ಬುಧವಾರ, ಜನವರಿ 21, 2026

ಜ.26 ರಂದು ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ,ಜ.21(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜ.26 ರಂದು ಬೆಳಿಗ್ಗೆ 09 ಗಂಟೆಗೆ ಬಿಎಂಸಿಆರ್‌ಸಿ ಮೈದಾನದಲ್ಲಿ ಏರ್ಪಡಿಸಲಾಗಿದೆ. ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸುವರು. ಇದಕ್ಕೂ ಮುನ್ನ ಸಚಿವರು, ಅಂದು ಬೆಳಿಗ್ಗೆ 08.20 ಕ್ಕೆ ಡಾ.ರಾಜ್ ಕುಮಾರ್ ಉದ್ಯಾನವನದ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು. ಬಳಿಕ ಬೆಳಿಗ್ಗೆ 09.05 ಕ್ಕೆ ಪಥ ಸಂಚಲನ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕಾರ ಮಾಡುವರು. ನಂತರ ಗಣರಾಜ್ಯೋತ್ಸವದ ಸಂದೇಶ ನೀಡುವರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತಿ ಇರುವರು. ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಸಭಾ ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಂದು ಬೆಳಿಗ್ಗೆ 10.10 ಗಂಟೆಗೆ ಬಿಎಂಸಿಆರ್‌ಸಿ ಮೈದಾನದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ