ಶುಕ್ರವಾರ, ಜನವರಿ 2, 2026

ಜ.21, 22 ರಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಬಳ್ಳಾರಿಗೆ

ಬಳ್ಳಾರಿ,ಜ.02(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಜ.21, 22 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜ.20 ರಂದು ಸಂಜೆ 07 ಗಂಟೆಗೆ ಬಳ್ಳಾರಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಜ.21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 03 ಗಂಟೆಗೆ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಕೋಮು ಸೌಹಾರ್ದತೆ, ದ್ವೇಷ ಭಾಷಣಕ್ಕೆ ಸಂಬAಧಿಸಿದAತೆ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಷ್ಠಾನ ಮತ್ತು ಜಿಲ್ಲಾ ಪೊಲೀಸ್ ಕಂಪ್ಲೇAಟ್ ಅಥಾರಿಟಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬAಧಿಸಿದ ದೂರುಗಳ ಇತ್ಯರ್ಥದ ಪರಿಶೀಲನೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು. ಜ.22 ರಂದು ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರೊAದಿಗೆ ಸಭೆ ನಡೆಸುವರು. ಬಳಿಕ ಮಧ್ಯಾಹ್ನ 03 ಗಂಟೆಗೆ ಅಲ್ಪಸಂಖ್ಯಾತರ ಇಲಾಖೆಯ ಸಂಸ್ಥೆಗಳು, ಉರ್ದು ಶಾಲೆಗಳು, ಅಂಗನವಾಡಿ ಕೇಂದ್ರ ಮತ್ತು ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವರು. ನಂತರ ವಾಸ್ತವ್ಯ ಮಾಡುವರು. ಜ.23 ರಂದು ಬೆಳಿಗ್ಗೆ 09.30 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ