ಶುಕ್ರವಾರ, ಜನವರಿ 23, 2026
ಜ.24 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.23(ಕರ್ನಾಟಕ ವಾರ್ತೆ)
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ದುರಸ್ಥಿ, ಕಬ್ಬಿಣದ ಕಂಬಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.24 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎಫ್-24 ವ್ಯಾಪ್ತಿಯ ನಗರದ ಬಂಡಿಮೋಟ್, ಬಾಪೂಜಿ ನಗರ, ಕುರಿ ಕಮೇಲ, ಕಮೇಲ ರಸ್ತೆ, ತೇರು ಬೀದಿ, ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ