾ ಆಯುಕ್ತೆ (ಗೈಡ್ಸ್) ಡಾ.ಧನುಜರಾಣಿ ಮತ್ತು ತೋರಣಗಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷ ಅರಳಾಪುರ ವೀರೇಶಪ್ಪ ಸೇರಿದಂತೆ ಇತರರು ಭಾಗವಹಿಸುವರು. *ಸಮಾರೋಪ ಸಮಾರಂಭ:* ಅAದು ಸಂಜೆ 04 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಅವರು ಸಮಾರೋಪ ಭಾಷಣ ಮಾಡುವರು. ಅತಿಥಿಗಳಾಗಿ ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ, ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಸಂಡೂರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಆರ್.ಅಕ್ಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬಳ್ಳಾರಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿ ವಿಜಯಸಿಂಹ, ಸಂಡೂರು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಸೋಮಪ್ಪ ಸೇರಿದಂತೆ ಇತರರು ಭಾಗವಹಿಸುವರು. ರಾಜ್ಯ ಆಯುಕ್ತ (ಸ್ಕೌಟ್ಸ್) ಎಂ.ಎ. ಖಾಲಿದ್, ರಾಜ್ಯ ಆಯುಕ್ತೆ (ಗೈಡ್ಸ್) ಗೀತಾ ನಟರಾಜ್, ಪ್ರಭಾರಿ ರಾಜ್ಯ ಆಯುಕ್ತ (ವ.ಸಂ) (ಸ್ಕೌಟ್ಸ್) ಎನ್.ಶ್ರೀನಿವಾಸನ್, ರಾಜ್ಯ ಆಯುಕ್ತೆ (ವ.ಸಂ) (ಗೈಡ್ಸ್) ಬಿ.ವಿ ರಾಮಲತಾ, ರಾಜ್ಯ ಕೋಶಾಧಿಕಾರಿ ಟಿ.ಪ್ರಭಾಕರ್, ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ, ಜಂಟಿ ರಾಜ್ಯ ಕಾರ್ಯದರ್ಶಿ (ಸ್ಕೌಟ್ಸ್) ಎಂ.ಎಸ್ ಸತೀಶ್, (ಗೈಡ್ಸ್) ಡಾ. ಸಿ.ವಿ ಕೃಷ್ಣಾ ವಿಜಯ್, ರಾಜ್ಯ ಸಂಘಟನಾ ಆಯುಕ್ತ (ಸ್ಕೌಟ್ಸ್) ಎಂ ಪ್ರಭಾಕರ್ ಭಟ್, (ಗೈಡ್ಸ್) ಸಿ.ಮಂಜುಳಾ ಹಾಗೂ ರೇಂಜರಿAಗ್ ಮತ್ತು ಕಲ್ಯಾಣ ಕರ್ನಾಟಕ ಎಎಸ್‌ಓಸಿ (ಗೈಡ್ಸ್) ಮಲ್ಲೇಶ್ವರಿ ಜುಜಾರೆ ಸೇರಿದಂತೆ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ