ಗುರುವಾರ, ಜನವರಿ 22, 2026

ಜ.25 ರಂದು ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಭಾರತದ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ‘ನನ್ನ ಭಾರತ, ನನ್ನ ಮತ’ ಎನ್ನುವ ಘೋಷವಾಕ್ಯದಡಿ ಜ.25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ