ಶನಿವಾರ, ಜನವರಿ 17, 2026
ಜ.25 ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಜ.17(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜ.25 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ನಾವೀನ್ಯ ವಿಭಾಗದ ಡೀನ್ ಡಾ.ಮಂಜುನಾಥ.ಎಸ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಿರುಗುಪ್ಪ ತಾಲ್ಲೂಕಿನ ರಾರಾವಿಯ ಬಿ.ಚಿದಾನಂದ ಗವಾಯಿ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
*ಮೆರವಣಿಗೆ:*
ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ರೈಲ್ವೇ ನಿಲ್ದಾಣ ರಸ್ತೆ- ಹಳೆ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆಯ ವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ