ಸೋಮವಾರ, ಜನವರಿ 12, 2026
ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
ಬಳ್ಳಾರಿ,ಜ.12(ಕರ್ನಾಟಕ ವಾರ್ತೆ):
ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ