ಬುಧವಾರ, ಜನವರಿ 21, 2026

ಬಳ್ಳಾರಿ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ: ಜ.22 ರಂದು ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಜ.21(ಕರ್ನಾಟಕ ವಾರ್ತೆ): ಬಳ್ಳಾರಿ ನಗರದ ಶ್ರೀ ಕೋಟೆ ಮಲ್ಲೇಶ್ವರ ಜಾತ್ರಾ ಮಹೋತ್ಸವವು ಫೆ.01 ರಂದು ಜರುಗಲಿದ್ದು, ಸಾರ್ವಜನಿಕರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ನೈರ್ಮಲೀಕರಣ, ಸ್ವಚ್ಛತೆ, ಬಂದೋಬಸ್ತ್, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ, ದರ್ಶನ, ಧಾರ್ಮಿಕ ಕಾರ್ಯಕ್ರಮಗಳ ಕುರಿತು ಆಚ್ಚುಕಟ್ಟಾಗಿ ಆಯೋಜನೆ ಕುರಿತಂತೆ ಚರ್ಚಿಸಲು ಜ.22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ಪೂರ್ವಭಾವಿ ಸಿದ್ದತಾ ಸಭೆ ಏರ್ಪಡಿಸಲಾಗಿದೆ ಎಂದು ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯವರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ